Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಗಿದಿದೆ.
ಇದೀಗ ಮತ್ತಷ್ಟು ಸರಕಾರಿ ಹುದ್ದೆಗಳ (Govt Jobs) ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದೆ. ಈಗಾಗಲೇ ಅರಣ್ಯ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳು ಕೆಪಿಎಸ್‌ಸಿಗೆ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿವೆ. ಇದೀಗ ಈ ಸಾಲಿಗೆ ಮತ್ತೊಂದು ಇಲಾಖೆ ಸೇರ್ಪಡೆಗೊಂಡಿದ್ದು; ಕೃಷಿ ಇಲಾಖೆಯು (Agriculture Dept) ಕೆಲವು ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಿಕೊಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ.
ಯಾವ್ಯಾವ ಹುದ್ದೆಗಳ ನೇಮಕಾತಿ ನಡೆಯಲಿದೆ?
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಎಲ್ಲ ಹಂತದ ಹಲವು ಹುದ್ದೆಗಳು ಖಾಲಿ ಇದ್ದು; ವರ್ಷಗಳಿಂದ ಇವುಗಳ ಭರ್ತಿಗೆ ಆಗ್ರಹಗಳು ಕೇಳಿ ಬರುತ್ತಿವೆ. ಇದೀಗ ಮೊದಲ ಹಂತದಲ್ಲಿ ಖಾಲಿ ಇರುವ ಟೈಪಿಸ್ಟ್ (Typist Jobs), ಪ್ರಥಮ ದರ್ಜೆ ಸಹಾಯಕರು (SDA Jobs) ಹಾಗೂ ದ್ವಿತೀಯ ದರ್ಜೆ ಸಹಾಯಕರು (FDA Jobs) ಹುದ್ದೆಗಳ ಭರ್ತಿಗಾಗಿ ಕೃಷಿ ಇಲಾಖೆಯು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ.
ಕಳೆದ ಮೇ ತಿಂಗಳಲ್ಲಿ ಕೃಷಿ ಇಲಾಖೆಯು ಹೈದರಾಬಾದ್ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ (Competitive Exam) ನಡೆಸಿಕೊಡಬೇಕೆಂದು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಎಷ್ಟೆಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ ಎಂಬ ನಿರ್ಧಿಷ್ಟ ಮಾಹಿತಿಯನ್ನು ಅಧಿಸೂಚನೆ ಪ್ರಕಟಗೊಂಡ ನಂತರ ತಿಳಿಯಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿಯೇ ಕೃಷಿ ಇಲಾಖೆಯ ಟೈಪಿಸ್ಟ್, ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ನೇಮಕ ನಡೆಯಲಿದೆ. ಈ ಕೆಳಗಿನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈಗಿನಿಂದಲೇ ರ್ಸ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಬಹುದಾಗಿದೆ.
ಕೃಷಿ ಇಲಾಖೆಯ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇಲ್ಲವೇ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities
ಇನ್ನು ದ್ವಿತೀಯ ದರ್ಜೆ ಸಹಾಯಕರು (ಎಸ್‌ಡಿಎ) ಹುದ್ದೆಗಳಿಗೆ ಯಾವುದೇ ವಿಷಯ ಸಂಯೋಜನೆಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪದವಿ ಪಾಸ್ ಮಾಡಿರುವ ಅಭ್ಯರ್ಥಿಗಳು ಪ್ರಥಮ ದರ್ಜೆ ಸಹಾಯಕರು (ಎಫ್‌ಡಿಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಕೃಷಿ ಇಲಾಖೆಯು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದು ಶೀಘ್ರದಲ್ಲಿಯೇ ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಮೇಲ್ಕಾಣಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಬಹುದಾಗಿದೆ. ಈ ಹುದ್ದೆಗಳ ಸಮಗ್ರ ಅಧಿಸೂಚನೆ ಹಾಗೂ ಇತರ ಮಾಹಿತಿಗಳ ಅಪ್ಡೇಟ್‌ಗಾಗಿ ಮಾಹಿತಿ ಮನೆ ವಾಟ್ಸಾಪ್ ಗ್ರುಪ್ ಸೇರಿಕೊಳ್ಳಿ…
ವಿಶೇಷ ಸುದ್ದಿ, ಸರಕಾರಿ ಯೋಜನೆ, ಉದ್ಯೋಗ ಮಾಹಿತಿ, ಕೃಷಿ, ತೋಟಗಾರಿಕೆ, ಪಶುಪಾಲನೆ ಸಹಾಯಧನ, ಸೌಲಭ್ಯಗಳ ಸ್ವಾರಸ್ಯಕರ ಸುದ್ದಿಗಳನ್ನು ಪಡೆಯಲು ಹಾಗೂ ನಮ್ಮ ವಾಟ್ಸಾಪ್ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
Any job opportunity