ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ (Backward Classes) ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ (Pre-Matric Hostels) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Backward Classes Welfare Department) ಪ್ರತಿವರ್ಷದಂತೆ ಈ ವರ್ಷವೂ ಮೆಟ್ರಿಕ್ ಪೂರ್ವ ಹಂತದ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ (ಹಾಸ್ಟೆಲ್‌ಗಳಲ್ಲಿ) ಪ್ರವೇಶ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ರಾಜ್ಯದಲ್ಲಿ ಬಾಲಕರ 993 ಮತ್ತು ಬಾಲಕಿಯರ 284 ಸೇರಿ ಒಟ್ಟು 1,277 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು; ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಸತಿ, ಆಹಾರ ಹಾಗೂ ಅಧ್ಯಯನದ ಉತ್ತಮ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.
ವರ್ಗವಾರು ಆದಾಯ ಮಿತಿ ಎಷ್ಟಿರಬೇಕು?
- ಪ್ರವರ್ಗ-1, ಪ.ಜಾ (SC) ಮತ್ತು ಪ.ಪಂ (ST): ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ರೂ. 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳು: ಪೋಷಕರ ವಾರ್ಷಿಕ ಆದಾಯ ರೂ. 1 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
- ಆಧಾರ್ ಕಾರ್ಡ್
- ಪಾಸ್‌ಪೋರ್ಟ್ ಗಾತ್ರದ ಇತ್ತೀಚಿನ ಫೋಟೋ
- ಶೈಕ್ಷಣಿಕ ಅರ್ಹತಾ ಪ್ರಮಾಣ ಪತ್ರಗಳು (ಉದಾ: ಹಿಂದಿನ ತರಗತಿಯ ಮಾರ್ಕ್ ಶೀಟ್)
- ಎಸ್‌ಎಸ್‌ಪಿ (SSP) ಐಡಿ
- ಜಾತಿ ಪ್ರಮಾಣ ಪತ್ರ (ತಹಸೀಲ್ದಾರ್ ಅಥವಾ ಮಾನ್ಯತೆ ಪಡೆದ ಅಧಿಕಾರಿಯಿಂದ ಪಡೆಯಬೇಕು)
- ಆದಾಯ ಪ್ರಮಾಣ ಪತ್ರ (ಇತ್ತೀಚಿನದಾಗಿರಬೇಕು)
- ವಾಸಸ್ಥಳ ದೃಢೀಕರಣ ಪತ್ರ

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ shp.karnataka.gov.in/ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಜಾಲತಾಣದ ಅರ್ಜಿ ಸಲ್ಲಿಕೆ ವಿಭಾಗದಲ್ಲಿ ‘ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶ ಅರ್ಜಿ 2025-26’ ಆಯ್ಕೆ ಮಾಡಿ, ನಿಗದಿತ ಹಂತದಂತೆ ವಿವರಗಳನ್ನು ನಮೂದಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-05-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-06-2025
ಕೊನೆಯ ದಿನಾಂಕದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಕೆಗೆ ಯಾವುದೇ ತಾಂತ್ರಿಕ ತೊಂದರೆ ಕಂಡು ಬಂದರೆ ಅಥವಾ ಯಾವುದೇ ಸಹಾಯ ಬೇಕಾದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆಗೆ ವಿಶೇಷ ಸೂಚನೆಗಳು
ಅರ್ಜಿ ಸಲ್ಲಿಸುವ ಮೊದಲು ರಾಜ್ಯದ ವಿವಿಧ ತಾಲ್ಲೂಕು ಹಾಸ್ಟೆಲ್’ಗಳ ವಿವರ ಹಾಗೂ ಹಾಸ್ಟೆಲ್ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಅರ್ಜಿ ಸಲ್ಲಿಲು ಬೇಕಾಗುವ ದಾಖಲೆಗಳನ್ನು ಇಲಾಖೆಯ https://bcwd. karnataka.gov.in ವೆಬ್‌ಸೈಟ್ ಭೇಟಿ ನೀಡಿ ಪರಿಶೀಲಿಸಬಹುದು.
ಅರ್ಜಿ ಸಲ್ಲಿಸಲು ಏನಾದರೂ ತಾಂತ್ರಿಕ ತೊಂದರೆಗಳು ಉಂಟಾದರೆ bcwdhelpline@ gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.
ಸಹಾಯವಾಣಿ ಸಂಖ್ಯೆಗಳು: 8050770004 / 8050770005
ಈ ಹಾಸ್ಟೆಲ್ ಪ್ರವೇಶ ಯೋಜನೆ, ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಅತ್ಯುತ್ತಮ ಅವಕಾಶವಾಗಿದೆ. ರಾಜ್ಯದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸರ್ಕಾರದ ಈ ನೆರವು ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೇ, ತಕ್ಷಣವೇ ಅರ್ಜಿ ಸಲ್ಲಿಸಿ…
ಅರ್ಜಿ ಸಲ್ಲಿಕೆ ಲಿಂಕ್: Apply Now
E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ