Anganawadi Worker and Helper Recruitment : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಯಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುಲಾಗುತ್ತಿದೆ.
ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಖಾಲಿ ಇರುವ ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ…
ನೇಮಕಾತಿ ಸಂಕ್ಷಿಪ್ತ ವಿವರ
- ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
- ಹುದ್ದೆಗಳ ಸಂಖ್ಯೆ : 344 ಹುದ್ದೆಗಳು
- ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
- ಉದ್ಯೋಗ ಸ್ಥಳ : ಉತ್ತರ ಕನ್ನಡ ಜಿಲ್ಲೆ
ಖಾಲಿ ಇರುವ ಹುದ್ದೆಗಳ ವಿವರ
ಉತ್ತರ ಕನ್ನಡ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 344 ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ:
- ಅಂಗನವಾಡಿ ಸಹಾಯಕಿ : 263 ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ : 81 ಹುದ್ದೆಗಳು

ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ ಏನು?
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ (PUC) ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ (SSLC) ಪಾಸ್ ಆಗಿರಬೇಕು.
ವಯೋಮಿತಿ ಅರ್ಹತೆಗಳು
ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 19 ವರ್ಷ ಮೇಲ್ಪಟ್ಟ ಹಾಗೂ 35 ವರ್ಷದ ಒಳಗಿನ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು
- ವಾಸ ಸ್ಥಳ ದೃಢೀಕರಣ ಪತ್ರ
- ಜನನ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಅಗತ್ಯ ಶೈಕ್ಷಣಿಕ ಅಂಕ ಪಟ್ಟಿಗಳು
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ ಹಾಗೂ ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಹೇಗೆ ಸಲ್ಲಿಸಬೇಕು?
Anganawadi Worker & Helper Recruitment 2024 ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಒತ್ತಿ ಮುಂದುವರೆಯಿರಿ. ನಂತರದಲ್ಲಿ ನೀವು ಯಾವ ಜಿಲ್ಲೆ ಹಾಗೂ ತಾಲೂಕಿಗೆ ಅರ್ಜಿ ಸಲ್ಲಿಸುತ್ತಿರುವವರು ಅದನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಕೇಳಲಾಗುವ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 12-07-2024
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12-08-2024
ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆಯಾ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.