
free Army job Training 2024 : ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿ (free Army job Training 2024) ನೀಡಲು ಕರ್ನಾಟಕ ಸರಕಾರ ಮುಂದಾಗಿದೆ. ಇದಕ್ಕಾಗಿ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ತೆರೆದಿದ್ದು; ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ ತರಬೇತಿ ಪಡೆದು ಸೇನೆಯಲ್ಲಿ ಉದ್ಯೋಗ ಪಡೆಯಬಹುದಾಗಿದೆ.
ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಭಾರತೀಯ ಸೇನೆ, ಕೇಂದ್ರೀಯ ಪೊಲೀಸ್ ಪಡೆ ಅಥವಾ ಇತರ ಸಮವಸ್ತ್ರ ಪೊಲೀಸ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಸೇನೆ ಸೇರುವ ಮುನ್ನ ವೃತ್ತಿ ಮಾರ್ಗದರ್ಶನದ ಬಗ್ಗೆ ಇಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಇದು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (backward classes welfare department karnataka) ಕಾರ್ಯಕ್ರಮವಾಗಿದ್ದು; ರಾಜ್ಯದ ಹಿಂದುಳಿದ ವರ್ಗಗಳಾದ ಪ್ರವರ್ಗ 1, 2ಎ, 3ಎ, ಹಾಗೂ 3ಬಿ ವರ್ಗಗಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಯು ಕನಿಷ್ಠ 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಶೇ.33 ಹಾಗೂ ಸರಾಸರಿ ಶೇ.45 ಅಂಕಗಳನ್ನು ಪಡೆದು ಪಾಸಾಗಿರಬೇಕು.
- ಅಭ್ಯರ್ಥಿಯ ಕುಟುಂಬದ ಗರಿಷ್ಠ ಆದಾಯ ಮಿತಿ ಪ್ರವರ್ಗ-1ಕ್ಕೆ 2.50 ಲಕ್ಷ ರೂಪಾಯಿ ಹಾಗೂ ಪ್ರವರ್ಗ 2ಎ, 3ಎ, 3ಬಿ ವರ್ಗಗಳಿಗೆ 1 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ.
- ಅಭ್ಯರ್ಥಿಯು 2024ರ ಜುಲೈ 10 ರಿಂದ 2007ರ 10 ಜುಲೈರ ನಡುವೆ ಜನಿಸಿರಬೇಕು. ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿರುವ೦ತೆ ಅಭ್ಯರ್ಥಿಗಳ ವಯಸ್ಸನ್ನು ಪರಿಗಣಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
ಮೇಲ್ಕಾಣಿದ ಅರ್ಹತೆಯುಳ್ಳ ಅಭ್ಯರ್ಥಿಗಳಿಗೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಚಿತ ತರಬೇತಿ ಕೇಂದ್ರಗಳನ್ನು ತೆರೆಯಲಾಗಿದ್ದು; ಆಸಕ್ತ ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳ ಪೈಕಿ ಒಂದನ್ನು ಆಯ್ದುಕೊಳ್ಳಬಹುದಾಗಿದೆ.
ಮೇಲ್ಕಾಣಿಸಿದ ಮೂರು ಜಿಲ್ಲೆಗಳ ಪೈಕಿ ಯಾವುದಾದರು ಒಂದು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆಯ ವಿಳಾಸ:
ಅಧಿಸೂಚನೆ : ಡೌನ್ಲೋಡ್
ಹೆಚ್ಚಿನ ಮಾಹಿತಿಗೆ : ಇಲ್ಲಿ ಒತ್ತಿ
ಮಾಹಿತಿಗೆ ಸಹಾಯವಾಣಿ :
ದಕ್ಷಿಣ ಕನ್ನಡ ಜಿಲ್ಲೆ : 0824-2225078
ಉಡುಪಿ ಜಿಲ್ಲೆ : 0820-2574881
ಉತ್ತರ ಕನ್ನಡ ಜಿಲ್ಲೆ : 08382-226589
Government Schemes for Women : ಮಹಿಳೆಯರಿಗಾಗಿ ಇರುವ ವಿಶೇಷ ಸರಕಾರಿ ಯೋಜನೆಗಳು
