ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದ್ದು, ಅಧಿಕೃತವಾಗಿ ಫಲಿತಾಂಶ ಪ್ರಕಟಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶದ ಪ್ರಕಟಣೆ ಕುರಿತು ಮಹತ್ವದ ಮಾಹಿತಿ ನೀಡಿದೆ.
ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 6,61,474 ಮಂದಿ ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 18,317 ಮಂದಿ ಖಾಸಗಿ ವಿದ್ಯಾರ್ಥಿಗಳಾಗಿದ್ದರು. ರಾಜ್ಯದ 1,171 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.
Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | ಯಾರಿಗೆ ಎಷ್ಟು ಸಿಗಲಿದೆ ಪೆನ್ಶನ್?
ಫಲಿತಾಂಶದ ಪ್ರಕಟಣೆ ಯಾವಾಗ?
ಕಳೆದ ವರ್ಷ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 10 ರಂದು ಪ್ರಕಟಿಸಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಸಮಯದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಮೌಲ್ಯಮಾಪನ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದ್ದು, ಏಪ್ರಿಲ್ ಮೊದಲ ವಾರದೊಳಗೆ ಸಂಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.

ಫಲಿತಾಂಶ ವೀಕ್ಷಿಸುವ ವಿಧಾನ
ದ್ವಿತೀಯ ಪಿಯುಸಿ ಫಲಿತಾಂಶವು https://karresults.nic.in/ ಅಥವಾ https://kseab.karnataka.gov.in/ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುತ್ತದೆ. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು:
ಮೊದಲಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಹೋಮ್ ಪೇಜ್‌ನಲ್ಲಿ ‘2nd PUC Results 2025’ ಲಿಂಕ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ‘Submit’ ಬಟನ್ ಒತ್ತಿದರೆ ಸ್ಕ್ರೀನ್‌ನಲ್ಲಿ ಫಲಿತಾಂಶ ಕಾಣಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು.
ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗೆ ಸುಲಭವಾಗಿ ಫಲಿತಾಂಶ ಪಡೆಯಲು ಡಿಜಿಲಾಕರ್ (DigiLocker) ಸೇವೆ ಕೂಡ ಒದಗಿಸಿದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿ ಅಥವಾ ಕಂಪ್ಯೂಟರ್‌ನಲ್ಲಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಸೇವೆಯನ್ನು ಬಳಸಲು, ವಿದ್ಯಾರ್ಥಿಗಳು ಡಿಜಿಲಾಕರ್ ಖಾತೆ ಹೊಂದಿರಬೇಕು.
BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…
ಫಲಿತಾಂಶ ಕುರಿತ ಅಧಿಕೃತ ಪ್ರಕಟಣೆ ನಿರೀಕ್ಷಿಸಿ…
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ತಾವು ಇಚ್ಛಿಸುವ ಪದವಿ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯಲ್ಲಿ ಅಲ್ಪ ಅಂಕ ಪಡೆದವರು, ಪೂರಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು, ಮರುಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ, ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ವೆಬ್‌ಸೈಟ್‌ಗಳನ್ನು ಭೇಟಿ ನೀಡಬಹುದು ಅಥವಾ ತಮ್ಮ ಕಾಲೇಜು ಪ್ರಾಂಶುಪಾಲರೊ೦ದಿಗೆ ಸಂಪರ್ಕ ಸಾಧಿಸಬಹುದು. ಶೀಘ್ರದಲ್ಲಿಯೇ ಫಲಿತಾಂಶ ಪ್ರಕಟವಾಗಲಿದ್ದು; ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಿ.
Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…