ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ನಿನ್ನೆ ವಿಧಾನಸೌಧದಲ್ಲಿ (ಜೂನ್ 19) ಗೃಹಲಕ್ಷ್ಮಿ ಹಣ ತಡವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆಯಿಲ್ಲ. ಏಪ್ರಿಲ್ ತಿಂಗಳ ವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳು ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದಿದ್ದಾರೆ.
ಗೃಹಲಕ್ಷ್ಮಿ ಹಣ ತಡವಾಗುತ್ತಿರುವ ಪ್ರಮುಖ ಕಾರಣಗಳು
ಗೃಹಲಕ್ಷ್ಮಿ ಹಣ ಮೊದಲೆಲ್ಲ ನೇರವಾಗಿ ಹಣಕಾಸು ಇಲಾಖೆಯಿಂದ ಡಿಬಿಟಿ ಆಗುತ್ತಿತ್ತು. ಇತ್ತೀಚೆಗೆ ಈ ವ್ಯವಸ್ಥೆಯ ಬದಲು ಆಯಾ ತಾಲೂಕು, ಜಿಲ್ಲಾ ಪಂಚಾಯತಿಗಳ ಮೂಲಕ ಹಣ ಪಾವತಿಗೆ ವ್ಯವಸ್ಥೆ ಮಾಡಲಾಗಿದೆ.
ಈಗ ಹಣ ತಾಲೂಕು, ಜಿಲ್ಲಾ ಪಂಚಾಯತಿಗೆ ಸುತ್ತಾಡಿ ಬಿಡುಗಡೆ ಆಗಬೇಕಿದೆ. ಇದರಿಂದಾಗಿ ಒಂದು ವಾರ, ಎರಡು ವಾರ ತಡೆ ಆಗಬಹುದು ಅಷ್ಟೇ. ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಫಲಾನುಭವಿಗಳ ಪರಿಷ್ಕರಣೆ
ಇನ್ನು ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯಾಗಿ ಹೊಸ ವ್ಯವಸ್ಥೆ ರೂಪಿಸಲಾಗುತ್ತದೆ ಎಂಬ ವಿಚಾರವಾಗಿ ಸ್ಪಷ್ಟೀಕರಣ ನೀಡಿರುವ ಸಚಿವರು ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರೆಯುತ್ತದೆ ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗಾಗಿ ಹಣಕಾಸು ಇಲಾಖೆ ಪ್ರತಿ ತಿಂಗಳು ಹಣ ನೀಡುತ್ತಿದೆ. ಪ್ರತಿ ತಿಂಗಳು 10-15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ಈಗ 1.25 ಕೋಟಿ ಯಜಮಾನಿಯರು ಯೋಜನೆ ಅಡಿ ಇದ್ದಾರೆ. ನಮ್ಮ ಇಲಾಖೆಯಿಂದ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಹೇಗೆ ಇದೆಯೋ ಹಾಗೆಯೇ ಮುಂದುವರೆಯುತ್ತಿದೆ ಅಂತ ಸ್ಪಷ್ಟಪಡಿಸಿದ್ದಾರೆ.
ನಿಮಗಿನ್ನೂ ಹಣ ಬಂದಿಲ್ಲವೇ?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾಹಿತಿ ಪ್ರಕಾರ ಬಾಕಿ ಉಳಿದಿದ್ದ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಆದರೆ, ಬಹಳಷ್ಟು ಫಲಾನುಭವಿಗಳು ನಮಗಿನ್ನೂ ಹಣ ಜಮಾ ಆಗಿಲ್ಲ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಕೆಳಗಿನ ಕಾರಣಗಳಿಂದ ನಿಮಗೆ ಹಣ ಜಮೆ ಆಗದೇ ಇರುವ ಸಾಧ್ಯತೆ ಇದೆ:
- ಇ-ಕೆವೈಸಿ (e-KYC) ಪೂರ್ಣಗೊಂಡಿಲ್ಲ
- ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿಲ್ಲ
- ಬ್ಯಾಂಕ್ ಖಾತೆ ಸ್ಥಗಿತಗೊಂಡಿದೆ ಅಥವಾ ತಪ್ಪಾಗಿದೆ
- ರೇಷನ್ ಕಾರ್ಡ್ ಅಥವಾ ದಾಖಲೆಗಳಲ್ಲಿ ವ್ಯತ್ಯಾಸ
ಹಣ ಜಮಾ ಆಗದೇ ಇರುವವರು ಏನು ಮಾಡಬೇಕು?
NPCI Failure/ E-KYC Failure ಆಗಿದ್ದಲ್ಲಿ ಗೃಹಲಕ್ಷ್ಮೀ ಹಣ ವರ್ಗಾವಣೆ ಆಗುವುದಿಲ್ಲ. ಇಂತಹ ಫಲಾನುಭವಿಗಳು ನಿಮ್ಮ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಕಚೇರಿಗೆ ಭೇಟಿ ನೀಡಿ ಗೃಹಲಕ್ಷ್ಮೀ ಯೋಜನೆಯ Status ಪರಿಶೀಲನೆ ಮಾಡಿಸಿಕೊಳ್ಳಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಇಂತಹ ಸಮಸ್ಯೆಯಾಗಿರುವ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಗೂ ಪಾಸ್ ಬುಕ್ ತೆಗೆದುಕೊಂಡು ಸಿಡಿಪಿಒ ಕಚೇರಿಗೆ ಹೋಗಿ ಸರಿಪಡಿಸಿಕೊಳ್ಳಬಹುದು ಎಂದಿದ್ದಾರೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.