Govt LKG UKG Teachers Recruitment 2024 : ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು, ಅಂದರೆ ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು (LKG UKG In Govt Schools) ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಆರಂಭಿಸಲು ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.
ಈ ಸಂಬ೦ಧ ಶಿಕ್ಷಣ ಸಚಿವಾಲದ ಸೂಚನೆಯಂತೆ ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲಾ ಶಿಕ್ಷಕರು ಹಾಗೂ ಆಯಾಗಳನ್ನು ನೇಮಕಾತಿ ಮಾಡಲು ಕಡ್ಡಾಯವಾದ ಮಾರ್ಗದರ್ಶಿಯನ್ನು ಸರಕಾರ ಬಿಡುಗಡೆ ಮಾಡಿದೆ. ಶಿಕ್ಷಕರು, ಆಯಾಗಳ ನೇಮಕಾತಿಗೆ ಅರ್ಹತೆಗಳೇನು? ಗೌರವಧನವೆಷ್ಟು? ನೇಮಕ ಪ್ರಕ್ರಿಯೆ ಹೇಗೆ? ಜಿಲ್ಲಾವಾರು ಪಟ್ಟಿ ಸೇರಿದಂತೆ ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.

ಅನುಮೋದನೆಯಾದ ಶಾಲೆಗಳ ವಿವರ
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡAತೆ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಿದ ಶಾಲೆಗಳ ವಿವರ ಈ ಕೆಳಗಿನಂತಿದೆ:
- 2023-24ನೇ ಸಾಲು : 262
- 2024-25ನೇ ಸಾಲು : 316
- ಒಟ್ಟು ಶಾಲೆಗಳು : 578
ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ ಅಥವಾ ಶಿಕ್ಷಕ ಮತ್ತು ಒಬ್ಬರು ಆಯಾರನ್ನು ಶಾಲಾ ಎಸ್‌ಡಿಎಂಸಿ ವತಿಯಿಂದ ತಾತ್ಕಾಲಿಕವಾಗಿ ಹತ್ತು ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲಾ ಶಿಕ್ಷಕಿ ಮತ್ತು ಆಯಾ ಹುದ್ದೆಗಳಿಗೆ ನಿಗದಿಪಡಿಸಲಾದ ಅರ್ಹತಾ ಮಾನದಂಡಗಳು ಈ ಕೆಳಗಿನಂತಿವೆ.
ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver
ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹತೆಗಳು
- ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲಾ ಶಿಕ್ಷಕಿ/ ಶಿಕ್ಷಕರಾಗಲು ಪಿಯುಸಿಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದು ಉತ್ತೀರ್ಣರಾದವರಿಗೆ ಅವಕಾಶ ನೀಡಲಾಗಿದೆ. ವಯೋಮಿತಿಯು 45 ವರ್ಷಕ್ಕಿಂತ ಕಡಿಮೆ ಇರಬೇಕು.
- ಅಥವಾ NCTE ಮಾನ್ಯತೆ ಪಡೆದ ಸಂಸ್ಥೆಯಿ೦ದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ ಪ್ರೀ- ಸ್ಕೂಲ್ ಎಜ್ಯುಕೇಶನ್/ ಅರ್ಲಿ ಚೈಲ್ಡ್ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ ಹೊಂದಿದವರಿಗೆ ಅವಕಾಶ ನೀಡಲಾಗಿದೆ.
- ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿಯುಸಿಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿ೦ದ ಡಿ.ಎಡ್ ತರಬೇತಿ ಹೊಂದಿದವರು ನೇಮಕಾತಿ ಮಾಡಲು ಸೂಚಿಸಲಾಗಿದೆ.

8,000+ ಕೇಂದ್ರ ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ Central Government Jobs
ಆಯಾ ಹುದ್ದೆಗಳ ನೇಮಕಾತಿಗೆ ಅರ್ಹತೆಗಳು
- ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳ ಆಯಾ ಹುದ್ದೆಗೆ ಕಡ್ಡಾಯವಾಗಿ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳೆ ಕನಿಷ್ಠ SSLC ಉತ್ತೀರ್ಣರಾಗಿರಬೇಕು. ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಆಯಾ ಗ್ರಾಮ, ವಾರ್ಡ್ ವ್ಯಾಪ್ತಿಯವರಾಗಿರಬೇಕು.
- ಒಂದು ವೇಳೆ ಸ್ಥಳೀಯವಾಗಿ ಯಾವುದೇ ಅಭ್ಯರ್ಥಿ ಸಿಗದಿದ್ದರೆ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು ಅಥವಾ ಪಕ್ಕದ ವಾರ್ಡಿನವರಿಗೆ ಅವಕಾಶ ನೀಡುವಂತೆ ಸೂಚಿಸಲಾಗಿದೆ.
ಮಾಸಿಕ ಗೌರವಧನವೆಷ್ಟು?
ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲಾ ಶಿಕ್ಷಕರು ಹಾಗೂ ಆಯಾ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯ೦ತೆಯೇ ಗೌರವಧನವನ್ನು ನಿಗದಿಪಡಿಸಲಾಗಿದೆ.
ಶಿಕ್ಷಕರಿಗೆ ಮಾಸಿಕ 10,000 ರೂಪಾಯಿ ಮತ್ತು ಆಯಾಗಳಿಗೆ ಮಾಸಿಕ 5000 ರೂಪಾಯಿ ಸಂಭಾವನೆಯನ್ನು ನಿಗದಿಪಡಿಸಿದ್ದು; ವೇತನ ಅನುದಾನವನ್ನು ಆಯಾ ಎಸ್‌ಡಿಎಂಸಿ ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾqಲಾಗುತ್ತದೆ.
ನೇಮಕಾತಿ ಪ್ರಕ್ರಿಯೆ ಹೇಗೆ?
ಶಿಕ್ಷಕ ಹಾಗೂ ಆಯಾಗಳ ನೇಮಕಾತಿಯು ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರುವ ಆಯ್ಕೆ ಸಮಿತಿಯ ಮೂಲಕ ನಡೆಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದ೦ತೆ ಅತೀ ಹೆಚ್ಚು ಅಂಕ ಗಳಿಸಿದವರನ್ನು ಪರಿಗಣಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬAಧ ಸದ್ಯದಲ್ಲಿಯೇ ಸ್ಥಳೀಯ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆಯಾ ಶಾಲಾ ಎಸ್‌ಡಿಎಂಸಿ ಭೇಟಿ ಮಾಡಿ ವಿಚಾರಿಸಬಹುದಾಗಿದೆ.
ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ (Download)
ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities