ಖಾಲಿ ಇರುವ 571 ಅಂಗನವಾಡಿ ಹುದ್ದೆಗಳಿಗೆ (Anganwadi Recruitment 2025) ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದ್ದು; ಇದೀಗ ಉತ್ತರ ಕನ್ನಡ ಜಿಲ್ಲೆ ಹಾಗೂ ಮೈಸೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
- ಉತ್ತರ ಕನ್ನಡ ಜಿಲ್ಲೆ: 299 ಹುದ್ದೆಗಳು
- ಮೈಸೂರು ಜಿಲ್ಲೆ: 272 ಹುದ್ದೆಗಳು
- ಒಟ್ಟು: 571 ಹುದ್ದೆಗಳು

ಆಯ್ಕೆ ಪ್ರಕ್ರಿಯೆ ಹೇಗೆ?: ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸ್ಥಳೀಯರಿಗೆ ಆದ್ಯತೆ ಇರಲಿದೆ.
ಇದನ್ನೂ ಓದಿ: Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?
ವಯೋಮಿತಿ ವಿವರ: 19ರಿಂದ 35ರೊಳಗಿನ ಅಭ್ಯರ್ಥಿಗಳು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಯಾ ಮೀಸಲು ವರ್ಗಗಳಿಗೆ 3ರಿಂದ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…
ಅರ್ಜಿ ಶುಲ್ಕ: ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಕೆ ಕೊನೇ ದಿನಾಂಕಗಳು
- ಉತ್ತರಕನ್ನಡ ಜಿಲ್ಲೆ: 31-12-2025
- ಮೈಸೂರು ಜಿಲ್ಲೆ: 30-12-2025
ಮಾರ್ಗಸೂಚಿಗಳು : Download
ಅರ್ಜಿ ಲಿಂಕ್ : Apply ಮಾಡಿ
ಅಧಿಕೃತ ಜಾಲತಾಣ: dwcd.karnataka.gov.in
PhonePe Personal Loan- ₹5 ಲಕ್ಷದ ವರೆಗೆ ಫೋನ್‌ಪೇ ಪರ್ಸನಲ್ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಹಾಕಿ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.