ಏಪ್ರಿಲ್ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುವ ಹಿನ್ನಲೆಯಲ್ಲಿ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ನಾಳೆಯಿಂದ (ಏಪ್ರಿಲ್ 24) ದ್ವಿತೀಯ ಪಿಯುಸಿ ಪರೀಕ್ಷೆ-2 (PUC Exam-2) ಆರಂಭವಾಗಲಿದೆ. ಮೇ 8ರ ವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಬರೆಯಲಿದ್ದಾರೆ. ಈಗಾಗಲೇ ಪರೀಕ್ಷೆ-1 (PUC Exam-1) ಯಶಸ್ವಿಯಾಗಿ ಮುಕ್ತಾಯವಾಗಿ ಫಲಿತಾಂಶ ಕೂಡ ಪ್ರಕಟವಾಗಿದೆ.
ಈ ಫಲಿತಾಂಶದಲ್ಲಿ ಅನುತ್ತೀರ್ಣ ಅಥವಾ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವಾಗಿ ಪರೀಕ್ಷೆ-2 ಅನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಆಯೋಜಿಸಿದೆ. ಈ ಹಿನ್ನಲೆಯಲ್ಲಿ ಮಂಡಳಿಯು ಹಲವು ಮಾರ್ಗಸೂಚಿಗಳು ಹಾಗೂ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ.
SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ
ಪರೀಕ್ಷಾ ಅವಧಿಯಲ್ಲಿನ ಮುನ್ನೆಚ್ಚರಿಕಾ ಕ್ರಮಗಳು
ಈ ಬಾರಿ ಪರೀಕ್ಷೆ ಸರಳವಾಗಿ ನಡೆಯಲು ಸರ್ಕಾರದಿಂದ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾ ಕೇಂದ್ರದಿAದ ಹಿಡಿದು ತಾಲ್ಲೂಕು ಮಟ್ಟದ ವರೆಗೆ ಎಲ್ಲ ಅಧಿಕಾರಿಗಳು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ.
- ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೂ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕು.
- ಪ್ರಶ್ನೆಪತ್ರಿಕೆಗಳನ್ನು ಡಿಪೋದಿಂದ ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವೇಳೆ ಪೊಲೀಸರ ಸಹಾಯವನ್ನು ಪಡೆಯಲಾಗುವುದು.
- ಪ್ರಶ್ನೆಪತ್ರಿಕೆ ಸಾಗಣೆಗಾಗಿ ಭದ್ರತಾ ವಾಹನಗಳನ್ನು ಬಳಸಲಾಗುತ್ತಿದ್ದು, ಇವೆಲ್ಲಕ್ಕೆ ಜಿಪಿಎಸ್ ಅಳವಡಿಸಲು ಸೂಚಿಸಲಾಗಿದೆ.
- ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲಾಗುವುದು.
- ಪರೀಕ್ಷೆ ನಡೆಯುವ ಸಮಯದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಸಿಸಿಟಿವಿ ಮತ್ತು ವೆಬ್ ಕಾಸ್ಟಿಂಗ್ ವ್ಯವಸ್ಥೆ
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ತೆರೆಯುವ, ಉತ್ತರ ಪತ್ರಿಕೆಗಳನ್ನು ಪ್ಯಾಕ್ ಮಾಡುವ ಎಲ್ಲ ಕಾರ್ಯಗಳನ್ನು ಸಿಸಿ ಟಿವಿ ಮೇಲ್ವಿಚಾರಣೆಯಡಿಯಲ್ಲಿ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿಯೊಂದು ಕೊಠಡಿಗೂ ಸಿಸಿ ಟಿವಿ ಅಳವಡಿಸಿ, ಮೇಲ್ವಿಚಾರಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿಯಲ್ಲಿರಲಿದೆ.

Ration Card eKYC- ರೇಷನ್ ಕಾರ್ಡ್ ಹೊಂದಿರುವರರಿಗೆ ಸರ್ಕಾರದ ಪ್ರಮುಖ ಎಚ್ಚರಿಕೆ | ಸಂಪೂರ್ಣ ಮಾಹಿತಿ ಇಲ್ಲಿದೆ…
ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು
- ವಿದ್ಯಾರ್ಥಿಗಳು ಪರೀಕ್ಷೆಗೆ ಅನುಮತಿ ಪತ್ರ (Hall Ticket) ಹಾಗೂ ಪೆನ್, ಪೆನ್ಸಿಲ್ ಮುಂತಾದ ಉಪಕರಣಗಳು ಮಾತ್ರ ತೆಗೆದುಕೊಂಡು ಬರಬೇಕು.
- ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಉಪಕರಣಗಳು, ಇತರ ಎಲೆಕ್ಟ್ರಾನಿಕ್ ಸಾಧನಗಳು ನಿಷೇಧಿಸಲಾಗಿದೆ.
- ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ, ಸಂಜ್ಞೆ ಮೂಲಕ ಮಾಹಿತಿ ಪಸರಿಸುವ ಕ್ರಿಯೆಗಳು ಅಪರಾಧವೆಂದು ಪರಿಗಣಿಸಲಾಗುತ್ತದೆ.
- ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಅಥವಾ ಮಾರಕ ಆಯುಧಗಳು ಪರೀಕ್ಷಾ ಕೇಂದ್ರದ ಸುತ್ತಲೂ ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
- ಪರೀಕ್ಷಾ ದಿನಗಳಲ್ಲಿ, ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣ ಮಾಡಬಹುದು.
ಸಿಬ್ಬಂದಿಗೆ ನಿಗದಿಪಡಿಸಿದ ನಿಯಮಗಳು
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಗೈರು ಹಾಜರಾದ ವಿದ್ಯಾರ್ಥಿಗಳ ವಿವರವನ್ನು ತಕ್ಷಣವೇ ಆನ್‌ಲೈನ್‌ನಲ್ಲಿ ದಾಖಲಿಸಬೇಕು. ಪರೀಕ್ಷಾ ಸಿಬ್ಬಂದಿಗಳು ಕೂಡ ಮೊಬೈಲ್ ಬಳಸಲು ಅನುಮತಿ ಇಲ್ಲ. ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಅನ್ನು ಮಾತ್ರ ಮುಖ್ಯ ಅಧೀಕ್ಷಕರು ತೆಗೆದುಕೊಂಡು ಹೋಗಬಹುದು.
Blue Aadhaar Card- ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು? ಮಹತ್ವದ ಮಾಹಿತಿ ಇಲ್ಲಿದೆ…
ದ್ವಿತೀಯ ಪಿಯುಸಿ ಪರೀಕ್ಷೆ 2 ವೇಳಾಪಟ್ಟಿ
- ಏಪ್ರಿಲ್ 24- ಕನ್ನಡ, ಅರೇಬಿಕ್
- ಏಪ್ರಿಲ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
- ಏಪ್ರಿಲ್ 26- ಇತಿಹಾಸ, ಭೌತಶಾಸ್ತ್ರ
- ಏಪ್ರಿಲ್ 28- ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
- ಏಪ್ರಿಲ್ 29- ಇಂಗ್ಲೀಷ್
- ಮೇ 02- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ
- ಮೇ 03- ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
- ಮೇ 05- ಅರ್ಥಶಾಸ್ತ್ರ
- ಮೇ 06- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
- ಮೇ 07- ಹಿಂದಿ
- ಮೇ 08- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸಿ, ಯಾವುದೇ ನಿಯಮ ಉಲ್ಲಂಘನೆ ಮಾಡದೇ ಪರೀಕ್ಷೆ ಬರೆಯುವುದು ಅತ್ಯಗತ್ಯ. ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಈ ನಿಯಮಗಳನ್ನು ಪಾಲಿಸುವಂತೆ ವಿದಾರ್ಥಿಗಳಿಗೆ ಪ್ರೇರೇಪಿಸಬೇಕು. ಸರ್ವರಿಗೂ ಶುಭವಾಗಲಿ… ಯಶಸ್ಸು ನಿಮ್ಮದಾಗಲಿ…
SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.