JobsNews

RTO ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ RTO Motor Vehicle Inspector Recruitment 2024

Spread the love

RTO Motor Vehicle Inspector Recruitment 2024 : ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ (Motor Vehicle Inspector) ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. SSLC, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now

ವಿವಿಧ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಳೆದ ಕಳೆದ ಮಾರ್ಚ್ 03, 2024ರಂದು ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗವು (KPSC) ಮೂರು ಬಾರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ಜೂನ್ 30ರ ತನಕ ಕಾಲಾವಕಾಶ ನೀಡಿದೆ.

ಈತನಕ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ನಿಗದಿತ ದಿನದೊಳಗೆ ಸಲ್ಲಿಸಬಹುದು. ಉಳಿದಂತೆ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಕೆಪಿಎಸ್‌ಸಿ ಪ್ರಸ್ತುತ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver

ವಿದ್ಯಾರ್ಹತೆ ಮತ್ತು ಹುದ್ದೆಗಳ ವಿವರ

ಆರ್‌ಪಿಸಿ 70 ಹುದ್ದೆಗಳು ಹಾಗೂ ಹೈ.ಕ 06 ಹುದ್ದೆಗಳು ಸೇರಿ ಒಟ್ಟು 76 ‘ಸಿ’ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಜೊತೆಗೆ ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದಲ್ಲಿ ಡಿಪ್ಲೋಮಾ ಪದವಿ ಹೊಂದಿರಬೇಕು.

ದೈಹಿಕ ಅರ್ಹತೆ

ಸಾರಿಗೆ ಇಲಾಖೆಯ ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಪುರುಷ ಅಭ್ಯರ್ಥಿಗಳು 168 ಸೆಂ.ಮೀ. ಎತ್ತರ ಮತ್ತು 86 ಸೆಂ.ಮೀ. ಎದೆಯಳತೆ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು 157 ಸೆಂ.ಮೀ. ಎತ್ತರ. 49 ಕೆ.ಜಿ ತೂಕ ಹೊಂದಿರಬೇಕಾಗುತ್ತದೆ.

ರೈಲ್ವೆ ಇಲಾಖೆಯ 18,799 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾಗಿದ್ರೆ ಈಗಲೇ ಅರ್ಜಿ ಹಾಕಿ… Assistant Loco Pilot Recruitment 2024

RTO Motor Vehicle Inspector Recruitment 2024
ಸ೦ಬಳ ಹಾಗೂ ವಯೋಮಿತಿ ವಿವರ

ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 33,450 ರೂಪಾಯಿಂದ 62,600 ರೂಪಾಯಿ ವರೆಗೆ ವೇತನ ಇರಲಿದೆ. ಜೊತೆಗೆ ಎಲ್ಲ ರೀತಿ ಸರಿಕಾರಿ ಸೌಲವತ್ತುಗಳು ಅನ್ವಯವಾಗಲಿವೆ.

18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 38 ವರ್ಷಗಳು ಮತ್ತು ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ 40 ವರ್ಷ ನಿಗದಿಪಡಿಸಲಾಗಿದೆ.

8,000+ ಕೇಂದ್ರ ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ Central Government Jobs

ಅರ್ಜಿ ಶುಲ್ಕ
  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂಪಾಯಿ
  • ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ
  • ಎಸ್‌ಸಿ, ಎಸ್ಟಿ, ಪ್ರವರ್ಗ-1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಕೆ ಲಿಂಕ್
ಕೆಪಿಎಸ್‌ಸಿ ಪ್ರಕಟಣೆ 

SSLC ಪಾಸಾದವರಿಗೆ 1,500 ಪೊಲೀಸ್ ಹುದ್ದೆಗಳಿಗೆ ಅರ್ಜಿ | ಯಾವೆಲ್ಲ ಜಿಲ್ಲೆಗಳಿಗೆ ನೇಮಕ ನಡೆಯಲಿದೆ? KSRP SRPC Constable Recruitment 2024


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!