Amrita Swabhimani Kurigahi Scheme : ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ವಿವಿಧ ಜಿಲ್ಲೆಗಳ ಕುರಿ ಸೊಸೈಟಿಯ ನೋಂದಾಯಿತ ಸದಸ್ಯರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕುರಿಗಾಹಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವಿವಿಧ ಜಿಲ್ಲೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರಿ ಮತ್ತು ಮೇಕೆ ಸಾಕಾಣಿಕೆದಾರರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನಗೊಳಿಸಿದೆ. ಅರ್ಹ ಕುರಿಗಾಹಿಗಳಿಗೆ ಈ ಯೋಜನೆಯಡಿ 20+1 ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ತಲಾ 1.75 ಲಕ್ಷ ಆರ್ಥಿಕ ನೆರವು ಒದಗಿಸಲಾಗುತ್ತದೆ.
ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities
ಏನಿದು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ?
ಈಗಾಗಲೇ ಕುರಿ ಸಾಕಾಣಿಕೆದಾರರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕುರಿಗಳು ಅಕಾಲಿಕ ಸಾವನ್ನಪ್ಪಿದರೆ ‘ಅನುಗ್ರಹ ಯೋಜನೆ’ಯಡಿ ಪ್ರತಿ ಕುರಿಗೆ 5 ಸಾವಿರ ಪರಿಹಾರ ನೀಡಲಾಗುತ್ತಿದೆ. ಕುರಿಗಾರರು ಆಕಸ್ಮಿಕ, ಅಕಾಲಿಕ ನಿಧನ ಹೊಂದಿದರೆ ವಿಮಾ ಸೌಲಭ್ಯ ಯೋಜನೆಯಡಿ ಅವರ ಕುಟುಂಬದ ಅವಲಂಬಿತರಿಗೆ 5 ಲಕ್ಷ ರೂಪಾಯಿ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ಯನ್ನು ಅಧಿಕೃತವಾಗಿ ಅನುಷ್ಠಾನಗೊಳಿಸಲಾಗಿದೆ. ಬಹಳ ಹಿಂದಿನಿ೦ದಲೂ ಸಾಂಪ್ರದಾಯಿಕವಾಗಿ ಕುರಿ ಮೇಕೆ ಸಾಕಾಣಿಕೆ ಮಾಡುತ್ತಿರುವ ಅತ್ಯಂತ ದುರ್ಬಲವಾಗಿರುವ ಕುರಿಗಾಹಿ ಕುಟುಂಬಗಳಿಗೆ ಆರ್ಥಿಕವಾಗಿ ಉತ್ತೇಜನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024
1.75 ಲಕ್ಷ ಆರ್ಥಿಕ ನೆರವು
ಕುರಿ, ಮೇಕೆ ಸಾಕಾಣಿಕೆದಾರರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ‘ಅಮೃತ ಸ್ವಾಭಿಮಾನಿ ಯೋಜನೆ’ಯಡಿ 20+1 ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಪ್ರತಿ ಫಲಾನುಭವಿಗೆ 1.75 ಲಕ್ಷ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ರಾಜ್ಯದಲ್ಲಿನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ ಸದಸ್ಯರಿಗೆ ಈ ಯೋಜನೆ ಅನ್ವಯವಾಗಿದ್ದು; ಕುರಿ ಸೊಸೈಟಿಯಲ್ಲಿ ಸದಸ್ಯರಾದವರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಸದರಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿಗಾಹಿ ಸದಸ್ಯರಿಗೆ ನೀಡಲಾಗುವ ಘಟಕ ವೆಚ್ಚ 1.75 ಲಕ್ಷ ರೂಪಾಯಿ ಪೈಕಿ ಶೇ.50ರಷ್ಟನ್ನು ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದಿಂದ ಸಾಲವಾಗಿ ನೀಡಲಾಗುತ್ತದೆ. ಶೇ.25ರಷ್ಟು ರಾಜ್ಯ ಸರ್ಕಾರದಿಂದ ಸಹಾಯಧನವಾಗಿ ಸಿಗಲಿದೆ. ಉಳಿಕೆ ಶೇ.25 ಫಲಾನುಭವಿ ವಂತಿಕೆಯ ಮೂಲಕ ಅನುಷ್ಠಾನ ಮಾಡಲಾಗುತ್ತದೆ.
ಈ ಜಿಲ್ಲೆಯ ಕುರಿಗಾಹಿಗಳಿಂದ ಅರ್ಜಿ ಆಹ್ವಾನ
2024-25ನೇ ಸಾಲಿನ ಅಮೃತ ಸ್ವಾಭಿಮಾನಿ (20+1) ಕುರಿಗಾಹಿ ಯೋಜನೆಯಡಿ ಸೌಲಭ್ಯ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅರ್ಜಿ ಕರೆಯಲಾಗಿದ್ದು; ಈ ಪೈಕಿ ಕಲಬುರಗಿ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರು ಪ್ರಯೋಜನ ಪಡೆಯಲು ನಿಗಮದ ಉಪನಿರ್ದೇಶಕರು ತಿಳಿಸಿದ್ದಾರೆ.
ಇದಕ್ಕಾಗಿ ಅರ್ಜಿ ಸಮೂನೆಯನ್ನು ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಇದೇ ಜುಲೈ 18ರ ಒಳಗಾಗಿ ಕಲಬುರಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472 237772ಗೆ ಸಂಪರ್ಕಿಸಲು ಕೋರಲಾಗಿದೆ.
ನಿಮ್ಮ ಜಿಲ್ಲೆಗಳಲ್ಲೂ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯ ಅನುದಾನ ಲಭ್ಯವಿದ್ದು; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಬಹುದು. ಈ ಕುರಿತ ಮಾಹಿತಿ ಪಡೆಯಲು ಕುರಿ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರ ಜಿಲ್ಲಾವಾರು ಕಚೇರಿ ದೂರವಾಣಿ ಸಂಖ್ಯೆಗಳಿಗಾಗಿ ಇಲ್ಲಿ ಒತ್ತಿ…