Angnawadi Recruitment- 1,787 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈ ಜಿಲ್ಲೆಯ ಮಹಿಳೆಯರಿಗೆ ಸುವರ್ಣಾವಕಾಶ

Spread the love

WhatsApp Group Join Now
Telegram Group Join Now

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,787 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ (Angnawadi Recruitment) ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಮಹಿಳೆಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Namma Hola Namma Daari Yojana- ನಮ್ಮ ಹೊಲ ನಮ್ಮ ದಾರಿ ಯೋಜನೆ: ಹೊಲದ ದಾರಿ ನಿರ್ಮಾಣಕ್ಕೆ ಸರ್ಕಾರದಿಂದ 12.5 ಲಕ್ಷ ರೂ. ಸಹಾಯಧನ

ನೇಮಕಾತಿ ಸಂಕ್ಷಿಪ್ತ ವಿವರ:
  • ನೇಮಕಾತಿ ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
  • ಖಾಲಿ ಹುದ್ದೆಗಳು: 1,787 ಹುದ್ದೆಗಳು
  • ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು
  • ವಿದ್ಯಾರ್ಹತೆ: 10ನೇ ತರಗತಿ ಮತ್ತು ಪಿಯುಸಿ
  • ಅರ್ಜಿ ಸಲ್ಲಿಕೆ: ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ: ರಾಯಚೂರು, ತುಮಕೂರು, ಉತ್ತರ ಕನ್ನಡ, ಮೈಸೂರು ಜಿಲ್ಲೆಗಳು

ರಾಯಚೂರು, ತುಮಕೂರು, ಉತ್ತರ ಕನ್ನಡ ಹಾಗೂ ಮೈಸೂರು ಜಿಲ್ಲೆಗಳ ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು; ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಹೀಗಿದೆ:

ರಾಯಚೂರು ಜಿಲ್ಲೆ ಹುದ್ದೆಗಳ ವಿವರ:

ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ 08 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಒಟ್ಟು ಖಾಲಿ ಹುದ್ದೆಗಳು: 340
  • ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 07-01-2026

ಇದನ್ನೂ ಓದಿ: Karnataka Heavy Cold Wave – ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಎಚ್ಚರಿಕೆ | ಹವಾಮಾನ ಇಲಾಖೆ ಮುನ್ಸೂಚನೆ

Angnawadi Recruitment
Angnawadi Recruitment
ತುಮಕೂರು ಜಿಲ್ಲೆ ಹುದ್ದೆಗಳ ವಿವರ:

ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಒಟ್ಟು ಖಾಲಿ ಹುದ್ದೆಗಳು 946
  • ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 09-01-2026
ಉತ್ತರ ಕನ್ನಡ ಜಿಲ್ಲೆ ಹುದ್ದೆಗಳ ವಿವರ:

ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಒಟ್ಟು ಖಾಲಿ ಹುದ್ದೆಗಳು 229
  • ಕೊನೇ ದಿನಾಂಕ: 31-12-2025
ಮೈಸೂರು ಜಿಲ್ಲೆ ಹುದ್ದೆಗಳ ವಿವರ:

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಒಟ್ಟು ಖಾಲಿ ಹುದ್ದೆಗಳು 272
  • ಕೊನೇ ದಿನಾಂಕ: 30-12-2025

ಇದನ್ನೂ ಓದಿ: Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ:
  • ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಪಿಯುಸಿ ಪಾಸ್
  • ಅಂಗನವಾಡಿ ಸಹಾಯಕಿ ಹುದ್ದೆ : 10ನೇ ತರಗತಿ ಪಾಸ್

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು:
  • ಅರ್ಜಿ ನಿಗದಿತ ನಮೂನೆ (ಆನ್‌ಲೈನ್)
  • ಜನನ ಪ್ರಮಾಣ ಪತ್ರ
  • ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  • ವಾಸಸ್ಥಳ ದೃಢೀಕರಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
  • ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ

ಇದನ್ನೂ ಓದಿ: Karnataka PDO Recruitment 2026- 994 ಪಿಡಿಒ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಅರ್ಜಿ ಸಲ್ಲಿಕೆ ಹೇಗೆ?:

ಅಂಗನವಾಡಿ ಹುದ್ದೆಗಳಿಗೆ ಅರ್ಹ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಲೇಖನದ ಕೊನೆಯಲ್ಲಿ ಅಧಿಕೃತ ಲಿಂಕ್ ನೀಡಲಾಗಿದೆ. ಅಲ್ಲಿ ಕ್ಲಿಕ್ ಮಾಡಿದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಹುದ್ದೆಗಳ ಅರ್ಜಿ ಪುಟ ತೆರೆದುಕೊಳ್ಳುತ್ತದೆ.

ಅಲ್ಲಿ ಜಿಲ್ಲೆ, ತಾಲ್ಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಆಯ್ಕೆ, ಜಾತಿ ಕಾಲಂ ಗಳನ್ನು ಆಯ್ಕೆ ಮಾಡಿ Submit ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ. ಅಲ್ಲಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅಗತ್ಯ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು.

WhatsApp Group Join Now
Telegram Group Join Now

ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಜಿಲ್ಲೆಗಳ ಮಹಿಳೆಯರು ಸ್ಥಳೀಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಪ್ರಮುಖ ಲಿಂಕುಗಳು:

Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ


Spread the love
error: Content is protected !!