1 BHK Flat ₹9.7 Lakhs- ಸರ್ಕಾರದಿಂದ ಕೇವಲ ₹9.7 ಲಕ್ಷಕ್ಕೆ 1 ಬಿಎಚ್‌ಕೆ ಫ್ಲಾಟ್ | ಅರ್ಜಿ ಆಹ್ವಾನ

Spread the love

WhatsApp Group Join Now
Telegram Group Join Now

1 BHK Flat ₹9.7 Lakhs: ಕರ್ನಾಟಕ ಸರ್ಕಾರವು ರಾಜಧಾನಿ ಬೆಂಗಳೂರಿನಲ್ಲಿ ರಿಯಾಯ್ತಿ ದರದಲ್ಲಿ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಪ್ಲಾಟ್ ಹಂಚಿಕೆ ಮಡುತ್ತಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ…

ಸ್ವಂತ ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬ ನಾಗರಿಕನ ಕನಸು. ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮನೆ ಬೆಲೆಗಳು, ಕಡಿಮೆ ಮತ್ತು ಮಧ್ಯಮ ಆದಾಯದ ಜನರಿಗೆ ಈ ಕನಸನ್ನು ಸಾಕಾರಗೊಳಿಸುವುದು ಕಷ್ಟಕರವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ವಸತಿ ರಹಿತ ನಾಗರಿಕರಿಗಾಗಿ ಅತ್ಯಂತ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ.

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (Rajiv Gandhi Housing Corporation Limited – RGHCL) ಮೂಲಕ ಮುಖ್ಯಮಂತ್ರಿ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಅಡಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತೀ ಕಡಿಮೆ ದರದಲ್ಲಿ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಫ್ಲಾಟ್‌ಗಳನ್ನು ವಿತರಣೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಓದಿ: Karnataka CET Application Started 2026- ಸಿಇಟಿ ಅರ್ಜಿ ಸಲ್ಲಿಕೆೆ ಆರಂಭ | ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

Scheme Highlights – ಯೋಜನೆಯ ಪ್ರಮುಖ ವಿವರಗಳು

  • ಯೋಜನೆಯ ಹೆಸರು: ಮುಖ್ಯಮಂತ್ರಿ ಬಹುಮಹಡಿ ಬೆಂಗಳೂರು ವಸತಿ ಯೋಜನೆ
  • ಅನುಷ್ಠಾನ ಸಂಸ್ಥೆ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGHCL)
  • ಅನ್ವಯವಾಗುವವರು: ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ನಾಗರಿಕರು
  • ಫ್ಲಾಟ್ ಪ್ರಕಾರ: 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ
  • ಯೋಜನೆಯ ವ್ಯಾಪ್ತಿ: ಬೆಂಗಳೂರು ನಗರ ವ್ಯಾಪ್ತಿ

ಇದನ್ನು ಓದಿ: Bhu Odetan Yojana- ಸ್ವಂತ ಜಮೀನು ಖರೀದಿಸಲು ಸರ್ಕಾರದಿಂದ 12.50 ಲಕ್ಷ ರೂ. ವರೆಗೆ ಹಣಕಾಸು ನೆರವು!

Housing for All Goal – ‘ಎಲ್ಲರಿಗೂ ಮನೆ’ ಎಂಬ ಸರ್ಕಾರದ ಗುರಿ

ಕರ್ನಾಟಕ ಸರ್ಕಾರವು ‘ಎಲ್ಲರಿಗೂ ಸ್ವಂತ ಸೂರು’ ಎಂಬ ಉದ್ದೇಶದೊಂದಿಗೆ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಹಲವು ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ಈ ಉದ್ದೇಶವನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ರಾಜೀವ್ ಗಾಂಧಿ ವಸತಿ ನಿಗಮವನ್ನು ಸ್ಥಾಪಿಸಲಾಗಿದ್ದು, ನಿಗಮದ ಮೂಲಕ ಈಗಾಗಲೇ ಸಾವಿರಾರು ಕುಟುಂಬಗಳಿಗೆ ಮನೆ ಒದಗಿಸಲಾಗಿದೆ.

ಪ್ರಸ್ತುತ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡಿರುವ ಫ್ಲಾಟ್‌ಗಳನ್ನು ಅರ್ಹ ಫಲಾನುಭವಿಗಳಿಗೆ ಕಡಿಮೆ ಬೆಲೆಗೆ ನೀಡಲಾಗುತ್ತಿದೆ.

ಇದನ್ನು ಓದಿ: Agniveer Vayu Recruitment 2026- ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ವಾಯುಪಡೆ ಅಗ್ನಿವೀರರ್ ಹುದ್ದೆಗಳು

Bengaluru Housing Scheme – ಬಹುಮಹಡಿ ಬೆಂಗಳೂರು ವಸತಿ ಯೋಜನೆ ಎಂದರೇನು?

ಈ ಯೋಜನೆಯು ಮುಖ್ಯವಾಗಿ ಬೆಂಗಳೂರು ನಗರದಲ್ಲಿ ವಸತಿ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಪರಿಹಾರ ನೀಡುವ ಉದ್ದೇಶ ಹೊಂದಿದೆ. ಕರ್ನಾಟಕ ಸರ್ಕಾರದ ಸಹಕಾರದಿಂದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತವು ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

ಒಟ್ಟು 1 ಲಕ್ಷ ಬಹುಮಹಡಿ ಫ್ಲಾಟ್‌ಗಳನ್ನು ನಿರ್ಮಿಸಿ ವಿತರಣೆ ಮಾಡುವ ಗುರಿ ಹೊಂದಿದೆ. ಈ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ (EWS) ಮತ್ತು ಮಧ್ಯಮ ವರ್ಗದ (MIG) ನಾಗರಿಕರಿಗೆ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಮನೆಗಳನ್ನು ಕಡಿಮೆ ದರದಲ್ಲಿ ಒದಗಿಸಲಾಗುತ್ತಿದೆ.

1 BHK Flat ₹9.7 Lakhs
1 BHK Flat ₹9.7 Lakhs

Flat Price – ಫ್ಲಾಟ್ ಬೆಲೆ ಎಷ್ಟು?

ಸರ್ಕಾರವು ಸಾಮಾಜಿಕ ನ್ಯಾಯವನ್ನು ಗಮನದಲ್ಲಿಟ್ಟುಕೊಂಡು ವಿಭಿನ್ನ ವರ್ಗದವರಿಗೆ ವಿಭಿನ್ನ ರೀತಿಯ ದರ ನಿಗದಿಪಡಿಸಿದೆ.

  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (SC/ST): ₹9.70 ಲಕ್ಷ
  • ಸಾಮಾನ್ಯ ವರ್ಗ: ₹10.50 ಲಕ್ಷ

ಈ ದರದಲ್ಲಿ ಬೆಂಗಳೂರಿನಲ್ಲಿ ಮನೆ ಪಡೆಯುವುದು ಸಾಮಾನ್ಯ ನಾಗರಿಕರಿಗೆ ದೊಡ್ಡ ಅವಕಾಶವೇ ಆಗಿದೆ.

ಇದನ್ನು ಓದಿ: Azim Premji Scholarship- ಅಜೀಂ ಪ್ರೇಮ್‌ಜಿ ವತಿಯಿಂದ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್‌ಶಿಪ್ | ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

Eligibility Criteria – ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು

WhatsApp Group Join Now
Telegram Group Join Now

ಈ ಯೋಜನೆಯಡಿ ಫ್ಲಾಟ್ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಅರ್ಹತಾ ಮಾನದಂಡಗಳನ್ನು ಪೂರೈಸಿರಬೇಕು:

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
  • ವಸತಿ ರಹಿತ ನಾಗರಿಕರು ಮಾತ್ರ ಅರ್ಜಿ ಸಲ್ಲಿಸಬಹುದು
  • ಆರ್ಥಿಕವಾಗಿ ಹಿಂದುಳಿದ ಅಥವಾ ಮಧ್ಯಮ ವರ್ಗಕ್ಕೆ ಸೇರಿದವರಾಗಿರಬೇಕು
  • ಈಗಾಗಲೇ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ಮನೆ ಪಡೆದಿರಬಾರದು

ಇದನ್ನು ಓದಿ: SBI Digital Personal Loan- ಎಸ್‌ಬಿಐ ಡಿಜಿಟಲ್ ಪರ್ಸನಲ್ ಲೋನ್ | ₹35 ಲಕ್ಷದ ವರೆಗೆ ಸಾಲ ಸೌಲಭ್ಯ | ಸಂಪೂರ್ಣ ಮಾಹಿತಿ ಇಲ್ಲಿದೆ…

Online Application Process – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಅಭ್ಯರ್ಥಿಗಳು ಸಂಪೂರ್ಣವಾಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಕೆಳಗಿನ ಹಂತಗಳನ್ನು ಅನುಸರಿಸಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು:

ಹಂತ-1: ಮೊದಲು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಅಧಿಕೃತ Housing Scheme Online Application ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ-2: ಮುಖಪುಟದಲ್ಲಿ ಕಾಣುವ ‘ಮುಖ್ಯಮಂತ್ರಿ ಬಹುಮಹಡಿ ಬೆಂಗಳೂರು ವಸತಿ ಯೋಜನೆ – ಆನ್‌ಲೈನ್ ಅರ್ಜಿ’ ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ-3: ನಂತರ ‘ಅರ್ಜಿ ಸಲ್ಲಿಕೆ’ ಆಯ್ಕೆ ಮಾಡಿ. ಇಲ್ಲಿ ಆಧಾರ್ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆ, ಹೆಸರು ಮತ್ತು OTP ನಮೂದಿಸಿ ಲಾಗಿನ್ ಆಗಬೇಕು.

ಹಂತ-4: ಅರ್ಜಿ ನಮೂನೆ ತೆರೆದುಕೊಂಡ ಬಳಿಕ ಕೇಳಲಾಗುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ Submit ಬಟನ್ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನು ಓದಿ: KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ

Required Documents – ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

ಅರ್ಜಿಯೊಂದಿಗೆ ಕೆಳಗಿನ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯ:

  • ಅರ್ಜಿದಾರರ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ
  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವೋಟರ್ ಐಡಿ / ರೇಷನ್ ಕಾರ್ಡ್
  • ನಿಗಮದಿಂದ ಕೇಳುವ ಇತರೆ ಅಗತ್ಯ ದಾಖಲೆಗಳು

Helpline & Contact Details – ಸಹಾಯವಾಣಿ ಮತ್ತು ಸಂಪರ್ಕ ಮಾಹಿತಿ

ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಅಥವಾ ಅರ್ಜಿ ಸಲ್ಲಿಕೆಯಲ್ಲಿ ತೊಂದರೆ ಎದುರಾದರೆ ಕೆಳಗಿನ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು:

  • ವಾಟ್ಸಾಪ್ ಸಹಾಯವಾಣಿ: 9739774666
  • ಸಹಾಯವಾಣಿ ಸಂಖ್ಯೆಗಳು: 9449470346 / 9448023918

ಬೆಂಗಳೂರು ನಗರದಲ್ಲಿ ಸ್ವಂತ ಮನೆ ಹೊಂದುವುದು ಅನೇಕರಿಗೆ ಕನಸಾಗಿಯೇ ಉಳಿದಿದೆ. ಆದರೆ ಸರ್ಕಾರದ ಈ ಯೋಜನೆಯ ಮೂಲಕ ಕಡಿಮೆ ಬೆಲೆಗೆ 1 ಬಿಎಚ್‌ಕೆ ಅಥವಾ 2 ಬಿಎಚ್‌ಕೆ ಫ್ಲಾಟ್ ಪಡೆಯುವ ಅವಕಾಶ ದೊರಕಿದೆ. ನೀವು ಅರ್ಹರಾಗಿದ್ದರೆ, ಈ ಅವಕಾಶವನ್ನು ಕೈಮಿಡಿಯದೆ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಿ.

Low Interest Loan Eligibility- ಕಡಿಮೆ ಬಡ್ಡಿ ಸಾಲ ಪಡೆಯುವ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ


Spread the love
error: Content is protected !!