ಕರ್ನಾಟಕದಲ್ಲಿ ಈ ಬಾರಿ 2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ (Karnataka SSLC 2025) ವಾರ್ಷಿಕ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಳೆದ ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಿತ್ತು. ನಿನ್ನೆ ಏಪ್ರಿಲ್ 4ರಂದು ಅಂತಿಮ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು.
ಏಪ್ರಿಲ್ 11ರಿಂದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ
ಈ ಬಾರಿಯ ಪರೀಕ್ಷೆಗೆ ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸ್ಥಾಪಿಸಲಾಗಿತ್ತು. ಪರೀಕ್ಷೆಯ ನಂತರ, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದ್ದು, ಮೌಲ್ಯಮಾಪನದ ಮೊದಲ ಹಂತವಾದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಇದೇ ಏಪ್ರಿಲ್ 11ರಿಂದ ಆರಂಭವಾಗುತ್ತದೆ.
ವಿದ್ಯಾರ್ಥಿಗಳ ಹೆಸರು, ನೋಂದಣಿ ಸಂಖ್ಯೆ ಮುಂತಾದ ಗುರುತಿನ ಚಿಹ್ನೆಗಳನ್ನೆಲ್ಲಾ ಗೋಪ್ಯವಾಗಿಡುವ ಉದ್ದೇಶದಿಂದ ನಡೆಸಲಾಗುವ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯದಿಂದ ಮೌಲ್ಯಮಾಪಕರು ಪಕ್ಷಪಾತವಿಲ್ಲದೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನೆ ಮಾಡಲು ಅನುಕೂಲವಾಗಲಿದೆ.
ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…
ಮೌಲ್ಯಮಾಪಕರಿಗೆ ಕಟ್ಟುನಿಟ್ಟಿನ ಸೂಚನೆ
ಮೌಲ್ಯಮಾಪನದ ಮುಖ್ಯ ಹಂತವಾದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಏಪ್ರಿಲ್ 15ರಿಂದ ಶುರುವಾಗಲಿದೆ. ರಾಜ್ಯದಾದ್ಯಂತ 240ಕ್ಕೂ ಹೆಚ್ಚು ಮೌಲ್ಯಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಯಲಿದೆ.

75,000ಕ್ಕೂ ಹೆಚ್ಚು ಶಿಕ್ಷಕರನ್ನು ಮೌಲ್ಯಮಾಪಕರನ್ನಾಗಿ ನಿಯೋಜಿಸಲಾಗಿದೆ. ಈ ಶಿಕ್ಷಕರಲ್ಲಿ ಪ್ರಥಮ ದರ್ಜೆ, ಪ್ರೌಢ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ತಜ್ಞ ಶಿಕ್ಷಕರು ಸೇರಿದ್ದಾರೆ. ಮೌಲ್ಯಮಾಪನ ಕಾರ್ಯದ ಅವಧಿಯಲ್ಲಿ ನಿಯೋಜಿತ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ.
ಈ ಬಾರಿ ವಿದ್ಯಾರ್ಥಿಗಳು ಆರು ವಿಷಯಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಇದರಿಂದ ಒಟ್ಟಾರೆ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಪ್ರತಿದಿನವೂ ನಿರ್ದಿಷ್ಟ ಗುರಿ ನಿಗದಿಪಡಿಸಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು.
ಯಾವಾಗ ಬರಲಿದೆ ರಿಸೆಲ್ಟ್?
ಮೌಲ್ಯಮಾಪನ ಮುಕ್ತಾಯದ ನಂತರ, ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಮಂಡಳಿ ಅಧಿಕೃತವಾಗಿ ಪ್ರಕಟಿಸಲಿದೆ. ಸಾಮಾನ್ಯವಾಗಿ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಳ್ಳುವ ಬಳಿಕ ಎರಡು ವಾರಗಳಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಗಳನ್ನು 2025ರ ಮೇ ಮೊದಲ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಕಳೆದ ವರ್ಷ 2024ರಲ್ಲಿ ಫಲಿತಾಂಶವನ್ನು ಮೇ 9ರಂದು ಪ್ರಕಟಿಸಲಾಗಿತ್ತು. ಈ ಬಾರಿ ಅದಕ್ಕಿಂತ ಕೊಂಚ ಮೊದಲೇ ಫಲಿತಾಂಶ ಹೊರ ಬೀಳುವ ಸಂಭವವಿದೆ.
ಫಲಿತಾ೦ಶ ನೋಡುವುದು ಹೇಗೆ?
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ: karresults.nic.in ಹಾಗೂ kseab.karnataka.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Register Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಎಸ್ಸೆಸ್ಸೆಲ್ಸಿ ಫಲಿತಾಂಶ ಕುರಿತ ನಿಖರ ಮಾಹಿತಿಗಾಗಿ mahitimane.com ಫಾಲೋ ಮಾಡಿ…
Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.