ನಾಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಂಭವವಿದ್ದು; ಕರ್ನಾಟಕದ ಹಲವೆಡೆ ಒಂದುವಾರ ವ್ಯಾಪಕ ಮಳೆಯಾಗಲಿದೆ (Ashlesha Male)
ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ…
ರಾಜ್ಯದಲ್ಲಿ ಆಶ್ಲೇಷ ಮಳೆ ಬಿರುಸಿನಿಂದ ಸುರಿಯುತ್ತಿದ್ದು; ನಾಳೆ ಆಗಸ್ಟ್ 13ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾದರೆ, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್ 17ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ.

ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಮೇಲ್ಕಾಣಿಸಿದ ಈ ಜಿಲ್ಲೆಗಳಿಗೆ ಆಗಸ್ಟ್ 13 ರಿಂದ 17ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಆಗಸ್ಟ್ 17ರ ವರೆಗೆ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ