Karnataka One Week Heavy Rain: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯ ಮುನ್ಸೂಚನೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಒಂದು ವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿರುವುದು, ಕೆಲವು ತಗ್ಗು ಪ್ರದೇಶಗಳು ಜಲಾವೃತವಾಗಿರುವುದು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ಮಳೆಯ ತೀವ್ರತೆಯನ್ನು ಸ್ಪಷ್ಟಪಡಿಸುತ್ತಿದೆ.
ಮುಂಗಾರು ಆರಂಭವಾದಾಗ ಕೆಲ ದಿನಗಳ ಕಾಲ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಇದೀಗ ವಾತಾವರಣದಲ್ಲಿ ಮತ್ತೆ ಮಹತ್ತರ ಬದಲಾವಣೆ ಕಂಡುಬಂದಿದೆ. ಅರಬ್ಬಿ ಸಮುದ್ರದಿಂದ ತೇವಾಂಶ ಹೆಚ್ಚಾಗಿ ರಾಜ್ಯದೊಳಗೆ ಪ್ರವೇಶಿಸುತ್ತಿರುವುದರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
ಇದನ್ನೂ ಓದಿ: 10th Pass Women: 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ | 232 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಲೆನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ಮಳೆ ಮುಂದುವರಿಕೆ
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಆಗಸ್ಟ್ 1ರ ಶನಿವಾರ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದರೊಂದಿಗೆ ಆಗಸ್ಟ್ 2ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಕೆಲವೆಡೆ ಬಿರುಗಾಳಿ (Thunderstorm) ಹಾಗೂ ಸಿಡಿಲು (Lightning) ಸಹ ಸಂಭವಿಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಬೇಕು.
ವಿಶೇಷವಾಗಿ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದ ಮಲೆನಾಡು ಭಾಗಗಳು ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಪರ್ವತ ಪ್ರದೇಶಗಳಿಗೆ ಪ್ರವಾಸ ಹೋಗುವವರು ಹಾಗೂ ನದಿ ತೀರದ ಪ್ರದೇಶಗಳಲ್ಲಿ ವಾಸಿಸುವವರು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಕೈಗೊಳ್ಳುವುದು ಸೂಕ್ತ.
ಇದನ್ನೂ ಓದಿ: Karmikara Makkalige Scholarship 2026: ಕಾರ್ಮಿಕರ ಮಕ್ಕಳಿಗೆ ₹25,000 ವರೆಗೆ ವಿದ್ಯಾರ್ಥಿವೇತನ | ಆನ್ಲೈನ್ ಅರ್ಜಿ ಆಹ್ವಾನ

ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ
ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ.
ಈ ಆದೇಶದ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಸೇರಿವೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005 (Disaster Management Act-2005) ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕುಮಾರಧಾರಾ ನದಿ ತುಂಬಿ ಹರಿವು
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲಿನ ಜಳಕದ ಕಟ್ಟೆಯೂ ನೀರಿನಲ್ಲಿ ಮುಳುಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ನದಿಗೆ ಇಳಿಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ನದಿಯ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಹಾಗೂ ಯಾತ್ರಿಕರು ಯಾವುದೇ ಸಾಹಸಕ್ಕೆ ಮುಂದಾಗಬಾರದು ಎಂದು ಸೂಚಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ ಆರ್ಭಟ
ಮಲೆನಾಡಿನ ಪ್ರಮುಖ ಜಿಲ್ಲೆಗಳಲ್ಲೊಂದಾದ ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಜಿಲ್ಲೆಯ ಮುಳ್ಳಯ್ಯನಗಿರಿ, ಕುದುರೆಮುಖ, ಕೆಮ್ಮಣ್ಣುಗುಂಡಿ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಈ ಭಾಗಗಳಲ್ಲಿ ನಿರಂತರ ಮಳೆಯ ಪರಿಣಾಮ ಪ್ರವಾಸಿ ತಾಣಗಳ ಸೌಂದರ್ಯ ಹೆಚ್ಚಾದರೂ, ರಸ್ತೆಗಳಲ್ಲಿ ಜಾರಿ ಬೀಳುವ ಅಪಾಯ, ಗುಡ್ಡ ಕುಸಿತ (Landslide) ಹಾಗೂ ಮರಗಳು ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವAತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದೇ ವೇಳೆ ಬಯಲುಸೀಮೆ ಭಾಗಗಳಾದ ಕಡೂರು ಹಾಗೂ ತರೀಕೆರೆಯಲ್ಲೂ ಸಾಧಾರಣ ಮಳೆಯಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಕಳೆದ ಕೆಲ ವಾರಗಳಿಂದ ಮಳೆಯ ಕೊರತೆಯಿಂದ ಆತಂಕದಲ್ಲಿದ್ದ ರೈತರಿಗೆ ಈ ಮಳೆ ಬೆಳೆಗಳಿಗೆ ನೆರವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: KFD Forest Watcher Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು?
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ಕೆಳಕಂಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
- ದಕ್ಷಿಣ ಕನ್ನಡ
- ಉಡುಪಿ
- ಉತ್ತರ ಕನ್ನಡ
- ಚಿಕ್ಕಮಗಳೂರು
- ಶಿವಮೊಗ್ಗ
- ಕೊಡಗು
- ಹಾಸನದ ಮಲೆನಾಡು ಭಾಗ
- ಪಶ್ಚಿಮ ಘಟ್ಟ ವ್ಯಾಪ್ತಿಯ ಇತರೆ ಪ್ರದೇಶಗಳು
ಇದರ ಜೊತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.