Mevu Kattarisuva Yantra- ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ-ಮ್ಯಾಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ

ರೈತರು ಮತ್ತು ಹೈನುಗಾರರಿಗೆ ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ (Mevu Kattarisuva Yantra) ಮತ್ತು ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
2025-26ನೇ ಸಾಲಿಗೆ ಸಂಬಂಧಿಸಿದಂತೆ ರೈತರು ಮತ್ತು ಹೈನುಗಾರರಿಗೆ ಮೇವು ಕತ್ತರಿಸುವ ಯಂತ್ರ (Chop Cutter) ಹಾಗೂ ರಬ್ಬರ್ ನೆಲಹಾಸುಗಳನ್ನು (Rubber Cow Mat) ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವರ್ಗವಾರು ಗುರಿ ನಿಗದಿ
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕುಗಳಿಗೆ ನೆಲಹಾಸು ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ರೈತರಿಗೆ ವರ್ಗವಾರು ಗುರಿ ನಿಗದಿಪಡಿಸಲಾಗಿದ್ದು; ಅರ್ಹ ರೈತರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಆಯಾ ಜಿಲ್ಲೆ ಹಾಗೂ ತಾಲ್ಲೂಕು ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲಾಖೆ ನಿಗದಿಪಡಿಸಿದ ಗುರಿಗಳ ಅನ್ವಯ ಮೀಸಲಾತಿ ನಿಗದಿಪಡಿಸಿ, ಆಯ್ಕೆ ಸಮಿತಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಫಲಾನುಭವಿಗಳಿಗೆ ನೆಲಹಾಸು ಮತ್ತು ಮೇವು ಕತ್ತರಿಸುವ ಯಂತ್ರವನ್ನು ಸಬ್ಸಿಡಿಯಲ್ಲಿ ವಿತರಿಸಲಾಗುತ್ತದೆ.

ಇದನ್ನೂ ಓದಿ: New BPL Card – ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಆಹ್ವಾನ | ಸರ್ಕಾರದ ಮಹತ್ವದ ನಿರ್ಧಾರ
ಸಹಾಯಧನ ಎಷ್ಟು ಸಿಗಲಿದೆ?
ಫಲಾನುಭವಿ ವಂತಿಕೆ ನೆಲಹಾಸುಗಳಿಗೆ 2,850 ರೂ., ಮೇವು ಕತ್ತರಿಸುವ ಯಂತ್ರಗಳಿಗೆ 17,000 ರೂ. ಬೆಲೆ ನಿಗದಿಯಾಗಿದೆ. ಆಯ್ಕೆಯಾಗುವ ಫಲಾನುಭವಿಗಳಿಗೆ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ.
ನೆಲಹಾಸು ಮತ್ತು ಮೇವು ಕತ್ತರಿಸುವ ಯಂತ್ರಗಳಿಗೆ ನಿಗದಿಪಡಿಸಿದ ಬೆಲೆಯ ಅರ್ಧ ಹಣವನ್ನು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯೇ ಭರಿಸುತ್ತದೆ. ಇನ್ನುಳಿದ ಅರ್ಧ ಹಣವನ್ನು ಫಲಾನುಭವಿಗಳು ಭರಿಸಬೇಕು.
ಈ ರೈತರಿಂದ ಅರ್ಜಿ ಆಹ್ವಾನ
ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿಯೂ ನೆಲಹಾಸು ಮತ್ತು ಮೇವು ಕತ್ತರಿಸುವ ಯಂತ್ರಗಳನ್ನು ಸಬ್ಸಿಡಿ ದರದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಯಾ ಜಿಲ್ಲೆ/ತಾಲ್ಲೂಕು ಫಲಾನುಭವಿಗಳು ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಸದ್ಯ ಹಾವೇರಿ ತಾಲ್ಲೂಕಿಗೆ 10 ನೆಲ ಹಾಸುಗಳು, 14 ಮೇವು ಕತ್ತರಿಸುವ ಯಂತ್ರಗಳ ಗುರಿ ನಿಗದಿಪಡಿಸಲಾಗಿದೆ. ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳೊಂದಿಗೆ, ಹಾವೇರಿ ತಾಲೂಕು ಪಶುವೈದ್ಯ ಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30-09-2025