ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ ಸಾಧ್ಯತೆ ಇದೆ.
ಜೂನ್ 10ರಿಂದ 11ರ ವರೆಗೆ ಸಾಧಾರಣ ಮಳೆಯಾಗಲಿದೆ. 30-40 ಕಿ.ಮೀ ವೇಗದ ಮಧ್ಯಮ ಗಾಳಿ ಬೀಸಲಿದೆ. ಇನ್ನು ಜೂನ್ 12ರಿಂದ 15ರ ವರೆಗೆ ಭಾರೀ ಮಳೆಯಾಗಲಿದ್ದು; 40-50 ಕಿ.ಮೀ ವೇಗದ ತೀವ್ರಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…
ಬಂಗಾಳಕೊಲ್ಲಿ ಸುಳಿಗಾಳಿ ಪರಿಣಾಮ
ಬಂಗಾಳಕೊಲ್ಲಿಯಲ್ಲಿ ಮೇಲ್ಮಟ್ಟದ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬAದಿದೆ.ಹವಾಮಾನ ಇಲಾಖೆ ಪ್ರಕಾರ, ಈ ಸುಳಿಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ನೈಋತ್ಯ ಮುಂಗಾರು ಚೇತರಿಕೆಗೆ ಇದು ಸಹಕಾರಿಯಾಗಲಿದೆ. ಕರ್ನಾಟಕದ ಒಳನಾಡಿನಲ್ಲಿ ‘ಟ್ರಫ್ ಲೈನ್’ ನಿರ್ಮಾಣವಾಗಿದೆ, ಇದು ಮಳೆ ವ್ಯಾಪ್ತಿ ಹೆಚ್ಚಳಕ್ಕೆ ಕಾರಣವಾಗಿದೆ.

ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮುನ್ಸೂಚನೆಗಳು
ಕರಾವಳಿ, ಮಲೆನಾಡು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ 100 ಮಿ.ಮೀ ಮೀರಿ ಮಳೆಯಾಗುವ ಸಾಧ್ಯತೆಯೂ ಇದೆ.
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯ ನಿರೀಕ್ಷೆ ಇದೆ.
ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ: ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ಯಾದಗಿರಿ, ಕಲಬುರಗಿ, ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತ: ಇನ್ನು ರಾಜಧಾನಿ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ದಿನದ ಬಳಿಕದ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು-ಮಿಂಚಿನ ಎಚ್ಚರಿಕೆ
ಹವಾಮಾನ ಇಲಾಖೆ ಪ್ರಕಾರ, ಜೂನ್ 12ರಿಂದ ಮಳೆಯ ತೀವ್ರತೆ ಹೆಚ್ಚುವಾಗುವ ನಿರೀಕ್ಷೆಯಿದ್ದು, ಈ ವೇಳೆ ಕೆಲವೆಡೆ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗಬಹುದು. ಜನರು ಈ ಅವಧಿಯಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಮುನ್ನೆಚ್ಚರಿಕೆ ನೀಡಿದೆ.
ಮಳೆ ಮುನ್ಸೂಚನೆಯ ಸತತ ನವೀಕರಣೆಗಾಗಿ ಈ ಪುಟವನ್ನು ಬುಕ್‌ಮಾರ್ಕ್ ಮಾಡಿಕೊಂಡು, ಸ್ಥಳೀಯ ಹವಾಮಾನ ಇಲಾಖೆಯ ಅಧಿಸೂಚನೆಗಳನ್ನು ಗಮನಿಸಿ. ಸುರಕ್ಷಿತವಾಗಿ ಇರಿ, ಮುಂಗಾರು ಸಮರ್ಥವಾಗಿ ನಿಭಾಯಿಸಿ…