Karnataka Second PUC Result- ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಿಮ್ಮ ಮೊಬೈಲ್‌ನಲ್ಲೇ ನೋಡಿ…

Spread the love

WhatsApp Group Join Now
Telegram Group Join Now

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿಯೇ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಫಲಿತಾಂಶ ನೋಡಬಹುದು…

ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಇಂದು ಏಪ್ರಿಲ್ 08ರ ಮಧ್ಯಾಹ್ನ 12:30 ಗಂಟೆಗೆ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆದು, ನಂತರ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಕಳೆದ ವರ್ಷ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 10 ರಂದು ಪ್ರಕಟಿಸಲಾಗಿತ್ತು. ಈ ವರ್ಷ ಅದಕ್ಕಿಂತ ಎರಡು ದಿನ ಮೊದಲೇ ರಿಸೆಲ್ಟ್ ಹೊರ ಬೀಳಲಿದೆ. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿಯೇ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಫಲಿತಾಂಶ ನೋಡಬಹುದು...
Karnataka Second PUC Result 2025

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಹಂತ 1: ಮೊದಲು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿ ಇಂಟರ್‌ನೆಟ್ ಬ್ರೌಸರ್ ಓಪನ್ ಮಾಡಿ ಮತ್ತು https://karresults.nic.in/ ವೆಬ್‌ಸೈಟ್ ವಿಳಾಸವನ್ನು ಟೈಪ್ ಮಾಡಿ.

ಹಂತ 2: ಆಗ Karnataka Examination Results 2025 ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಹೋಮ್ ಪೇಜ್‌ನಲ್ಲಿ ‘ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆ / II PUC Annual Exam Result announced on 08/04/2025’ ಎಂಬ ಲಿಂಕ್ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿ.

ಹಂತ 3: ಆಗ ಮತ್ತೊಂದು ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ, ನಿಮ್ಮ ನೋಂದಣಿ ಸಂಖ್ಯೆ (Registration Number) ಅಥವಾ ಹಾಲ್ ಟಿಕೆಟ್ ನಂಬರ್ ಅನ್ನು ಸರಿಯಾಗಿ ಟೈಪ್ ಮಾಡಿ, ‘Submit’ ಬಟನ್ ಕ್ಲಿಕ್ ಮಾಡಿ.

Karnataka CET 2025 Exam- ಏಪ್ರಿಲ್ 15ರಿಂದ ಸಿಇಟಿ ಪರೀಕ್ಷೆ | Hall Ticket ಡೌನ್‌ಲೋಡ್ ಮಾಡಿ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಹಂತ 4: ನೀವು ನಮೂದಿಸಿದ ಮಾಹಿತಿಯ ಆಧಾರದಲ್ಲಿ ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ತೆರೆದುಕೊಳ್ಳುತ್ತದೆ. ಇಲ್ಲಿ ನಿಮ್ಮ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಗ್ರೇಡ್ ಇತ್ಯಾದಿಗಳನ್ನು ನೋಡಬಹುದು. ಅಗತ್ಯವಿದ್ದರೆ, ಫಲಿತಾಂಶದ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಬಹುದು.

ಪಿಯುಸಿ ಫಲಿತಾಂಶವನ್ನು ವೀಕ್ಷಿಸಲು ಅಧಿಕೃತ ವೆಬ್‌ಸೈಟ್ ಅನ್ನು ಮಾತ್ರ ಬಳಸಿ, ಬೇರೆ ಯಾವುದೇ ಲಿಂಕ್‌ಗಳು ಅಥವಾ ಅಪ್ಲಿಕೇಶನ್‌ಗಳಿಗೆ ನಿಮ್ಮ ವೈಯಕ್ತಿಕ ವಿವರಗಳನ್ನು ನೀಡಬೇಡಿ. ನಿರೀಕ್ಷಿತ ಫಲಿತಾಂಶ ಬರದಿದ್ದರೆ ಹತಾಶರಾಗಬೇಡಿ, ಮತ್ತೆ ಪ್ರಯತ್ನಿಸಿ… ಶುಭವಾಗಲಿ…

ರಿಸೆಲ್ಟ್ ಲಿಂಕ್: https://karresults.nic.in/

2nd PUC Result- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…


Spread the love
error: Content is protected !!