ನಿನ್ನೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರ ಈ ವರ್ಷದ ಗೃಹಲಕ್ಷ್ಮಿ (Karnataka Gruhalakshmi) ಯೋಜನೆಯ 3ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2025-26ನೇ ಸಾಲಿನ ಮೂರನೇ ಕಂತಿನ ಹಣ ಇಂದು (ಆಗಸ್ಟ್ 8) ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ DBT (Direct Benefit Transfer) ಮೂಲಕ ನೇರವಾಗಿ ಜಮಾ ಮಾಡಲಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ವರಮಹಾಲಕ್ಷ್ಮೀ ಹಬ್ಬದ ಉಡುಗೊರೆ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರದ ಉಡುಗೊರೆ ನೀಡಿದೆ. ಮಹಿಳಾ ಫಲಾನುಭವಿಗಳಿಗೆ ಪ್ರತೀ ತಿಂಗಳು ನೀಡುವ ಮಾಸಿಕ 2,000 ರೂ. ಪ್ರೋತ್ಸಾಹಧನವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ.
ಇದು ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣವಾಗಿದ್ದು; ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಾಲಾ 2,000 ರೂ. ಪಾವತಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ

ನಿನ್ನೆ 40 ಲಕ್ಷಕ್ಕೂ ಹೆಚ್ಚು ಖಾತೆಗೆ ಹಣ ಜಮೆ
ನಿನ್ನೇ ಆಗಸ್ಟ್ 8ರ ಶುಕ್ರವಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ ಭತ್ಯೆಯನ್ನು ಆಯಾ ತಾಲೂಕು ಪಂಚಾಯಿತಿ ಮುಖೇನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆಯಾಗುತ್ತಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳ ಪ್ರಕಾರ ಯೋಜನೆಯಡಿ 1.23 ಕೋಟಿ ಅರ್ಹ ಫಲಾನುಭವಿಗಳಿದ್ದಾರೆ. ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗುತ್ತಿದ್ದು, ನಿನ್ನೆ ಶುಕ್ರವಾರ ಸಂಜೆ ವೇಳೆಗೆ 40 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎನ್ನಲಾಗಿದೆ.