2025-26ನೇ ಶೈಕ್ಷಣಿಕ ಸಾಲಿನ ‘ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ’ಕ್ಕೆ (Karmikara Makkalige Shaikshanika Protsahanadhana) ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ…
ಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ (ವಿದ್ಯಾರ್ಥಿವೇತನ) ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.
ಹೈಸ್ಕೂಲ್ನಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ವರೆಗಿನ ವಿದ್ಯಾಭ್ಯಾಸಕ್ಕೆ 6,000 ರೂ. ರಿಂದ 20,000 ರೂ. ವರೆಗೆ ಆರ್ಥಿಕ ನೆರವು ದೊರೆಯಲಿದೆ. ಶಿಕ್ಷಣ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಈ ಯೋಜನೆ ದೊಡ್ಡ ಸಹಾಯವಾಗಲಿದೆ.
Educational Incentive for Workers’ Children- ಏನಿದು ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ?
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಕುಟುಂಬಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಭಾಗವಾಗಿಯೇ ಪ್ರತಿವರ್ಷ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗುತ್ತದೆ.
ವಿದ್ಯಾರ್ಥಿಗಳು ಶಾಲಾ ಹಂತದಿಂದ ಉನ್ನತ ಶಿಕ್ಷಣದವರೆಗೆ ನಿರಂತರವಾಗಿ ಓದನ್ನು ಮುಂದುವರಿಸಲು ಪ್ರೋತ್ಸಾಹಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅನೇಕ ವಿದ್ಯಾರ್ಥಿಗಳ ಓದಿಗೆ ಈ ಪ್ರೋತ್ಸಾಹಧನ ಆಧಾರವಾಗುತ್ತಿದೆ.
Eligibility Criteria- ಯಾರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು?
ಈ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿಗೆ ವಂತಿಕೆ ನೀಡುತ್ತಿರುವ ಸಂಘಟಿತ ವಲಯದ ಕಾರ್ಮಿಕರಾಗಿರಬೇಕು. ಕುಟುಂಬದ ಮಾಸಿಕ ವೇತನ 35,000 ರೂ. ಮೀರಿರಬಾರದು.
ಹಿಂದಿನ ತರಗತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕನಿಷ್ಠ 50% ಅಂಕ, ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಕನಿಷ್ಠ 45% ಅಂಕ ಪಡೆದು ಉತ್ತೀರ್ಣರಾಗಿರಬೇಕು.
ಒಂದು ಕುಟುಂಬದಿಂದ ಗರಿಷ್ಠ ಇಬ್ಬರು ಮಕ್ಕಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ. ಈ ಅರ್ಹತೆಗಳನ್ನು ಪೂರೈಸುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

Scholarship Amount – ವಿದ್ಯಾರ್ಥಿಗಳಿಗೆ ಎಷ್ಟು ಸಹಾಯಧನ ಸಿಗುತ್ತದೆ?
ವಿದ್ಯಾರ್ಥಿಯ ಓದುತ್ತಿರುವ ತರಗತಿ ಅಥವಾ ಕೋರ್ಸ್ ಆಧಾರದ ಮೇಲೆ ಸಹಾಯಧನದ ಮೊತ್ತ ನಿಗದಿಪಡಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಸ್ಕಾಲರ್ಶಿಪ್ ಮೊತ್ತದ ವಿವರ ಹೀಗಿದೆ:
- 8ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ: 6,000 ರೂ.
- ಪಿಯುಸಿ, ಐಟಿಐ, ಡಿಪ್ಲೊಮಾ, ಟಿಸಿಎಚ್ ವಿದ್ಯಾರ್ಥಿಗಳಿಗೆ: 8,000 ರೂ.
- ಪದವಿ (ಡಿಗ್ರಿ) ವಿದ್ಯಾರ್ಥಿಗಳಿಗೆ: 10,000 ರೂ.
- ಸ್ನಾತಕೋತ್ತರ ಪದವಿ (ಪಿಜಿ) ವಿದ್ಯಾರ್ಥಿಗಳಿಗೆ: 12,000 ರೂ.
- ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ: 20,000 ರೂ.
Required Documents- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಎಸ್ಎಸ್ಎಲ್ಸಿ ಅಂಕಪಟ್ಟಿ (ಅನ್ವಯಿಸುವ ಹಂತದವರಿಗೆ)
- ಪಿಯುಸಿ ಅಂಕಪಟ್ಟಿ
- ವಿದ್ಯಾರ್ಥಿ, ತಂದೆ ಮತ್ತು ತಾಯಿ ಮೂವರ ಆಧಾರ್ ಕಾರ್ಡ್
- Account Number ಮತ್ತು IFSC Code ಸ್ಪಷ್ಟವಾಗಿರುವ ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿ
- ಹಿಂದಿನ ವರ್ಷದ ಅಂಕಪಟ್ಟಿ
- ಪದವಿ/ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಿಂದಿನ ಎರಡು ಸೆಮಿಸ್ಟರ್ಗಳ ಅಂಕಪಟ್ಟಿ ಸಲ್ಲಿಸುವುದು ಕಡ್ಡಾಯ
- ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ
Last Date to Apply- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 31 ಡಿಸೆಂಬರ್ 2025 ಕೊನೆಯ ದಿನಾಂಕವಾಗಿದೆ. ಕೊನೆಯ ಕ್ಷಣದ ಗಡಿಬಿಡಿ ತಪ್ಪಿಸಲು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ.
Big Support for Labour Families- ಕಾರ್ಮಿಕ ಕುಟುಂಬಗಳಿಗೆ ದೊಡ್ಡ ಬೆಂಬಲ
ಕಾರ್ಮಿಕ ಕುಟುಂಬಗಳ ಮಕ್ಕಳು ಹಣದ ಕೊರತೆಯಿಂದಾಗಿ ಓದನ್ನು ಮಧ್ಯದಲ್ಲಿ ಬಿಡಬೇಕಾಗುವ ಪರಿಸ್ಥಿತಿ ಬರಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಈ ವಿದ್ಯಾರ್ಥಿವೇತನವು ಮಕ್ಕಳಿಗೆ ಆರ್ಥಿಕ ಸಹಾಯ ಮಾತ್ರವಲ್ಲದೆ, ಅವರಲ್ಲಿ ಆತ್ಮವಿಶ್ವಾಸ ಮತ್ತು ಮುಂದುವರಿಯುವ ಉತ್ಸಾಹವನ್ನು ಹೆಚ್ಚಿಸುತ್ತದೆ.
ನೀವು ಅಥವಾ ನಿಮಗೆ ಪರಿಚಿತ ಯಾರಾದರೂ ಸಂಘಟಿತ ವಲಯದ ಕಾರ್ಮಿಕರಾಗಿದ್ದು, ಅವರ ಮಕ್ಕಳು ಓದುತ್ತಿದ್ದರೆ ಈ ಶೈಕ್ಷಣಿಕ ಪ್ರೋತ್ಸಾಹಧನ ಅವಕಾಶವನ್ನು ತಪ್ಪದೇ ಉಪಯೋಗಿಸಿಕೊಳ್ಳಿ. ಸರಿಯಾದ ಮಾಹಿತಿಯೊಂದಿಗೆ ಸಮಯಕ್ಕೆ ಅರ್ಜಿ ಸಲ್ಲಿಸಿದರೆ, ಮಕ್ಕಳ ಶಿಕ್ಷಣಕ್ಕೆ ಇದು ದೊಡ್ಡ ಬೆಂಬಲವಾಗಲಿದೆ.
ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ಸಮಸ್ಯೆಗಳಿದ್ದರೆ 080-23475188, 8277291175 ಹಾಗೂ 9141602562 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.
- ಆನ್ಲೈನ್ ಅರ್ಜಿ ಲಿಂಕ್: Apply Now
- ಅಧಿಕೃತ ವೆಬ್ಸೈಟ್: klwbapps.karnataka.gov.in / klwb.karnataka.gov.in

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.