EducationGovt Schemes

Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

Spread the love

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ (Deepika Scholarship 2025) ವಾರ್ಷಿಕ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಅಜೀಂ ಪ್ರೇಮ್ ಜೀ ಫೌಂಡೇಶನ್ (Azim Premji Foundation) ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹೊಸ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ಹೆಣ್ಣು ಮಕ್ಕಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ.

ನಿನ್ನೆ (ಸೆಪ್ಟೆಂಬರ್ 19) ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯನ್ನು (Deepika Scholarship Karnataka) ಲೋಕಾರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: New BPL Card – ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಆಹ್ವಾನ | ಸರ್ಕಾರದ ಮಹತ್ವದ ನಿರ್ಧಾರ

ಏನಿದು ದೀಪಿಕಾ ವಿದ್ಯಾರ್ಥಿವೇತನ ಯೋಜನೆ?

ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದಲ್ಲಿ ಈಗಾಗಲೇ ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ 1,500 ಕೋಟಿ ರೂಪಾಯಿ ಯೋಜನೆಯನ್ನು ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡು ಅನುಷ್ಠಾನಗೊಳಿಸಿದೆ.

ಇದೀಗ ಬಡ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಹಿನ್ನಲೆಯಲ್ಲಿ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಗೆ ಅಜೀಂ ಪ್ರೇಮ್ ಜೀ ಫೌಂಡಿಶನ್ ರಾಜ್ಯ ಉನ್ನತ ಶಿಕ್ಷಣ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

2025-26ನೇ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಿರುವ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಯಡಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 1ರಿಂದ ಪಯುಸಿ ವರೆಗೆ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು

ವಿದ್ಯಾರ್ಥಿವೇತನ ಮೊತ್ತವೆಷ್ಟು?

ಮೊದಲೇ ಹೇಳಿದಂತೆ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30,000 ರೂ. ನಂತೆ ಪದವಿ ಕೋರ್ಸು ಪೂರ್ಣಗೊಳಿಸುವ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಹ ವಿದ್ಯಾರ್ಥಿನಿಯರು ಈ ಮೊತ್ತವನ್ನು ಕಾಲೇಜು ಶುಲ್ಕ, ಪುಸ್ತಕ ಸೇರಿದಂತೆ ಇತರೆ ಶೈಕ್ಷಣಿಕ ಖರ್ಚುಗಳಿಗೆ ಬಳಸಬಹುದಾಗಿದೆ. ಈ ವರ್ಷ ಒಟ್ಟು 37,000 ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಉದ್ದೇಶಿಸಲಾಗಿದೆ ಎಂದು ಅರ್ಜಿ ಪ್ರೇಮ್ ಜೀ ಫೌಂಡೇಶನ್ ತಿಳಿಸಿದೆ.

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯಡಿ 30,000 ರೂ. ಸ್ಕಾಲರ್‌ಶಿಪ್ ನೀಡಲು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ...
Azim Premji Foundation Deepika Scholarship 2025
ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 1ರಿಂದ ಪಿಯುಸಿ ವರೆಗೆ ವ್ಯಾಸಂಗ ಮಾಡಿದ ಎಲ್ಲಾ ವರ್ಗಗಳ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನದ ನೆರವು ಪಡೆಯಬಹುದಾಗಿದೆ.

ಪ್ರಸ್ತುತ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಈ ಯೋಜನೆಯ ಫಲ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: PM Surya Ghar Scheme- ಮನೆಗೆ ಪಿಎಂ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯೋದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್…

ಅರ್ಜಿ ಸಲ್ಲಿಕೆ ಹೇಗೆ?

‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ಯು ರಾಜ್ಯದಲ್ಲಿ ನಿನ್ನೆಯಷ್ಟೇ ಲೋಕಾರ್ಪಣೆಯಾಗಿದ್ದು; ಇದೇ 2025-26ನೇ ಸಾಲಿನಿಂದಲೇ ಸ್ಕಾಲರ್‌ಶಿಪ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಾವು ಕೆಳಗೆ ನೀಡಿರುವ ‘ಅರ್ಜಿಂ ಪ್ರೇಮ್ ಜೀ ಫೌಂಡೇಶನ್’ ಅಧಿಕೃತ ಜಾಲತಾಣದ ಮೂಲಕ ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 15, 2025ರ ಒಳಗಾಗಿ ಆಸಕ್ತ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ.

NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!