Karnataka Heavy Rain Alert: ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Spread the love

WhatsApp Group Join Now
Telegram Group Join Now

Karnataka Heavy Rain Alert: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ಮುಂಗಾರು ಮಳೆ (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Fasal Bima Yojana: ಮಳೆ ಕೈಕೊಟ್ಟರೆ ಚಿಂತೆ ಬೇಡ! ರೈತರ ಖಾತೆಗೆ ಬರಲಿದೆ ಬೆಳೆ ವಿಮೆ ಹಣ

ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ ಜೂನ್ 30ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗಲಿದ್ದು, ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: PM Awas Yojana 2026: ಪಿಎಂ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ | ಯಾರಿಗೆ ಸಿಗಲಿದೆ ಈ ಸೌಲಭ್ಯ? ಇಲ್ಲಿದೆ ಸಂಪೂರ್ಣ ಮಾಹಿತಿ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಜೂನ್ 28 ಮತ್ತು 29ರಂದು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ರೈತರು ಹಾಗೂ ಸಾರ್ವಜನಿಕರು ಹವಾಮಾನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ATM Card 2 Lakh Insurance: ಎಟಿಎಂ ಕಾರ್ಡ್ ಇದ್ದರೆ ಸಾಕು, ಕುಟುಂಬಕ್ಕೆ ಸಿಗಲಿದೆ ₹2 ಲಕ್ಷ ವಿಮೆ | ಇದನ್ನು ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಜೂನ್ 29 ಮತ್ತು 30ರಂದು ಕರಾವಳಿ ಭಾಗದಲ್ಲಿಯೂ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪ್ರವಾಸಿಗರು, ಮೀನುಗಾರರು ಹಾಗೂ ಸ್ಥಳೀಯರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Rain Nakshatras Forecast 2026: 2026ರ ಮಳೆ ಭವಿಷ್ಯ: ಬರದ ಭೀತಿ ಹೆಚ್ಚಿಸಿದ ಮಳೆ ನಕ್ಷತ್ರಗಳು | ಈ ವರ್ಷದ ಮುಂಗಾರು ಲೆಕ್ಕಾಚಾರ ಇಲ್ಲಿದೆ

ಮುಂದಿನ ಏಳು ದಿನ ರಾಜ್ಯದಲ್ಲಿ ಮಳೆ ಮುಂದುವರಿಕೆ ಸಾಧ್ಯತೆ

ಮುಂಗಾರು ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಜೂನ್ 26ರಿಂದ 28ರವರೆಗೆ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಲಾಗಿತ್ತು.

ಜೂನ್ 29ರಿಂದ ಜುಲೈ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

WhatsApp Group Join Now
Telegram Group Join Now

ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಜೂನ್ 29 ಮತ್ತು 30ರಂದು ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: E-Swathu: ಗ್ರಾಮ ಪಂಚಾಯತಿ ವ್ಯಾಪ್ತಿಯ ‘ಇ-ಸ್ವತ್ತು’ ನಿಯಮ ಸಡಿಲಿಕೆ | ಸರ್ಕಾರದ ಮಹತ್ವದ ಘೋಷಣೆ

Karnataka Heavy Rain Alert
Karnataka Heavy Rain Alert

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಮುಂದಿನ 24ರಿಂದ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ (Cloudy Weather) ಇರಲಿದೆ. ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Podi Process Karnataka: ಪೋಡಿ ಎಂದರೇನು? ಏಕೆ ಮಾಡಿಸಬೇಕು? ರೈತರಿಗೆ ಸಂಪೂರ್ಣ ಮಾರ್ಗದರ್ಶಿ

ಮಳೆಯ ಮಾಹಿತಿ ಪಡೆಯುವುದು ಹೇಗೆ?

ನಿಮ್ಮ ಪ್ರದೇಶದಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ (Varuna Mitra Helpline) ಸಹಾಯ ಪಡೆಯಬಹುದು. 92433 45433 ಸಂಖ್ಯೆಗೆ ಕರೆ ಮಾಡುವ ಮೂಲಕ ನಿಮ್ಮ ಊರಿನ ಹವಾಮಾನ ಮಾಹಿತಿ ಪಡೆಯಬಹುದು.

ಇದಲ್ಲದೆ ರೈತರು ಮೇಘದೂತ್ ಆಪ್ (Meghdoot App) ಮೂಲಕ ಮುಂದಿನ ಐದು ದಿನಗಳ ಹವಾಮಾನ ಮುನ್ಸೂಚನೆ ಪಡೆಯಬಹುದು. ಈ ಆಪ್‌ನಲ್ಲಿ ಮಳೆಯ ಮಾಹಿತಿ, ಗಾಳಿಯ ವೇಗ, ಹವಾಮಾನ ಬದಲಾವಣೆ ಹಾಗೂ ಕೃಷಿಗೆ ಸಂಬAಧಿಸಿದ ಸಲಹೆಗಳನ್ನು ಉಚಿತವಾಗಿ ಪಡೆಯುವ ಅವಕಾಶವಿದೆ.

ಇದನ್ನೂ ಓದಿ: Karnataka Pension Scheme: ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನಕ್ಕೆ ಹೊಸ ನಿಯಮ | 18.45 ಲಕ್ಷ ಜನರಿಗೆ ಪೆನ್ಷನ್ ಬಂದ್!

ಮಳೆ ಮುನ್ಸೂಚನೆಯನ್ನು ಮೊದಲೇ ತಿಳಿದುಕೊಳ್ಳುವುದರಿಂದ ರೈತರು ಬೆಳೆ ನಿರ್ವಹಣೆ, ಕೃಷಿ ಚಟುವಟಿಕೆ ಹಾಗೂ ಇತರ ಕೆಲಸಗಳನ್ನು ಸೂಕ್ತವಾಗಿ ಯೋಜಿಸಿಕೊಳ್ಳಬಹುದು.

ಒಟ್ಟಿನಲ್ಲಿ, ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳು ಮಳೆಯ ವಾತಾವರಣ ಮುಂದುವರಿಯಲಿದೆ. ಜನರು ಹವಾಮಾನ ಇಲಾಖೆಯ (Weather Update) ಸೂಚನೆಗಳನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ.

Gruha Lakshmi Scheme Doorstep Verification: ಮನೆ ಬಾಗಿಲಲ್ಲೇ ಗೃಹಲಕ್ಷ್ಮೀ ಯೋಜನೆಗೆ ಮರು ಅರ್ಜಿ | ಸರ್ಕಾರದ ಮಹತ್ವದ ನಿರ್ಧಾರ


Spread the love
error: Content is protected !!