ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ.
ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ.
ಪಿಡಿಓ ಗಳಿಗೆ ವಿಶೇಷ ತರಬೇತಿ
ಗ್ರಾಮೀಣ ಪ್ರದೇಶದ ಅಕ್ರಮ ಆಸ್ತಿಗಳಿಗೂ ಇ-ಸ್ವತ್ತು ನೀಡುವ ಮೂಲಕ ಎಲ್ಲಾ ಆಸ್ತಿಗಳನ್ನು ಅಕ್ರಮಗೊಳಿಸುವ ಮೂಲಕ ಸಂಪನ್ಮೂಲ ಕ್ರೂಢೀಕರಿಸುವುದು ಸರ್ಕಾರದ ಗುರಿಯಾಗಿದೆ. ಈ ಸಂಬಂಧ ಈಚೆಗೆ ಸರ್ಕಾರ ‘ರಾಜ್ಯಪತ್ರ’ ಹೊರಡಿಸಿದ್ದು; ಈ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗಿದೆ.
ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳ ಪ್ರಕಾರ ಇ-ಸ್ವತ್ತು ವಿತರಣೆ ಮಾಡಬೇಕಿದೆ. ಸದರಿ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ಜಿ.ಪಂ ಸಿಇಓಗಳಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: PhonePe Personal Loan- ₹5 ಲಕ್ಷದ ವರೆಗೆ ಫೋನ್ಪೇ ಪರ್ಸನಲ್ ಲೋನ್ | ಮೊಬೈಲ್ನಲ್ಲೇ ಅರ್ಜಿ ಹಾಕಿ…

15 ದಿನಗಳಲ್ಲೇ ಇ-ಸ್ವತ್ತು ವಿತರಣೆ
ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ಅಂದರೆ ಅಜೀ ಸಲ್ಲಿಸಿದ 15 ದಿನದಲ್ಲೇ ಪ್ರಮಾಣ ಪತ್ರ ವಿತರಣೆ ಆಗಲಿದೆ.
ನಿಗದಿತ ಅವಧಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಪೂರಕವಾಗಿ ತಂತ್ರಾಂಶ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Karnataka Early Winter- ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಈ ಬಾರಿ ರಣ ಭಯಂಕರ ಚಳಿ | ಹವಾಮಾನ ಇಲಾಖೆ ಎಚ್ಚರಿಕೆ
ಯಾವೆಲ್ಲ ಆಸ್ತಿಗಳಿಗೆ ಇ-ಸ್ವತ್ತು (ಬಿ-ಖಾತಾ) ಸಿಗಲಿದೆ?
ಮೊದಲೇ ಹೇಳಿದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ತಿಗಳಿಗೂ ಇ-ಸ್ವತ್ತು ಸೃಜಿಸಲಾಗುತ್ತದೆ. ಸರ್ಕಾರಿ ಭೂಮಿ, ಅರಣ್ಯ ಭೂಮಿ, ಸರ್ಕಾರದ ಒಡೆತನ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಸ್ಥಳೀಯ ಸಂಸ್ಥೆಗೆ ಸೇರಿದ ಭೂಮಿಗಳಿಗೆ ಇ-ಸ್ವತ್ತು (ಬಿ-ಖಾತಾ) ಸಿಗುವುದಿಲ್ಲ
ಜೊತೆಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ (ತಿದ್ದುಪಡಿ) ಜಾರಿಯಾದ ನಂತರ ಅಭಿವೃದ್ಧಿಯಾದ ಯಾವುದೇ ಹೊಸ ಸ್ವತ್ತಿಗೆ ‘ಬಿ-ಖಾತಾ ನೀಡಲು ಅವಕಾಶ ಇರುವುದಿಲ್ಲ.
ಬೇಕಾಗುವ ದಾಖಲೆಗಳು
- ಭೂ ನೋಂದಣಿ ಪ್ರಮಾಣ ಪತ್ರ
- ಭೂ ಮಂಜೂರಾತಿ ಆದೇಶ
- ಕರೆಂಟ್ ಬಿಲ್, ಋಣಭಾರ ಪ್ರಮಾಣ ಪತ್ರ (ಇಸಿ)
- ಏಪ್ರಿಲ್ 2025ಕ್ಕಿಂತಲೂ ಹಿಂದಿನ ತೆರಿಗೆ ಪಾವತಿ ರಸೀದಿ
- ಭೂ ಪರಿವರ್ತನೆ ಆದೇಶ (ಇದ್ದರೆ ಮಾತ್ರ)
- ಬಡಾವಣೆ ಅನುಮೋದಿತ ವಿನ್ಯಾಸ (ಇದ್ದರೆ ಮಾತ್ರ)
- ನೋಂದಾಯಿತ ಪರಿತ್ಯಾಜನಾ ಪತ್ರ

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.