Sewing Machine Scheme DBCDC karnataka : ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಮಹಿಳಾ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮಗಳಿಂದ ಉಚಿತ ಹೊಲಿಗೆ ಯಂತ್ರ (Free Tailoring Mission) ವಿತರಿಸಲಾಗುತ್ತಿದೆ.
ರಾಜ್ಯ ಸರ್ಕಾರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ, ವೃತ್ತಿನಿರತ ಕುಶಲಕರ್ಮಿಗಳಿಗೆ ಉಪಕರಣ ಸರಬರಾಜು ಯೋಜನೆಯಡಿ ಹೊಲಿಗೆ ಯಂತ್ರ ವಿತರಿಸುತ್ತದೆ. ಇದರ ಜೊತೆಗೆ ಈ ಬಾರಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ (D Devaraj Urs Backward Classes Development Corporation) ವತಿಯಿಂದಲೂ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಏನಿದು ಉಚಿತ ಹೊಲಿಗೆ ಯಂತ್ರ ಯೋಜನೆ?
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರತೀ ವರ್ಷ ವಿವಿಧ ಸಾಲ ಮತ್ತು ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. 2024-25ನೇ ಸಾಲಿನ ಯೋಜನೆಗಳ ಪಟ್ಟಿ ಈ ಕೆಳಗಿನಂತಿದೆ:
- ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
- ಗಂಗಾಕಲ್ಯಾಣ ಯೋಜನೆ
- ಅರಿವು – ಶೈಕ್ಷಣಿಕ ಸಾಲ ಯೋಜನೆ
- ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆÀ
- ಸ್ವಾವಲಂಭಿ ಸಾರಥಿ ಯೋಜನೆ
- ಸ್ವಯಂ ಉದ್ಯೋಗ ಸಾಲ ಯೋಜನೆ
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
- ಹೊಲಿಗೆ ಯಂತ್ರ ವಿತರಣೆ ಯೋಜನೆ
ಈ ವರ್ಷದಿಂದ ‘ಹೊಲಿಗೆ ಯಂತ್ರ ವಿತರಣೆ’ ನೂತನ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು; ಅರ್ಹ ಫಲಾನುಭವಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees
ಹೊಲಿಗೆ ಯಂತ್ರ ಪಡೆಯಲು ಯಾರೆಲ್ಲ ಅರ್ಹರು?
ಹೆಸರೇ ಹೇಳುವಂತೆ ಡಿ.ದೇವರಾಜ ಅರಸು ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾಗಿದ್ದು; ಈ ಯೋಜನೆಯಡಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇವುಗಳ ಉಪ ಸಮುದಾಯಗಳು ಈ ಯೋಜನೆಗೆ ಅರ್ಹವಲ್ಲ.
ಈ ಹಿಂದೆ ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು. ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000, ಪಟ್ಟಣ ಪ್ರದೇಶದವರಿಗೆ ರೂ.1,20,000ಗಳ ಮಿತಿಯಲ್ಲಿರಬೇಕು. ಮೇಲ್ಕಾಣಿಸಿದ ಪ್ರವರ್ಗ ಹಾಗೂ ವಾರ್ಷಿಕ ವರಮಾನವುಳ್ಳ 18 ರಿಂದ 55 ವರ್ಷಗಳ ವಯೋಮಿತಿಯ ಮಹಿಳೆಯರು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ ಹುದ್ದೆಗಳು | ಈ ಜಿಲ್ಲೆಗಳಿಂದ ಅರ್ಜಿ ಆಹ್ವಾನ… Karnataka Anganwadi Vacancies
ಹೇಗೆ ಅರ್ಜಿ ಸಲ್ಲಿಸಬೇಕು?
ಡಿ.ದೇವರಾಜ ಅರಸು ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾ೦ಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
http://sevasindhu.karnataka.gov.in ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 31-08-2024
ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳಿಗೆ ಇಲ್ಲಿ ಒತ್ತಿ…
Free sewing Machine
Shanmuakh
Hirelingadahalli
Tq Haveri
Dis Haveri
Pos Kurubagonda