Magha Rain Karnataka- ಮಘೆ ಮಳೆ ಅಬ್ಬರ | ಎಲ್ಲೆಡೆ ಇನ್ನೂ ಐದು ದಿನ ಭಾರೀ ಮಳೆ

Spread the love

ಆಗಸ್ಟ್ 17ರಿಂದ ಮಘೆ ಮಳೆ (Magha Rain Karnataka) ಆರಂಭವಾಗಿದ್ದು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…

WhatsApp Group Join Now
Telegram Group Join Now

ರಾಜ್ಯಾದ್ಯಂತ ಮಘೆ ಮಳೆ ಅಬ್ಬರ ಜೋರಾಗಿದೆ. ನಿನ್ನೆ ಆಗಸ್ಟ್ 17ರಿಂದ ಶುರುವಾಗಿರುವ ಮಘೆ ಮಳೆ ನಕ್ಷತ್ರ ಆರಂಭದಲ್ಲೇ ಅವುಡುಗಚ್ಚಿ ಸುರಿಯತೊಡಗಿದೆ. ಆಗಸ್ಟ್ 29ಕ್ಕೆ ಮಘೆ ಮಳೆ ನಕ್ಷತ್ರ ಮುಕ್ತಾಯವಾಗಲಿದ್ದು ಮುಂದಿನ ಐದು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ಹಲವು ಜಿಲ್ಲೆಗಳು ಈಗಾಗಲೇ ಪ್ರವಾಹ ಭೀತಿಯಲ್ಲಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

LIC Recruitment- LICಯ 841 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19 ಮತ್ತು 20ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಆಗಸ್ಟ್ 17ರಿಂದ ಮಘೆ ಮಳೆ ಆರಂಭವಾಗಿದ್ದು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ...
Magha Rain Karnataka
ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲೂ ಮಳೆ ಚುರುಕು

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಯೂ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ರೈತರು ಬೆಳೆ ಹಾನಿಯ ಭೀತಿಯಲ್ಲಿ ತತ್ತರಿಸುತ್ತಿದ್ದಾರೆ.

E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ಬೆಂಗಳೂರಿನಲ್ಲಿ ಮಳೆ ಅಬ್ಬರ

ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 21ರ ವರೆಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ನಗರದಲ್ಲಿ ಈಗಾಗಲೇ ಸಂಚಾರ ದಟ್ಟಣೆ, ರಸ್ತೆ ತಡೆ ಮತ್ತು ವಿದ್ಯುತ್ ವ್ಯತ್ಯಯದಂತಹ ಸಮಸ್ಯೆಗಳು ಹೆಚ್ಚುತ್ತಿವೆ. ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳಿಗೆ ರಜೆ

ತೀವ್ರ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಶಾಲೆಗಳಿಗೆ ಸೋಮವಾರ (ಆಗಸ್ಟ್ 18) ರಜೆ ಘೋಷಿಸಲಾಗಿದೆ. ಮಕ್ಕಳು ಹಾಗೂ ಪೋಷಕರು ಸುರಕ್ಷತೆಯನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮಳೆಯ ಅಬ್ಬರದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ತೀವ್ರತೆಯನ್ನು ಗಮನಿಸಿದ ಸರ್ಕಾರ, ಜಿಲ್ಲಾಡಳಿತ ಹಾಗೂ ವಿಪತ್ತು ನಿರ್ವಹಣಾ ಪಡೆಗಳನ್ನು ಅಲರ್ಟ್ ನಲ್ಲಿರಿಸಿದೆ.

BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್‌ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ


Spread the love
WhatsApp Group Join Now
Telegram Group Join Now
error: Content is protected !!