
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ (Anganwadi Recruitment 2025) ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು; ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದ್ವೀತಿಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಹಾಗೂ ಕನಿಷ್ಠ 19ರಿಂದ ಗರಿಷ್ಠ 35 ವರ್ಷದೊಳಗಿನ ಪ್ರಾಯದ ಮಹಿಳೆಯರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಜಿಲ್ಲಾವಾರು ಖಾಲಿ ಹುದ್ದೆಗಳ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.
ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ
- ಹಾವೇರಿ ಜಿಲ್ಲೆ: 244
- ಚಿಕ್ಕಮಗಳೂರು ಜಿಲ್ಲೆ: 267
- ಕೊಡಗು ಜಿಲ್ಲೆ: 332
- ಒಟ್ಟು ಹುದ್ದೆಗಳು: 843
ಹಾವೇರಿ ಜಿಲ್ಲೆ ಹುದ್ದೆಗಳ ವಿವರ
ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು-ಶಿಗ್ಗಾವಿ ತಾಲ್ಲೂಕುಗಳಲ್ಲಿ 61 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 177 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:
ಕಾರ್ಯಕರ್ತೆ ಹುದ್ದೆಗಳ ವಿವರ
- ಬ್ಯಾಡಗಿ: 03
- ಹಾನಗಲ್: 13
- ಹಾವೇರಿ: 05
- ಹಿರೇಕೆರೂರು: 12
- ರಾಣೇಬೆನ್ನೂರು: 20
- ಸವಣೂರು: 04
- ಶಿಗ್ಗಾವಿ: 04

ಸಹಾಯಕಿಯರ ಹುದ್ದೆಗಳ ವಿವರ
- ಬ್ಯಾಡಗಿ: 17
- ಹಾನಗಲ್: 21
- ಹಾವೇರಿ: 29
- ಹಿರೇಕೆರೂರು: 27
- ರಾಣೇಬೆನ್ನೂರು: 34
- ಸವಣೂರು: 23
- ಶಿಗ್ಗಾವಿ: 26
ಅರ್ಜಿ ಸಲ್ಲಿಕೆ ಕುರಿತ ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Montha Cyclone Effect- ಮೋಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-11-2025
ಕೊಡಗು ಜಿಲ್ಲೆ ಹುದ್ದೆಗಳ ವಿವರ
ಕೊಡಗು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಒಟ್ಟು 332 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-11-2025
ಚಿಕ್ಕಮಗಳೂರು ಜಿಲ್ಲೆ ಹುದ್ದೆಗಳ ವಿವರ
ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಯಲ್ಲಿ ಬರುವ ಒಟ್ಟು 267 ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-11-2025
ಮಾರ್ಗಸೂಚಿಗಳು: Download
ಅರ್ಜಿ ಲಿಂಕ್: Apply ಮಾಡಿ
ಅಧಿಕೃತ ಜಾಲತಾಣ: dwcd.karnataka.gov.in



