HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ.
ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates-HSRP) ಅಳವಡಿಕೆಗೆ ಸಂಬ೦ಧಿಸಿದ ಅರ್ಜಿ ವಿಚಾರಣೆ ವೇಳೆ ಈ ಆದೇಶ ಹೊರಬಿದ್ದಿದೆ. ಮುಂದಿನ ತಿಂಗಳು ಜುಲೈ 4ರ ವರೆಗೂ ವಾಹನ ಮಾಲೀಕರಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿನಾಯಿತಿ ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು 1.5 ಕೋಟಿಗೂ ಹೆಚ್ಚಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದ್ದು, ಈವರೆಗೆ 35 ರಿಂದ 40 ಲಕ್ಷ ವಾಹನಗಳು ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿವೆ. ಏತನ್ಮಧ್ಯೆ ಈ ಸಂಬ೦ಧ ಪ್ರಕರಣ ಹೈಕೋರ್ಟ್ ಮೆಟ್ಟಿಲು ಏರಿದ್ದರಿಂದ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ನಾಲ್ಕು ಬಾರಿ ಮುಂದೂಡಿ ಕಳೆದ ಜೂನ್ 12ನ್ನು ಅಂತಿಮ ದಿನವಾಗಿಸಲಾಗಿತ್ತು.
ಗಡುವು ವಿಸ್ತರಣೆ ಏಕೆ?
ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಮೂಲ ಉಪಕರಣ ತಯಾರಕ (OEM) ಅಧಿಕೃತ ಡೀಲರ್’ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ 17ರಂದು ಅಧಿಸೂಚನೆ ಹೊರಡಿಸಿತ್ತು.
ಕೇಂದ್ರ ಮೋಟಾರು ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (High Security Registration Manufacturers Association of India) ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿದ್ದವು.

ಈ ನಡುವೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಎಚ್‌ಎಸ್‌ಪಿಸಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ (BND ENERGY LIMITED) ಕೂಡ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇದೀಗ ಗಡುವು ವಿಸ್ತರಣೆಗೆ ಆದೇಶಿಸಿದೆ.
HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್’ಗಳನ್ನು ನೀವು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮೆನುಫಾಕ್ಚರ್’ (Society of Indian Automobile Manufacturers-SIAM) ಅಧಿಕೃತ ವೆಬ್‌ಸೈಟ್’ನಿಂದ ಮಾತ್ರ ಬುಕ್ ಮಾಡಿಕೊಳ್ಳಲು ಅವಕಾಶವಿದೆ. ಆನ್‌ಲೈನ್ ಮುಖಾಂತರ ಅರ್ಜಿ ಹಾಕಲು ಸಾಮಾನ್ಯವಾಗಿ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್ ಹಾಗೂ ವಾಹನದ ನಂಬರ್, ರಾಜ್ಯ ಸೇರಿದಂತೆ ಇನ್ನಿತರೇ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಬಳಿಕ ನಿಮ್ಮ ನಂಬರ್ ಪ್ಲೇಟ್ ಅನ್ನು ಹತ್ತಿರದ ಶೋ ರೂಂಗೆ ಡೆಲಿವರಿ ಮಾಡಿಸಿಕೊಂಡು, ಅಲ್ಲಿಂದ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತೊಂದರೆಯಲ್ಲಿ ನಿಮ್ಮ ಸಮೀಪದ ಆರ್‌ಟಿಓ ಕಚೇರಿಗೆ ಅಥವಾ ಶೋರೂಂ ಗೆ ಭೇಟಿ ನೀಡಿ ಸುಲಭವಾಗಿ ಪಡೆದುಕೊಳ್ಳಬಹುದು.
- HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ನಿಗದಿಸಿರುವ ಕೊನೆಯ ದಿನಾಂಕ : 04-07-2024
- ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ : Apply Now