Physical Education Teachers Recruitment 2024 : ಕರ್ನಾಟಕ ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅವಶ್ಯಕತೆ ಇರುವ 5,500 ದೈಹಿಕ ಶಿಕ್ಷಕರ ನೇಮಕಾತಿಗಾಗಿ ಸಿದ್ಧತೆ ಆರಂಭವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಹೇಳಿಕೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅವಶ್ಯಕತೆ ಇರುವ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಒಪ್ಪಿಗೆ ಸಿಗಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕರ ಕೊರತೆ ಕೂಡ ಇದ್ದು, ಈ ಹುದ್ದೆಗಳನ್ನು ಸಹ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಒಟ್ಟಾರೆ ಕರ್ನಾಟಕ ರಾಜ್ಯದ್ಯಂತ 40,000 ಶಿಕ್ಷಕರ ಅಗತ್ಯವಿದ್ದು, ಹಂತ ಹಂತವಾಗಿ ಈ ಎಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳ ವಿವರ
ಪ್ರಸ್ತುತ ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 2,000 ಹುದ್ದೆಗಳು, ಪ್ರೌಢಶಾಲೆಗಳಲ್ಲಿ 1,500 ಹುದ್ದೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 2,000 ಹುದ್ದೆಗಳು ಖಾಲಿ ಇವೆ. ಎಲ್ಲಾ ಸೇರಿ ಕರ್ನಾಟಕ ರಾಜ್ಯಾದ್ಯಂತ ಒಟ್ಟು 5,500 ಹುದ್ದೆಗಳು ಖಾಲಿ ಇವೆ.
ದೈಹಿಕ ಶಿಕ್ಷಕರ ನೇಮಕಾತಿಯ ಕುರಿತು ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವುದರಿಂದ ಶೀಘ್ರದಲ್ಲಿಯೆ ಇದಕ್ಕೆ ಅನುಮೋದನೆ ದೊರೆಯಲಿದೆ’ ಎಂದು ತಿಳಿಸಿರುತ್ತಾರೆ.

ದೈಹಿಕ ಶಿಕ್ಷಕ ಹುದ್ದೆಗಳಿಗೆ ಅರ್ಹತೆಗಳು
- ಕರ್ನಾಟಕದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗಿಕೃತ ವಿಶ್ವವಿದ್ಯಾಲಯದಿಂದ ಬಿಪಿ.ಇಡಿ ಶಿಕ್ಷಣ ಹೊಂದಿರಬೇಕು.
- ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಪಿ.ಇಡಿ ಶಿಕ್ಷಣವನ್ನು ಪಡೆದಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯ ವಿವರವನ್ನು ಅಧಿಕೃತ ಅಧಿಸೂಚನೆ ಬಿಡುಗಡೆಯಾದ ಮೇಲೆ ತಿಳಿಸಲಾಗುವುದು.
ಆಯ್ಕೆ ಪ್ರಕ್ರಿಯೆ Selection Procedure
ಅರ್ಜಿ ಸಲ್ಲಿಸಲು ಎಲ್ಲಾ ಅರ್ಹತೆಗಳನ್ನು ಹೊಂದಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (Written test) ನಡೆಸಿ ದಾಖಲೆ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
3,000 ಕರ್ನಾಟಕ ಪಬ್ಲಿಕ್ ಶಾಲೆಗಳು ಆರಂಭ
Karnataka Government Public School ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿ ಅವರಿಗೆ 14 ವರ್ಷಗಳ ಕಾಲ ಶಿಕ್ಷಣ ಸಿಗಲಿ ಎಂಬ ಕಾರಣದಿಂದಾಗಿ ಹೊಸದಾಗಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ. ಇದರಿಂದ ಕರ್ನಾಟಕ ರಾಜ್ಯದ ಬಡ ಪ್ರತಿಭಾವಂತ ಮಕ್ಕಳಿಗೆ ತುಂಬಾ ಅನುಕೂಲವಾಗಲಿದೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.