ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು (Alvas Free Education Admission) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕಾಗಿ ಹೆಸರುವಾಸಿ ಆಗಿರುವಂತಹ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯದ ಅಡಿಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಅಳ್ವಾಸ್ ‘ಉಚಿತ ಶಿಕ್ಷಣ ಯೋಜನೆ’ ಅಡಿಯಲ್ಲಿ 6, 7, 8 ಮತ್ತು 9ನೇ ತರಗತಿಗೆ ಪ್ರವೇಶ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಇತರೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.
ಉಚಿತ ಶಿಕ್ಷಣ ಸೌಲಭ್ಯ ಪಡೆಯಲು ಅರ್ಹತೆ (Alvas free education scheme eligibility):
ಆಳ್ವಾಸ್ ಶಿಕ್ಷಣ ಸಂಸ್ಥೆಯು ‘ಉಚಿತ ಶಿಕ್ಷಣ ಸೌಲಭ್ಯ’ದ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ 5ನೇ, 6ನೇ, 7ನೇ ಮತ್ತು 8ನೇ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿರಬೇಕು. ಅಂದರೆ 2026-27ನೇ ಶೈಕ್ಷಣಿಕ ವರ್ಷದ 6ನೇ, 7ನೇ, 8ನೇ ಮತ್ತು 9ನೇ ತರಗತಿಯಲ್ಲಿ ಶಿಕ್ಷಣ ಪಡೆಯಲು ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
- ಶಾಲಾ ಮುಖ್ಯಸ್ಥರಿಂದ ಖಚಿತಪಡಿಸಿಕೊಂಡ SATS – ID
- ಆಧಾರ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್
- ಇತರೆ ಅಗತ್ಯ ದಾಖಲೆಗಳು
ಆಯ್ಕೆ ಪ್ರಕ್ರಿಯೆ ಹೇಗೆ? (Selection procedure):
Alvas free education scheme ಆಳ್ವಾಸ್ ಉಚಿತ ಶಿಕ್ಷಣ ಸೌಲಭ್ಯದ ಪಡೆಯಲು ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪರೀಕ್ಷೆ ನಡೆಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಮೊದಲನೇ ಹಂತದಲ್ಲಿ ಓ.ಎಂ.ಆರ್ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಇದರಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎರಡನೆಯ ಹಂತದಲ್ಲಿ ಬರವಣಿಗೆ ಆಧಾರಿತ ಚಟುವಟಿಕೆಗಳನ್ನು ನಡೆಸಲಾಗುವುದು.
ಎರಡನೇ ಹಂತದಲ್ಲಿ 6 ಮತ್ತು 7ನೇ ತರಗತಿ ಪ್ರವೇಶಾತಿಗೆ 120 ಅಂಕ ಹಾಗೂ 8 ಮತ್ತು 9ನೇ ತರಗತಿ ಪ್ರವೇಶಾತಿಗೆ 150 ಅಂಕಗಳ ಆಧಾರದಲ್ಲಿ ಚಟುವಟಿಕೆಗಳನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳ ಮತ್ತು ದಿನಾಂಕ:
ದಿನಾಂಕ: 01-03-2026ರ ಭಾನುವಾರದದಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ವಿದ್ಯಾಗಿರಿಯಲ್ಲಿ ಇರುವ ಆಳ್ವಾಸ್ ಆವರಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಪ್ರವೇಶಾತಿ ಪರೀಕ್ಷೆಯ ಉಪಯುಕ್ತ ಮಾಹಿತಿ:
ಸದ್ಯಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಯಾವ ತರಗತಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ, ಅದರ ಮುಂದಿನ ತರಗತಿಗೆ ಆಯ್ಕೆ ಬಯಸುವುದರಿಂದ ಪ್ರಸ್ತುತ ಓದುತ್ತಿರುವ ಎಲ್ಲಾ ವಿಷಯಗಳು ಹಾಗೂ ಮಾನಸಿಕ ಸಾಮರ್ಥ್ಯ ವಿಷಯಗಳನ್ನು ಅಧ್ಯಯನ ನಡೆಸಿ ಪರೀಕ್ಷೆಗೆ ತಯಾರಾಗಬೇಕು.
ಹೇಗೆ ಅರ್ಜಿ ಸಲ್ಲಿಸಬೇಕು?:
ಅರ್ಹತೆಯುಳ್ಳ ವಿದ್ಯಾರ್ಥಿಗಳು ಲೇಖನದ ಕೊನೆಯಲ್ಲಿ ನೀಡಿರುವ Alvas free education scheme ಅರ್ಜಿ ಲಿಂಕ್ ಬಳಸಿಕೊಂಡು ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಗತ್ಯವಿರುವ ನಿಖರ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ನಂತರ ಅರ್ಜಿ ಫಾರ್ಮ್’ನ (Application form) ಎರಡು ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬೇಕು. ಒಂದು ಪ್ರತಿಯನ್ನು ನಿಮ್ಮ ಹತ್ತಿರ ಇಟ್ಟುಕೊಂಡು ಇನ್ನೊಂದು ಪ್ರತಿಯನ್ನು ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಕಳುಹಿಸಿಕೊಡಬೇಕು.
ವಿಳಾಸ : ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ), ವಿವೇಕಾನಂದ ನಗರ, ಪುತ್ತಿಗೆ, ಸಂಪಿಗೆ ಅಂಚೆ, ಮೂಡುಬಿದಿರೆ-574227, ದಕ್ಷಿಣ ಕನ್ನಡ ಜಿಲ್ಲೆ
ಇದನ್ನೂ ಓದಿ: Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
15-01-2026 - ಪ್ರವೇಶಾತಿ ಪರೀಕ್ಷೆ ನಡೆಸುವ ದಿನಾಂಕ:
01-03-2026
ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 5:00 ಸಮಯದಲ್ಲಿ +91 70265 30137 ಹಾಗೂ +91 70265 30263 ದೂರವಾಣಿ ಮೂಲಕ ಸಂಪರ್ಕಿಸಬಹುದು.
ಅರ್ಜಿ ಲಿಂಕ್: Apply Now
ಇದನ್ನೂ ಓದಿ: PhonePe Personal Loan- ₹5 ಲಕ್ಷದ ವರೆಗೆ ಫೋನ್ಪೇ ಪರ್ಸನಲ್ ಲೋನ್ | ಮೊಬೈಲ್ನಲ್ಲೇ ಅರ್ಜಿ ಹಾಕಿ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.