State Govt Employees Sports Festival 2024 : 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ (Karnataka State Government Employees) ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (Youth Empowerment and Sports Department) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಸಹಯೋಗದಲ್ಲಿ ನಡೆಯಲಿರುವ ಈ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಕಳೆದ ಜೂನ್ 03, 2024ರಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಪೂರ್ವಭಾವಿ ಸಭೆಯಲ್ಲಿ ಸದರಿ ಕ್ರೀಡಾಕೂಟವನ್ನು ಶಿವಮೊಗ್ಗ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಅನಿವರ್ಯ ಕಾರಣದಿಂದ ಸದರಿ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ಆಗಸ್ಟ್ 17 ರಿಂದ 19ರ ವರೆಗೆ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಈಗಾಗಲೇ ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಯ ನೌಕರರು ಹೆಸರು ನೋಂದಣಿ ಮಾಡಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಕ್ರೀಡಾಕೂಟದಲ್ಲಿ ನೌಕರರು ಭಾಗವಹಿಸುವ ಕುರಿತು ನಿಯಮಾವಳಿಗಳ ಮಹತ್ವದ ಸೂತ್ತೋಲೆ (Circular) ಹೊರಡಿಸಿ ಹಲವು ಸೂಚನೆಗಳನ್ನು ನೀಡಿದೆ.
ಈ ನೌಕರರಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ?
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂತ್ತೋಲೆ ಅನ್ವಯ ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಆದರೆ, ಕ್ರೀಡಾಕೂಟದಲ್ಲಿ ಭಾಗವಹಿಸಲು ಈ ಕೆಳಕಂಡ ನೌಕರರಿಗೆ ಅವಕಾಶವಿಲ್ಲ:
- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು
- ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು
- ದೈಹಿಕ ಶಿಕ್ಷಣ ನಿರ್ದೇಶಕರು
- ದಿನಗೂಲಿ ನೌಕರರು
- ಅರೆಕಾಲಿಕ ನೌಕರರು
- ಕ್ಷೇಮಾಭಿವೃದ್ಧಿ ನೌಕರರು
- ಗುತ್ತಿಗೆ ನೌಕರರು
- ನಿಗಮ / ಮಂಡಳಿ ನೌಕರರು
- ಇತರೇ ಖಾಯಂ ಅಲ್ಲದ ನೌಕರರು
- ಅಬಕಾರಿ, ಅರಣ್ಯ ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು
- ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಗೆ ಅರ್ಹರಲ್ಲ
ಇನ್ನು ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ, ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳು ಇರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು, ಕಛೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
ಭಾಗವಹಿಸುವ ನೌಕರರಿಗೆ ಪ್ರಮುಖ ಸೂಚನೆಗಳು
ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ.
ಸ್ಪರ್ಧಿಗಳಿಗೆ 1 ಟ್ರಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸಲು ಅವಕಶವಿರುತ್ತದೆ.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ಸಮಯಕ್ಕೆ 1 ಗಂಟೆ ಮುಂಚಿತವಾಗಿ ಬಂದು ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳಬೇಕು.
ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕಲಾಗುತ್ತದೆ. ಜೊತೆಗೆ ಸಂಬAಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ತ ಕ್ರೀಡಾಪಟುವಿನ ಮೇಲೆ ಶಿಸ್ತು ಕ್ರಮ ಜರುಗಿಸಲು ಶಿಫಾರಸ್ಸು ಮಾಡಲಾಗುವುದು.
ರಾಜ್ಯ ಸರ್ಕಾರದ ವತಿಯಿಂದ ನಡೆಸುವ ಸದರಿ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಲಾಗಿದೆ.
ಇನ್ನು ಹಲವು ಸೂಚನೆ, ಷರತ್ತುಗಳನ್ನು ನೀಡಲಾಗಿದ್ದು; ಆಸಕ್ತ ನೌಕರರು ಸಂಪೂರ್ಣ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಹೊರಡಿಸಿದ ಸೂತ್ತೋಲೆಯನ್ನು ಡೌನ್‌ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ..
ಕ್ರೀಡಾ ಇಲಾಖೆ ಸುತ್ತೋಲೆ : Download
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees