ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Women and Child Development Department) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಹಾಗೂ ಅಂಗನವಾಡಿ ಸಹಾಯಕಿ (Anganwadi helper) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸದ್ಯಕ್ಕೆ ಅರ್ಜಿ ಆಹ್ವಾನಿಸಿರುವ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ವಿದ್ಯಾರ್ಹತೆ, ಸಂಬಳ, ಇತರ ಅರ್ಹತಾ ಮಾನದಂಡಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ…
ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹುದ್ದೆಗಳು?
ಕರ್ನಾಟಕದಲ್ಲಿರುವ ಬಹುತೇಕ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳು ಖಾಲಿ ಇದ್ದು; ಹಲವು ಜಿಲ್ಲೆಗಳಲ್ಲಿ ಕಾಲ ಕಾಲಕ್ಕೆ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಇದೀಗ ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳ ಅಂಗನವಾಡಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದೆ.
- ಹಾಸನ ಜಿಲ್ಲೆ: 672 ಹುದ್ದೆಗಳು
- ದಾವಣಗೆರೆ ಜಿಲ್ಲೆ: 245 ಹುದ್ದೆಗಳು
- ಒಟ್ಟು ಹುದ್ದೆಗಳ ಸಂಖ್ಯೆ: 917
Gold Price Drop- ಅಕ್ಷಯ ತೃತೀಯಕ್ಕೆ ಪಾತಾಳಕ್ಕೆ ಇಳಿಯುತ್ತಾ ಚಿನ್ನದ ಬೆಲೆ? ಸತತ ಇಳಿಕೆ ಕಾಣುತ್ತಿರುವ ಬಂಗಾರದ ಬೆಲೆ
ಹಾಸನ ಜಿಲ್ಲೆ ಹುದ್ದಗಳ ವಿವರ
ಹಾಸನ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು 153 ಹಾಗೂ ಅಂಗನವಾಡಿ ಸಹಾಯಕಿಯರು 519 ಸೇರಿ ಒಟ್ಟು 672 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಹಾಸನ: ಕಾರ್ಯಕರ್ತೆಯರು-16, ಸಹಾಯಕಿ-80
- ಚನ್ನರಾಯಪಟ್ಟಣ: ಕಾರ್ಯಕರ್ತೆ-44, ಸಹಾಯಕಿ-112
- ಹೊಳೆನರಸೀಪುರ: ಕಾರ್ಯಕರ್ತೆ-26, ಸಹಾಯಕಿ-54
- ಬೇಲೂರು: ಕಾರ್ಯಕರ್ತೆ-04, ಸಹಾಯಕಿ-54
- ಸಕಲೇಶಪುರ: ಕಾರ್ಯಕರ್ತೆ-04, ಸಹಾಯಕಿ-41
- ಆಲೂರು: ಕಾರ್ಯಕರ್ತೆ-03, ಸಹಾಯಕಿ-17
- ಅರಸೀಕೆರೆ: ಕಾರ್ಯಕರ್ತೆ-39, ಸಹಾಯಕಿ-111
- ಅರಕಲಗೂಡು: ಕಾರ್ಯಕರ್ತೆ-17, ಸಹಾಯಕಿ-48
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-04-2025

ದಾವಣಗೆರೆ ಜಿಲ್ಲೆ ಹುದ್ದಗಳ ವಿವರ
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಕರೆಯಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು 27, ಮಿನಿ ಅಂಗನವಾಡಿ ಕಾರ್ಯಕರ್ತೆ 04 ಹಾಗೂ ಅಂಗನವಾಡಿ ಸಹಾಯಕಿಯರು 214 ಸೇರಿ ಒಟ್ಟು 245 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕುವಾರು ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ದಾವಣಗೆರೆ: ಕಾರ್ಯಕರ್ತೆ-05, ಸಹಾಯಕಿ-98
- ಹರಿಹರ: ಕಾರ್ಯಕರ್ತೆ-05, ಸಹಾಯಕಿ-44
- ಹೊನ್ನಾಳಿ: ಕಾರ್ಯಕರ್ತೆ-05, ಸಹಾಯಕಿ-34
- ಜಗಳೂರು: ಕಾರ್ಯಕರ್ತೆ-15, ಸಹಾಯಕಿ-37
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-04-2025
MUDRA Loan- ಶ್ಯೂರಿಟಿ ಇಲ್ಲದೇ ₹20 ಲಕ್ಷ ಸಾಲ | 33 ಲಕ್ಷ ಕೋಟಿ ರೂ. ಸಾಲ ವಿತರಣೆ
ವಿದ್ಯಾರ್ಹತೆ ಏನಿರಬೇಕು?
ಮೇಲ್ಕಾಣಿಸಿದ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷದೊಳಗಿನ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪಿಯುಸಿ ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು
- ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿಕಲಚೇತನರ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
- ಪತಿಯ ಮರಣ ಪ್ರಮಾಣ ಪತ್ರ (ವಿಧವಾ ಅಭ್ಯರ್ಥಿಗಳಿಗಾಗು)
- ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿಯ ಅಭ್ಯರ್ಥಿಗಳಿಗೆ ಜಿಲ್ಲಾ ಅಧಿಕಾರಿಗಳ ಪ್ರಮಾಣ ಪತ್ರ
- ವಿಚ್ಛೇದನ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
- ಯೋಜನಾ ನಿರಾಶ್ರಿತ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಸೈಜ್ ಫೋಟೋ
ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ
ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಥವಾ ನಾವು ಈ ಲೇಖನದ ಕೊನೆಯಲ್ಲಿ ನೀಡಿರುವ ಡೈರೆಕ್ಟ್ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಲಿಂಕ್ ಕ್ಲಿಕ್ ಮಾಡಿದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕೃತ ವೆಬ್‌ಸೈಟ್ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ, ತಾಲ್ಲೂಕು, ಹುದ್ದೆಯ ಪ್ರಕಾರ, ಅಧಿಸೂಚನೆ ಸಂಖ್ಯೆ, ನಿಮ್ಮ ಜಾತಿ/ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಿ.
ನಿಮ್ಮ ವರ್ಗದ ಅಂಗವಾಡಿ ಹುದ್ದೆ ಖಾಲಿಯಾಗಿದೆಯೆಂದು ಪರಿಶೀಲಿಸಿ. ನಂತರ ಬಯಸಿದ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ. ಕೇಳಲಾದ ಎಲ್ಲಾ ಮಾಹಿತಿಗಳನ್ನು ನೀಡಿ, ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
ಅರ್ಜಿಯನ್ನು ಸಂಪೂರ್ಣವಾಗಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಯಾವುದೇ ದಾಖಲೆ ಲೋಪ ಅಥವಾ ತಪ್ಪಾದ ಮಾಹಿತಿ ಇದ್ದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Apply ಮಾಡಿ
ರಾಜ್ಯದ ಇನ್ನುಳಿದ ಜಿಲ್ಲೆಗಳ ನೇಮಕಾತಿ ಕುರಿತ ನಿರಂತರ ಅಪ್ಡೇಟ್’ಗಾಗಿ mahitimane.com ಫಾಲೋ ಮಾಡಿ…