Gruha Lakshmi Yojana Mane Mane Survey: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮನೆ ಮನೆ ಸರ್ವೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಮರು ಪರಿಶೀಲನೆ, ಸ್ವಯಂ ಘೋಷಣೆ ಪತ್ರ, ದಾಖಲೆಗಳು ಮತ್ತು ಹೊಸ ಮಾಹಿತಿಯನ್ನು ಇಲ್ಲಿ ತಿಳಿಯಿರಿ…
ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಕುರಿತು ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಯೋಜನೆಯಡಿ ಹಣ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಸರ್ವೆ (Door to Door Survey) ನಡೆಸುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿದೆ.
ಗೃಹಲಕ್ಷ್ಮಿ ಯೋಜನೆಯ ಉದ್ದೇಶ ರಾಜ್ಯದ ಪ್ರತಿ ಅರ್ಹ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಆರ್ಥಿಕ ನೆರವು ನೀಡುವುದು. ಆದರೆ ಯೋಜನೆಯಡಿ ಕೆಲ ಅನರ್ಹರು ಕೂಡ ಲಾಭ ಪಡೆಯುತ್ತಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ನಿಜವಾದ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ಮರು ಪರಿಶೀಲನಾ ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: Karnataka Horticulture Subsidy Schemes: ತೋಟಗಾರಿಕೆ ಇಲಾಖೆ 2026-27ನೇ ಸಾಲಿನ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ಗೃಹಲಕ್ಷ್ಮಿ ಯೋಜನೆಗೆ ಮರು ಪರಿಶೀಲನೆ ಯಾಕೆ?
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು (Guarantee Schemes) ಜನರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡುತ್ತಿವೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಸಾವಿರಾರು ಕೋಟಿ ರೂಪಾಯಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ (DBT) ಮಾಡಲಾಗುತ್ತಿದೆ.
ಆದರೆ ಯೋಜನೆಯ ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ಯೋಜನೆಯ ಪ್ರಯೋಜನ ನಿಜವಾದ ಅರ್ಹ ಕುಟುಂಬಗಳಿಗೆ ಮಾತ್ರ ತಲುಪಬೇಕು ಎಂಬ ಉದ್ದೇಶದಿಂದ ಪರಿಶೀಲನೆ ನಡೆಸಲು ಮುಂದಾಗಿದೆ.
ಮುಖ್ಯಮAತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಮನೆ ಸರ್ವೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ: Karnataka Bele Vime 2026: ಮುಂಗಾರು ಬೆಳೆ ವಿಮೆಗೆ ಅರ್ಜಿ ಆರಂಭ | ಕೊನೆಯ ದಿನಾಂಕ, ದಾಖಲೆಗಳ ಮಾಹಿತಿ ಇಲ್ಲಿದೆ
ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹ
ಸರ್ಕಾರದ ಯೋಜನೆಯ ಪ್ರಕಾರ, ಅಧಿಕಾರಿಗಳು ಫಲಾನುಭವಿಗಳ ಮನೆಗಳಿಗೆ ತೆರಳಿ ಅರ್ಜಿಯಲ್ಲಿ ನೀಡಿರುವ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ. ಈ ಸಂದರ್ಭದಲ್ಲಿ ಫಲಾನುಭವಿಗಳಿಂದ ಮರು ಪರಿಶೀಲನಾ ಅರ್ಜಿ (Re-verification Application) ಪಡೆಯಲಾಗುತ್ತದೆ.
ಇದನ್ನೂ ಓದಿ: BPL Ration Card New Application: ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ | ಮಹತ್ವದ ಮಾಹಿತಿ ಇಲ್ಲಿದೆ…
ಈ ಅರ್ಜಿಯ ಮೂಲಕ ಫಲಾನುಭವಿಗಳ ವೈಯಕ್ತಿಕ ಮಾಹಿತಿ, ಕುಟುಂಬದ ವಿವರಗಳು ಹಾಗೂ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಮಾಹಿತಿಗಳನ್ನು ಮತ್ತೆ ಸಂಗ್ರಹಿಸಲಾಗುತ್ತದೆ. ಪರಿಶೀಲನೆ ವೇಳೆ ಮುಖ್ಯವಾಗಿ ಈ ಮಾಹಿತಿಗಳನ್ನು ಪಡೆಯಲಾಗುತ್ತದೆ:
- ಮನೆಯ ಯಜಮಾನಿಯ ಹೆಸರು ಮತ್ತು ವಿಳಾಸ
- ಪಡಿತರ ಚೀಟಿ ಸಂಖ್ಯೆ (Ration Card Number)
- ಗೃಹಲಕ್ಷ್ಮಿ ಯೋಜನೆ ಮಂಜೂರಾತಿ ಪತ್ರದ ಸಂಖ್ಯೆ
- ಆಧಾರ್ ಸಂಖ್ಯೆ (Aadhaar Card Details)
- ಮತದಾರರ ಗುರುತಿನ ಚೀಟಿ ಮಾಹಿತಿ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ಸಂಖ್ಯೆ
- ಪತಿಯ ಹೆಸರು ಮತ್ತು ಆಧಾರ್ ಮಾಹಿತಿ
ಇದರ ಜೊತೆಗೆ ಫಲಾನುಭವಿಗಳು ಯಾವ ವರ್ಗಕ್ಕೆ ಸೇರಿದ್ದಾರೆ ಎಂಬ ಮಾಹಿತಿಯನ್ನೂ ಪಡೆಯಲಾಗುತ್ತದೆ.

ಬ್ಯಾಂಕ್ ಖಾತೆ ಹಾಗೂ ಕೆವೈಸಿ ಪರಿಶೀಲನೆ
ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಹೀಗಾಗಿ ಬ್ಯಾಂಕ್ ಖಾತೆಯಲ್ಲಿರುವ ಸಮಸ್ಯೆಗಳಿಂದ ಹಣ ಪಾವತಿ ಆಗದಿರುವ ಪ್ರಕರಣಗಳೂ ಸರ್ಕಾರದ ಗಮನಕ್ಕೆ ಬಂದಿವೆ.
ಇದನ್ನೂ ಓದಿ: Crop Loan Waiver: ರೈತರಿಗೆ ಭರ್ಜರಿ ಗಿಫ್ಟ್ | ₹75,000 ಸಾಲ ಮನ್ನಾ ಘೋಷಣೆ; ಕರ್ನಾಟಕದಲ್ಲೂ ಜಾರಿಯಾಗುತ್ತಾ?
ಕೆಲವರ ಬ್ಯಾಂಕ್ ಖಾತೆಗಳು ನಿಷ್ಕ್ರಿಯವಾಗಿರುವುದು (Inactive Account), ಆಧಾರ್ ಲಿಂಕ್ ಆಗದಿರುವುದು ಅಥವಾ ಎನ್‌ಪಿಸಿಐ (NPCI) ಸಮಸ್ಯೆಗಳ ಕಾರಣದಿಂದ ಹಣ ವರ್ಗಾವಣೆಯಲ್ಲಿ ತೊಂದರೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮನೆ ಮನೆ ಸರ್ವೆ ಸಂದರ್ಭದಲ್ಲಿ ಬ್ಯಾಂಕ್ ಖಾತೆಯ ಸ್ಥಿತಿ ಮತ್ತು ಇ-ಕೆವೈಸಿ (e-KYC) ಪೂರ್ಣಗೊಂಡಿದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತದೆ.
ಫಲಾನುಭವಿಗಳಿಂದ ಸ್ವಯಂ ಘೋಷಣೆ ಪತ್ರ ಪಡೆಯಲಾಗುತ್ತದೆ
ಮರು ಪರಿಶೀಲನಾ ಪ್ರಕ್ರಿಯೆಯ ಪ್ರಮುಖ ಭಾಗವಾಗಿ ಫಲಾನುಭವಿಗಳಿಂದ ಸ್ವಯಂ ಘೋಷಣೆ ಪತ್ರ (Self Declaration Form) ಪಡೆಯಲು ಸರ್ಕಾರ ಮುಂದಾಗಿದೆ. ಈ ಪತ್ರದಲ್ಲಿ ಫಲಾನುಭವಿಯು ಕೆಲವು ವಿಷಯಗಳನ್ನು ಖಚಿತಪಡಿಸಬೇಕಾಗುತ್ತದೆ.
ತಾನು ಮತ್ತು ತನ್ನ ಪತಿ ಆದಾಯ ತೆರಿಗೆ ಪಾವತಿದಾರರಲ್ಲ (Income Tax Payer), ಜಿಎಸ್‌ಟಿ ಪಾವತಿದಾರರಲ್ಲ (GST Payer) ಹಾಗೂ ಸರ್ಕಾರಿ ನೌಕರರಲ್ಲ (Government Employee) ಎಂಬುದನ್ನು ಘೋಷಿಸಬೇಕಾಗುತ್ತದೆ.
ಅಲ್ಲದೆ, ಅರ್ಜಿಯಲ್ಲಿ ನೀಡಿರುವ ಎಲ್ಲಾ ಮಾಹಿತಿ ಸತ್ಯವಾಗಿದ್ದು, ತಪ್ಪು ಮಾಹಿತಿ ನೀಡಿರುವುದು ಕಂಡುಬAದರೆ ಕಾನೂನು ಕ್ರಮಕ್ಕೆ ಒಳಗಾಗಲು ಸಿದ್ಧ ಎಂಬುದಾಗಿ ಒಪ್ಪಿಗೆ ನೀಡಬೇಕಾಗುತ್ತದೆ.
ಇದನ್ನೂ ಓದಿ: Free Sheep Farming Training: ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ | ಊಟ-ವಸತಿಯೊಂದಿಗೆ 13 ದಿನಗಳ ತರಬೇತಿ
ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಉದ್ದೇಶ
ಗೃಹಲಕ್ಷ್ಮಿ ಯೋಜನೆಯಡಿ ದೊಡ್ಡ ಸಂಖ್ಯೆಯಲ್ಲಿ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಅರ್ಜಿದಾರರ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ.
ಈ ಸರ್ವೆಯ ಮೂಲಕ ಆದಾಯ ತೆರಿಗೆ ಪಾವತಿಸುವವರು, ಜಿಎಸ್‌ಟಿ ನೋಂದಣಿ ಹೊಂದಿರುವವರು, ಸರ್ಕಾರಿ ನೌಕರರು ಅಥವಾ ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆ.
1.30 ಕೋಟಿ ಫಲಾನುಭವಿಗಳ ಮಾಹಿತಿ ಪರಿಶೀಲನೆ
ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 1.30 ಕೋಟಿ ಮಹಿಳೆಯರು ಫಲಾನುಭವಿಗಳಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇದುವರೆಗೆ ಸುಮಾರು ₹72 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಡಿಬಿಟಿ (Direct Benefit Transfer) ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ.
ಪರಿಶೀಲನೆ ವೇಳೆ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿಸುವ ಸುಮಾರು 1.94 ಲಕ್ಷ ಫಲಾನುಭವಿಗಳು ಗುರುತಿಸಲಾಗಿದೆ. ಸುಮಾರು 2.88 ಲಕ್ಷ ಮೃತ ಫಲಾನುಭವಿಗಳ ಮಾಹಿತಿ ಪತ್ತೆಯಾಗಿದೆ. ಸಾವಿರಾರು ಫಲಾನುಭವಿಗಳು ಮರು ಅರ್ಜಿ ಸಲ್ಲಿಸಿದ್ದಾರೆ. ಈ ಮಾಹಿತಿಗಳ ಆಧಾರದ ಮೇಲೆ ಸರ್ಕಾರ ಈಗ ಸಂಪೂರ್ಣ ಪರಿಶೀಲನೆ ನಡೆಸಲು ಮುಂದಾಗಿದೆ.
ಇದನ್ನೂ ಓದಿ: Karnataka Rain Deficit: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೃಷಿ ಚಟುವಟಿಕೆ ಕುಂಠಿತ | ಯಾವ್ಯಾವ ಜಿಲ್ಲೆಗಳಿಗೆ ಕಂಟಕ?
ಫಲಾನುಭವಿಗಳು ಏನು ಮಾಡಬೇಕು?
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ. ಸರ್ಕಾರದ ಉದ್ದೇಶ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಹಣ ತಲುಪಿಸುವುದು.
ಅಧಿಕಾರಿಗಳು ಮನೆಗೆ ಬಂದಾಗ ಫಲಾನುಭವಿಗಳು ತಮ್ಮ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸರಿಯಾದ ಮಾಹಿತಿ ನೀಡಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಡಿತರ ಚೀಟಿ, ಮೊಬೈಲ್ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ.
ಮನೆ ಮನೆ ಸರ್ವೆ ಪೂರ್ಣಗೊಂಡ ಬಳಿಕ ಯೋಜನೆಯ ನಿಜವಾದ ಫಲಾನುಭವಿಗಳ ಪಟ್ಟಿ ಮತ್ತಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅರ್ಹ ಕುಟುಂಬಗಳಿಗೆ ಯೋಜನೆಯ ನೆರವು ಮುಂದುವರಿಯಲಿದ್ದು, ಅನರ್ಹರನ್ನು ಪತ್ತೆಹಚ್ಚಿ ವ್ಯವಸ್ಥೆಯನ್ನು ಸರಿಪಡಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
BPL Ration Card New Application: ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ | ಮಹತ್ವದ ಮಾಹಿತಿ ಇಲ್ಲಿದೆ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.