ಕರ್ನಾಟಕ ಸರ್ಕಾರ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ‘ಅರಿವು ಶಿಕ್ಷಣ ಸಾಲ’ಕ್ಕೆ (Arivu Education Loan) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಾತಿ-ಸಮುದಾಯ ನಿಗಮಗಳ ಮೂಲಕ ವಿದ್ಯಾರ್ಥಿಗಳಿಗೆ ‘ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಸಾಲ ಮಂಜೂರು ಮಾಡುತ್ತಿದೆ. ಈ ಯೋಜನೆಯಡಿ ವೃತ್ತಿಪರ ಶಿಕ್ಷಣವನ್ನು ಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಅಂದರೆ ಶೇಕಡಾ 2ರ ಬಡ್ಡಿದರದಲ್ಲಿ ಗರಿಷ್ಠ ₹5 ಲಕ್ಷದ ವರೆಗೆ ಸಾಲ ಪಡೆಯಲು ಅವಕಾಶವಿದೆ.
ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತವೈದ್ಯಕೀಯ ಮುಂತಾದ 28 ಕೋರ್ಸುಗಳಿಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಾಲದ ಮೂಲಕ ಆರ್ಥಿಕ ನೆರವು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯುವ ಕುರಿತ ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಬೇಕಾಗುವ ಅರ್ಹತೆಗಳು
- ಅಭ್ಯರ್ಥಿ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಯ ವಯಸ್ಸು 30 ವರ್ಷಕ್ಕಿಂತ ಕಡಿಮೆಯಾಗಿರಬೇಕು.
- ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3.5 ಲಕ್ಷ ಮಿತಿಯೊಳಗಿರಬೇಕು.
- ಸಿಇಟಿ ಅಥವಾ ನೀಟ್ ಮುಂತಾದ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿರುವ ವೃತ್ತಿಪರ ಕೋರ್ಸ್’ಗೆ ಪ್ರವೇಶ ಪಡೆದಿರಬೇಕು.
ಸಾಲದ ಮೊತ್ತ ಮತ್ತು ಬಡ್ಡಿದರ ವಿವರ
ಪ್ರತಿ ವರ್ಷಕ್ಕೆ ₹1 ಲಕ್ಷದಂತೆ ಕೋರ್ಸ್ ಅವಧಿಗೆ ₹4 ರಿಂದ ₹5 ಲಕ್ಷದ ವರೆಗೆ ಸಾಲ ದೊರೆಯುತ್ತದೆ. ಗಮನಾರ್ಹವೆಂದರೆ ಈ ಸಾಲವು ಕೇವಲ ಶೇಕಡಾ 2ರ ಬಡ್ಡಿದರದಲ್ಲಿ ಸಿಗುತ್ತದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ಕೆಳಗಿನ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದುದಾಗಿದೆ:
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮ
- ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮ
- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
- ನಿಜಗುಣ ಶರಣ ಅಂಬಿಗರ ಚೌಡಯ್ಯ ನಿಗಮ
- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ
- ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
ಅರ್ಜಿ ಸಲ್ಲಿಸುವ ವಿಧಾನ
‘ಅರಿವಿ‘ ಶಿಕ್ಷಣ ಸಾಲ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಶವಿದೆ. ನೇರವಾಗಿ ಸರ್ಕಾರದ ಸೇವಾಸಿಂಧು ವೆಬ್‌ಸೈಟ್ ಮೂಲಕ ಸ್ವತಃ ಮೊಬೈಲ್, ಲ್ಯಾಪ್‌ಡಾಪ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.
ಸೇವಾಸಿಂಧು ಅರ್ಜಿ ಲಿಂಕ್: Apply Now
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಕಾಲೇಜು ಶುಲ್ಕದ ವಿವರ (ಫೀಸ್ ರಶೀದಿಗಳು)
- ಹಿಂದಿನ ಶೈಕ್ಷಣಿಕ ಅಂಕಪಟ್ಟಿ
- ಪ್ರವೇಶ ಪತ್ರ/ಅಡ್ಮಿಷನ್ ಆರ್ಡರ್ ಪ್ರತಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್‌ಪೋರ್ಟ್ ಗಾತ್ರದ ಫೋಟೋ
- ಪ್ರಸ್ತುತ ಮೊಬೈಲ್ ನಂಬರ್
ಹೆಚ್ಚಿನ ಮಾಹಿತಿ ಅಥವಾ ಸಹಾಯಕ್ಕಾಗಿ ಸಂಬAಧಿಸಿದ ನಿಗಮದ ಜಿಲ್ಲಾ ಕಚೇರಿ ಅನ್ನು ಸಂಪರ್ಕಿಸಬಹುದು ಅಥವಾ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು:
- 080-22374832
- 8050770004
- 8050770005
ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ: ಜೂನ್ 30, 2025
ಅರ್ಜಿ ಸಲ್ಲಿಕೆಗೆ ಮೊದಲು ಎಲ್ಲ ದಾಖಲೆಗಳು ಸಿದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಿ. ಸಮಯಕ್ಕೆ ಅರ್ಜಿ ಸಲ್ಲಿಸಿ, ನಿಮ್ಮ ವಿದ್ಯಾಭ್ಯಾಸದ ಕನಸು ನನಸಾಗಿಸಿಕೊಳ್ಳಿ…
Education Loan- ₹10 ಲಕ್ಷದಿಂದ ₹60 ಲಕ್ಷದ ವರೆಗೆ ಶಿಕ್ಷಣ ಸಾಲ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.