ರಾಜ್ಯ ಸರ್ಕಾರ ಹೈನುಗಾರಿಕೆಗಾಗಿ 1.25 ಲಕ್ಷ ರೂ. ಸಹಾಯಧನ (Dairy Farming Subsidy) ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಯೋಜನೆಗಳ ಪ್ರಯೋಜನ ಪಡೆಯಲು ಪ್ರತೀ ವರ್ಷವೂ ಸರಕಾರ ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸುತ್ತದೆ. ಆ ಪ್ರಕಾರ 2025-2026ನೇ ಸಾಲಿನಲ್ಲಿ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ಯಾವೆಲ್ಲ ಯೋಜನೆಗಳು?
ಪ್ರಸಕ್ತ 2023-2024ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಭೂ ಒಡೆತನ ಯೋಜನೆ
- ಗಂಗಾ ಕಲ್ಯಾಣ ಯೋಜನೆ
- ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ)
- ಸ್ವಯಂ ಉದ್ಯೋಗ ನೇರಸಾಲ ಯೋಜನೆ
- ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ

ಹೈನುಗಾರಿಕೆಗೆ 1.25 ಲಕ್ಷ ರೂ. ಸಹಾಯಧನ
ಈ ಪೈಕಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ನೀಡಲಾಗುವ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಹೈನುಗಾರಿಕೆ ಹಾಗೂ ಇತರೆ ವ್ಯಾಪಾರ ಉದ್ದೇಶದ ಕಾರ್ಯಗಳಿಗೆ ಸಾಲ, ಸಬ್ಸಿಡಿ ಒದಗಿಸಲಾಗುತ್ತದೆ.
ಈ ಯೋಜನೆಗಳ ಪೈಕಿ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ ಅಥವಾ ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಆಸಕ್ತ, ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಯಾರೆಲ್ಲ ಅರ್ಹರು?
2025-2026ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ವಿಶೇಷ ಯೋಜನೆಯನ್ನು ಜಾರಿ ಮಾಡಲಾಗಿದ್ದು; ಈ ಕೆಳಕಂಡ ನಿಗಮಗಳ ಮೂಲಕ ಅನುಷ್ಟಾನಗೊಳಿಸಲಾಗಿದೆ.
- ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
- ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ
- ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಮೇಲ್ಕಾಣಿಸಿದ ನಿಗಮಗಳ ವ್ಯಾಪ್ತಿಗೆ ಒಳಪಡುವ ಎಲ್ಲಾ ಜಾತಿ, ಉಪಜಾತಿಯ ಫಲಾನುಭವಿಗಳು ಹೈನುಗಾರಿಕೆ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಎಲ್ಲಿ ಅರ್ಜಿ ಸಲ್ಲಿಕೆ ದಿನಾಂಕ ಮತ್ತು ವಿಧಾನ
ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಜನ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಯ ಸೌಲಭ್ಯವನ್ನು ಪಡೆಯಲು 10-09-2025 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಷ್ಟರೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ 2025-26ನೇ ಸಾಲಿನ ಸೌಲಭ್ಯ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೇಲ್ಕಾಣಿಸಿದ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ / ಎಸ್.ಟಿ ಸಹಾಯವಾಣಿ 9482-300-400 ಸಂಪರ್ಕಿಸಬಹುದು.