Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ.
ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ ಆಗಸ್ಟ್ 12ರಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನದಲ್ಲಿ 6,590 ಹೊಸ ಗ್ರಂಥಾಲಯಗಳನ್ನು ಲೋಕಾರ್ಪಣೆ ಮಾಡಿದ್ದಾರೆ.
ಮೇಲ್ದರ್ಜೆಗೇರಿದ ಗ್ರಾಮೀಣ ಗ್ರಂಥಾಲಯಗಳು
ಈಚೆಗೆ ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಅರಿವು ಕೇಂದ್ರಗಳಾಗಿ (Arivu Kendra) ಮೇಲ್ದರ್ಜೆಗೇರಿಸಲಾಗಿದೆ. 5,691 ಗ್ರಂಥಾಲಯಗಳಿಗೆ ತಲಾ 2 ಕಂಪ್ಯೂಟರ್ ಹಾಗೂ ಪೂರಕ ಸಾಧನಗಳನ್ನು ಒದಗಿಸಿ, ಅಂತರ್ಜಾಲ ವ್ಯವಸ್ಥೆ ಕಲ್ಪಿಸುವ ಮೂಲಕ ಡಿಜಿಟಲೀಕರಣಗೊಳಿಸಲಾಗಿದೆ. ಅಂಗವಿಕಲರಿಗೆ ಅನುಕೂಲ ಮಾಡಿಕೊಡಲು ರಾಜ್ಯಾದ್ಯಂತ 814 ಬೀಕನ್ ಗ್ರಂಥಾಲಯಗಳನ್ನು (Beacon Library) ಪ್ರಾರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದೀಗ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ನೂತನವಾಗಿ 6,599 ಗ್ರಂಥಾಲಯಗಳನ್ನು ಆರಂಭಿಸಲು ಯೋಜಿಸಲಾಗಿದೆ. ಈ ನೂತನ ಗ್ರಂಥಾಲಯ ಹುದ್ದೆಗಳ ನೇಮಕಾತಿ ಹೇಗೆ? ಯಾರಿಗೆಲ್ಲ ಉದ್ಯೋಗವಕಾಶ ಸಿಗಲಿದೆ? ನೇಮಕಾತಿ ಮಾನದಂಡಗಳೇನು? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ…
ಇದನ್ನೂ ಓದಿ: ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules
ಗ್ರಂಥಾಲಯ ಹುದ್ದೆಗೆ ವಿದ್ಯಾರ್ಹತೆ ಏನು?
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು (Library supervisor) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಪಿಯುಸಿ ಶಿಕ್ಷಣದ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ
ಪ್ರಮುಖವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬ೦ಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.ಒಂದು ವೇಳೆ ಸಂಬ೦ಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.
ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ (General category candidates) ಅಭ್ಯರ್ಥಿಗಳಿಗೆ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಮಾಸಿಕ ಸಂಬಳವೆಷ್ಟು?
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸದ್ಯಕ್ಕೆ ಮಾಸಿಕ 15,196 ರೂಪಾಯಿ ಸಂಬಳ ನೀಡಲಾಗುತ್ತದೆ. ನಿನ್ನೆ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿರುವ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಹೀಗಾಗಿ ಸದ್ಯದಲ್ಲಿಯೇ ಗ್ರಂಥಾಲಯ ಮೇಲ್ವಿಚಾರಕರ ಸಂಬಳ-ಸವಲತ್ತುಗಳು ಏರಿಕೆಯಾಗಲಿವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಆಯಾ ಜಿಲ್ಲಾ ಪಂಚಾಯತಿ ವತಿಯಿಂದ ಅಧಿಸೂಚನೆ ಪ್ರಕಟಿಸಿ, ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸುತ್ತದೆ. ಆಗ ಆಬ್ಯರ್ಥಿಗಳು ಜಿಲ್ಲಾ ಪಂಚಾಯತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿ ಭರ್ತಿ ಮಾಡಿ ಸಂಬAಧಪಟ್ಟ ಗ್ರಾಮ ಪಂಚಾಯತಿ ಪಿಡಿಒಗೆ ಸಲ್ಲಿಸಬೇಕು.
ಸದ್ಯಕ್ಕೆ ಒಟ್ಟು 6,599 ಗ್ರಾಮ ಪಂಚಾಯತಿ ಹೊಸ ಗ್ರಂಥಾಲಯ ಸ್ಥಾಪನೆ ಘೋಷಣೆಯಾಗಿದ್ದು; ಈ ಸಂಬAಧ ನೂತನ ಗ್ರಂಥಾಲಯ ಅನುಷ್ಠಾನ ಯೋಜನೆಯನ್ನು ಲೋಕರ್ಪಣೆ ಕೂಡ ಮಾಡಲಾಗಿದೆ. ಸದ್ಯದಲ್ಲಿಯೇ ಹೊಸ ಗ್ರಂಥಾಲಯ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು; ಸ್ಥಳೀಯ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
Am passed in PUC