ಕಾರು, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ | ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ… Karnataka Swavalambi Sarathi Scheme 2024

Spread the love

Karnataka Swavalambi Sarathi Scheme 2024 : ಯುವಜನರ ಸ್ವಯಂ ಉದ್ಯೋಗಕ್ಕೆ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ (Swavalambi Sarathi Yojana) ಗರಿಷ್ಟ 3 ಲಕ್ಷ ರೂಪಾಯಿ ವರೆಗೂ ವಾಹನ ಖರೀದಿಗೆ ಸಬ್ಸಿಡಿ (Subsidy on vehicle purchase) ಒದಗಿಸಲಾಗುತ್ತದೆ.

ಏನಿದು ಸ್ವಾವಲಂಬಿ ಸಾರಥಿ ಯೋಜನೆ?
WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದ ವಿಶಿಷ್ಟ ಯೋಜನೆ ಇದು. ‘ಸ್ವಾವಲಂಬಿ ಸಾರಥಿ’ ಹೊಸ ಯೋಜನೆಯನ್ನು 2023-24ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಿಚಯಿಸಿದ್ದಾರೆ.

ಈ ಯೋಜನೆಯಡಿ ವಿವಿಧ ಸಮುದಾಯದ ನಿರುದ್ಯೋಗಿ ಯುವ ಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಸಾಲದ ಶೇ.50ರಷ್ಟು ಅಂದರೆ, ಗರಿಷ್ಠ 3 ಲಕ್ಷ ರೂಪಾಯಿ ಸಬ್ಸಿಡಿ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees

ವಾಹನ ಖರೀದಿಗೆ ಎಷ್ಟು ಸಹಾಯಧನ ಸಿಗುತ್ತದೆ?

ನಾಲ್ಕು ಚಕ್ರಗಳ (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್) ವಾಹನವನ್ನು ಖರೀದಿಸಲು ಬಯಸುವ ಫಲಾನುಭವಿಗಳಿಗೆ ರಾಷ್ಟ್ರೀಕೃತ ಬ್ಯಾಂಕ್ / ಗ್ರಾಮೀಣ ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಯಾಗಿದ್ದಲ್ಲಿ, ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಾಹನದ ಮೌಲ್ಯದ ಶೇ.50ರಷ್ಟು ರಷ್ಟು ಸಬ್ಸಿಡಿ, ಅಂದರೆ ಗರಿಷ್ಠ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ.

ಬ್ಯಾಂಕ್ ಪಾಲಿನ ಸಾಲಕ್ಕೆ ಬ್ಯಾಂಕ್ ನಿಗದಿಪಡಿಸುವ ಚಾಲ್ತಿ ದರದ ಬಡ್ಡಿಯೊಂದಿಗೆ ಸಾಲದ ಮೊತ್ತವನ್ನು ನಿಗದಿತ ಕಂತುಗಳಲ್ಲಿ ಮರುಪಾವತಿಸಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯ ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು.

ಇದನ್ನೂ ಓದಿ: 18,000 ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ನೇಮಕಾತಿ | ಮಾಂಟೆಸ್ಸರಿ ಟೀಚರ್ ಹುದ್ದೆಗೆ ಅರ್ಹತೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Anganwadi Montessori Recruitment 2024

ಸಬ್ಸಿಡಿ ಪಡೆಯಲು ಅರ್ಹತೆಗಳೇನು?

ಅರ್ಜಿದಾರರು 21 ರಿಂದ 45 ವಯಸ್ಸಿನೊಳಗಿನ ನಿರುದ್ಯೋಗಿಯಾಗಿರಬೇಕು. ಎಲ್ಲಾ ಮೂಲಗಳಿಂದ ಬರುವ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ 98,000 ರೂಪಾಯಿ, ಪಟ್ಟಣ ಪ್ರದೇಶದವರಿಗೆ 1,20,000 ರೂಪಾಯಿ ಒಳಗಿರಬೇಕು.

ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಲಘುವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಅರ್ಜಿದಾರ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme

Karnataka Swavalambi Sarathi Scheme 2024

ಬೇಕಾಗುವ ದಾಖಲೆಗಳೇನು?

  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ವಾಹನ ಚಾಲನಾ ಪರವಾನಗಿ ಪ್ರತಿ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ವಾಹನದ ಅಂದಾಜು ದರಪಟ್ಟಿ
  • ಸ್ವಯಂ ಘೋಷಣೆ ಪತ್ರ

ಇದನ್ನೂ ಓದಿ: ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ರಾಜ್ಯದ ವಿವಿಧ ಜಾತಿ ಸಮುದಾಯಗಳಿಗೆ ಮೀಸಲಾಗಿರುವ ಅಭಿವೃದ್ಧಿ ನಿಗಮ ನಿಯಮಿತಗಳಿಂದ ‘ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಕೆಳಕಂಡ ಜಾತಿ, ಸಮುದಾಯದ ನಿತುದ್ಯೋಗಿ ಯುವಕರು ಅರ್ಜಿ ಸಲ್ಲಿಬಹುದುದಾಗಿದೆ:

  • ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಹಿಂದುಳಿದ ವರ್ಗದವರು
  • ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವೀರಶೈವ-ಲಿಂಗಾಯತರು
  • ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಒಕ್ಕಲಿಗರು
  • ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವಿಶ್ವಕರ್ಮ ಸಮುದಾಯದವರು
  • ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಉಪ್ಪಾರ ಸಮುದಾಯದವರು
  • ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಂಬಿಗರ ಸಮುದಾಯದವರು
  • ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಸವಿತಾ ಸಮುದಾಯದವರು
  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಮಡಿವಾಳ ಸಮುದಾಯದವರು
  • ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಮರಾಠ ಸಮುದಾಯದವರು
  • ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರು

ಇದನ್ನೂ ಓದಿ: ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ 4,115 ಕಾನ್’ಸ್ಟೇಬಲ್ ಹಾಗೂ ಪಿಎಸ್‌ಐ ಹುದ್ದೆಗಳು : ನೇಮಕಾತಿ ಯಾವಾಗ? ಅರ್ಹತೆಗಳೇನು? Karnataka Police Constable & PSI Recruitment 2024

ಅರ್ಜಿ ಸಲ್ಲಿಕೆ ಮಾಹಿತಿ

ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಡಿಯಲ್ಲಿ ಅರ್ಹ ಫಲಾನುಭವಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ದಿನಾಂಕ: ಆಗಸ್ಟ್ 30, 2024

ಅರ್ಜಿ ಸಲ್ಲಿಕೆ ಲಿಂಕ್ : Apply Now

ಇದನ್ನೂ ಓದಿ: ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation


Spread the love
WhatsApp Group Join Now
Telegram Group Join Now

2 thoughts on “ಕಾರು, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ | ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ… Karnataka Swavalambi Sarathi Scheme 2024”

Leave a Comment

error: Content is protected !!