BOI Credit Officer Recruitment 2026- ಪದವಿಧರರಿಗೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ | 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ

Spread the love

WhatsApp Group Join Now
Telegram Group Join Now

ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಇಂಡಿಯಾದ (BOI Credit Officer Recruitment 2026) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪೂರ್ತಿ ಮಾಹಿತಿ ಇಲ್ಲಿದೆ…

ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಇಂದಿನಿಂದಲೇ (ಡಿಸೆಂಬರ್ 20) ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಕ್ಯಾಪಿಟಲ್ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

ವಿದ್ಯಾರ್ಹತೆ ಮತ್ತು ವೇತನ:

ಮೊದಲೇ ಹೇಳಿದಂತೆ ಕ್ರೆಡಿಟ್ ಆಫೀಸರ್ ಹುದ್ದೆಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಕಾಲೇಜಿನಿಂದ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಹರು. ಪದವಿಯಲ್ಲಿ ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಪ.ಜಾ, ಪ.ಪಂ, ಒಬಿಸಿ ಅಭ್ಯರ್ಥಿಗಳಿಗೆ ಉತ್ತೀರ್ಣತಾ ಅಂಕದಲ್ಲಿ ವಿನಾಯ್ತಿ ಇದೆ.

ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 64,820 ರೂ. ದಿಂದ 1,20,940 ರೂ. ವರೆಗೆ ವೇತನ ನೀಡಲಾಗುತ್ತದೆ. ಜೊತೆಗೆ ವಿವಿಧ ಸವಲತ್ತುಗಳು ಅನ್ವಯವಾಗಲಿವೆ.

ಇದನ್ನೂ ಓದಿ: Karnataka Govt SSP Scholarship 2025-26- ಕರ್ನಾಟಕ ಸರ್ಕಾರದಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಆರ್ಥಿಕ ನೆರವು

ವಯೋಮಿತಿ ವಿವರ:

ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಕನಿಷ್ಠ 25 ರಿಂದ 40 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾವವಿದೆ.

ಮಿಸಲಾತಿ ನಿಯಮದ ಅನುಸಾರ ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: Angnawadi Recruitment- 1,787 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈ ಜಿಲ್ಲೆಯ ಮಹಿಳೆಯರಿಗೆ ಸುವರ್ಣಾವಕಾಶ

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ನೀಡಲಾಗುತ್ತದೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಯ ಸಂಖ್ಯೆಯ ಆಧಾರ ಮೇಲೆ ಆಯ್ಕೆ ವಿಧಾನ ನಿಗದಿಯಾಗಲಿದೆ. ಪರೀಕ್ಷಾ ಅರ್ಹತಾ ಅಂಕಗಳಲ್ಲಿಯೂ ಪ.ಜಾ, ಪ.ಪಂ, ಒಬಿಸಿ, ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಾತಿ ಇರಲಿದೆ.

ಇದನ್ನೂ ಓದಿ: Egg Cancer Rumors Fact Check- ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? | ವಾಸ್ತವ ಏನು, ವದಂತಿ ಏನು?

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?:

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಪ.ಜಾ, ಪ.ಪಂ, ಒಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳು 175 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು 850 ರೂ. ಶುಲ್ಕ ಪಾವತಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಆರಂಭ ದಿನಾಂಕ: 20-12-2025
  • ಅರ್ಜಿ ಕೊನೇ ದಿನಾಂಕ: 05-01-2026
WhatsApp Group Join Now
Telegram Group Join Now

ಅಧಿಸೂಚನೆ: Download

Karnataka PDO Recruitment 2026- 994 ಪಿಡಿಒ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…


Spread the love
error: Content is protected !!