ಯೂನಿಯನ್ ಬ್ಯಾಂಕ್‌ನಲ್ಲಿ 250 ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ (Union Bank Job) ಅರ್ಜಿ ಆಹ್ವಾನಿಸಲಾಗಿದೆ. ಇದು ಪದವೀಧರರಿಗೆ ಸುವರ್ಣಾವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದ್ದು, ಇದೀಗ 250 ವೆಲ್ತ್ ಮ್ಯಾನೇಜರ್ (Wealth Manager) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಬ್ಯಾಂಕಿಂಗ್ ವೃತ್ತಿಪರರಿಗೆ ತಮ್ಮ ಕರಿಯರ್ ಅನ್ನು ಮುಂದುವರಿಸಲು ಮತ್ತು ಆರ್ಥಿಕ ಸಲಹಾ ಕ್ಷೇತ್ರದಲ್ಲಿ ಮುಂದಿನ ಹೆಜ್ಜೆ ಇಡಲು ಇದು ಮಹತ್ವದ ಅವಕಾಶವಾಗಿದೆ.
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ಪದವಿಗಳಲ್ಲಿ ಯಾವುದೇ ಒಂದು ಹೊಂದಿರಬೇಕು:
- MBA (Master of Business Administration)
- MMS (Master of Management Studies)
- PGDBA (Post Graduate Diploma in Business Administration)
- PGDBM (Post Graduate Diploma in Business Management)
- PGPM (Post Graduate Programme in Management)
- PGDM (Post Graduate Diploma in Management)
ಸೂಚನೆ: ಈ ಕೋರ್ಸ್’ಗಳು ಫೈನಾನ್ಸ್, ಮಾರುಕಟ್ಟೆ, ಬ್ಯಾಂಕಿಂಗ್ ಅಥವಾ ವೆಲ್ತ್ ಮ್ಯಾನೇಜ್ಮೆಂಟ್ ಕ್ಷೇತ್ರಗಳಿಗೆ ಸಂಬಂಧಪಟ್ಟಿರಬೇಕು. ಅಭ್ಯರ್ಥಿಗಳು ಸಂಬAಧಿತ ಕ್ಷೇತ್ರದಲ್ಲಿ ಕನಿಷ್ಠ 2 ರಿಂದ 5 ವರ್ಷಗಳ ವೃತ್ತಿಪರ ಅನುಭವ ಹೊಂದಿರಬೇಕು.
ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-08-2025ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯಲ್ಲಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಕೆ ಅನ್ವಯವಾಗುತ್ತದೆ.
ವೇತನ ಶ್ರೇಣಿ ಮತ್ತು ಸೌಲಭ್ಯಗಳು
ಯೂನಿಯನ್ ಬ್ಯಾಂಕ್ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ₹64,820 ರಿಂದ ₹93,960 ನೀಡಲಾಗುವುದು. ಇದರ ಜೊತೆಗೆ ತುಟ್ಟಿ ಭತ್ಯೆ (DA), ವಿಶೇಷ ಭತ್ಯೆ, ಮನೆ ಬಾಡಿಗೆ ಭತ್ಯೆ (HRA) ಮತ್ತು ಇತರ ಬ್ಯಾಂಕ್‌ನ ಪರಿಗಣಿತ ಸೌಲಭ್ಯಗಳು ಸಿಗಲಿವೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಅರ್ಹರನ್ನು ಶಾರ್ಟ್ಲಿಸ್ಟಗೊಳಿಸಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಪರೀಕ್ಷೆಯಲ್ಲಿ 25 ಪ್ರಶ್ನೆ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್, 2ಡ್ರೀಸನಿಂಗ್, ಇಂಗ್ಲೀಷ್ ವಿಷಯಾಧರಿತ 25 ಪ್ರಶ್ನೆಗಳಿರಲಿವೆ. ಹುದ್ದೆಗೆ ಸಂಬಂಧಿಸಿದ ವೃತ್ತಿಪರ ಜ್ಞಾನಕ್ಕೆ ಸಂಬಂಧಿಸಿದ ವಿಷಯಾಧಾರಿತ 75 ಪ್ರಶ್ನೆಗಳಿಗೆ 75 ಅಂಕ ಇರಲಿವೆ.
ಪರೀಕ್ಷೆಯಲ್ಲಿ ಒಟ್ಟು 150 ಪ್ರಶ್ನೆಗಳಿಗೆ 225 ಅಂಕ ಇರಲಿದ್ದು 2.5 ತಾಸು ಸಮಯ ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆ ನಡೆಸದಿದ್ದರೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
- ಸಕ್ರಿಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ
- ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಸಹಿ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಅನುಭವದ ದಾಖಲೆಗಳು
ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ವಿವರ
ಯೂನಿಯನ್ ಬ್ಯಾಂಕ್ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ibpsonline.ibps.in ವೆಬ್‌ಸೈಟ್‌ಗೆ ಭೇಟಿ ನೀಡಿ ಆಗಸ್ಟ್ 25ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ ₹1,180 ಹಾಗೂ ಎಸ್‌ಸಿ/ಎಸ್‌ಟಿ, ಅಂಗವಿಕಲರು ಹಾಗೂ ಮಹಿಳೆಯರಿಗೆ ₹177 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಯೂನಿಯನ್ ಬ್ಯಾಂಕ್‌ನ ಈ ನೇಮಕಾತಿ ಪ್ರಕ್ರಿಯೆ ಆರ್ಥಿಕ, ಬ್ಯಾಂಕಿಂಗ್ ಮತ್ತು ವೆಲ್ತ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಮುಕ್ತಾಯದ ದಿನಾಂಕವನ್ನು ಗಮನದಲ್ಲಿಟ್ಟುಕೊಂಡು, ಸಾಧ್ಯವಾದಷ್ಟು ಬೇಗನೆ ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಕೆಯ ಕೊನೆ ದಿನ: 25-08-2025
- ಅಧಿಸೂಚನೆ: Download