ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ (India Post Payments Bank Recruitment) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ…
ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜ್ಯೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್‌ಗಳ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು; ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಆಸಕ್ತರು ಡಿಸೆಂಬರ್ 01, 2025ರ ಒಳಗಾಗಿ ಸಲ್ಲಿಸಬೇಕಿದೆ.
ಇದನ್ನೂ ಓದಿ: Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
- ಅಸಿಸ್ಟೆಂಟ್ ಮ್ಯಾನೇಜರ್: 110 ಹುದ್ದೆಗಳು
- ಜ್ಯೂನಿಯರ್ ಅಸೋಸಿಯೇಟ್: 199 ಹುದ್ದೆಗಳು
- ಒಟ್ಟು: 309 ಹುದ್ದೆಗಳು
ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಕಾಲೇಜಿನಲ್ಲಿ ಯಾವುದೇ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ
ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 20 ರಿಂದ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅವಕಾಶವಿದೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಶ್ರೇಣಿಯನುಸಾರ ಅನುಭವ ಅವಶ್ಯ.
ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ
ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಆನ್‌ಲೈನ್ ಆಧಾರಿತ ಪರೀಕ್ಷೆಯನ್ನು ಮಾಡಲಾಗುತ್ತದೆ. ನಂತರ ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹಂತದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಸಮಾನಾಂಕಗಳನ್ನು ಗಳಿಸಿದರೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 11-11-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-12-2025
- ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ: 01-12-2025
ಅಧಿಸೂಚನೆ: Download
ಅರ್ಜಿ ಲಿಂಕ್: Apply Now
PhonePe Personal Loan- ₹5 ಲಕ್ಷದ ವರೆಗೆ ಫೋನ್‌ಪೇ ಪರ್ಸನಲ್ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಹಾಕಿ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.