Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…

Spread the love

10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ನೇಮಕಾತಿ ನಡೆಯುತ್ತಿದೆ?

ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದೀಗ ಬೆಳಗಾವಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಸಂಬಂಧಿಸಿದ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ ಈ ಕೆಳಗಿನಂತಿದೆ:

  • ಬೆಳಗಾವಿ- 558
  • ದಾವಣಗೆರೆ- 245
  • ಒಟ್ಟು- 803

Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

ಬೆಳಗಾವಿ ಜಿಲ್ಲೆ ಹುದ್ದೆಗಳ ವಿವರ

ಬೆಳಗಾವಿ ಜಿಲ್ಲೆಯ ಎಲ್ಲಾ ಪ್ರಮುಖ ತಾಲ್ಲೂಕುಗಳಲ್ಲಿ ಒಟ್ಟು 558 ಹುದ್ದೆಗಳ ನೇಮಕಾತಿ ನಡೆಯಲಿದೆ. ಪ್ರತಿ ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ನೇಮಕಾತಿ ನಡೆಯುವ ತಾಲ್ಲೂಕುಗಳು: ಅರಬಾವಿ, ಅಥಣಿ, ಬೈಲಹೊಂಗಲ, ಬೆಳಗಾವಿ ಗ್ರಾಮೀಣ, ಬೆಳಗಾವಿ ನಗರ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಕಾಗವಾಡ, ಖಾನಾಪುರ, ಕಿತ್ತೂರು, ನಿಪ್ಪಾಣಿ, ರಾಯಬಾಗ, ರಾಮದುರ್ಗ, ಸವದತ್ತಿ, ಯರಗಟ್ಟಿ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-05-2025

SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

ದಾವಣಗೆರೆ ಜಿಲ್ಲೆ ಹುದ್ದೆಗಳ ವಿವರ

ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಒಟ್ಟು 245 ಹುದ್ದೆಗಳ ನೇಮಕಾತಿ ನಡೆಯಲಿದೆ. ಇಲ್ಲಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳ ನೇಮಕಾತಿ ನಡೆಯಲಿದೆ.

ನೇಮಕಾತಿ ನಡೆಯುವ ತಾಲ್ಲೂಕುಗಳು: ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ನೇಮಕಾತಿ ನಡೆಯುತ್ತಿಲ್ಲ. ಬದಲಾಗಿ ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು ತಾಲ್ಲೂಕಿನ ಅಂಗನವಾಡಿ ಖಾಲಿ ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆಯುತ್ತಿದೆ.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-04-2025

ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ | ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸದಾವಕಾಶ

ವಿದ್ಯಾರ್ಹತೆ ಮತ್ತು ವಯೋಮಿತಿ

19-35 ವರ್ಷ ವಯೋಮಿತಿಯಲ್ಲಿರುವ ಮಹಿಳೆಯರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಇನ್ನು ವಿದ್ಯಾರ್ಹತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪಾಸ್, ಅಂಗನವಾಡಿ ಸಹಾಯಕಿ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು.

ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು, ವಿಧವೆಯರು, ನಿರ್ಗತಿಕರು, ರೈತ ಆತ್ಮಹತ್ಯೆ ಪತ್ನಿಯರು ಇತ್ಯಾದಿ ಅರ್ಹ ಅಭ್ಯರ್ಥಿಗಳಿಗೆ ಮೀಸಲಾತಿ ಸಡಿಕೆಯ ಅನುಕೂಲವಿದೆ.

ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು
  • ಎಸ್‌ಎಸ್‌ಎಲ್‌ಸಿ / ಪಿಯುಸಿ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (Date of Birth Proof)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪತಿಯ ಮರಣ ಪ್ರಮಾಣ ಪತ್ರ (ವಿಧವೆ ಅಭ್ಯರ್ಥಿಗಳಿಗೆ)
  • ವಿಕಲಚೇತನರ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
  • ರೈತ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿಯ ಪ್ರಮಾಣ ಪತ್ರ
  • ವಿಚ್ಛೇದನ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
  • ಯೋಜನಾ ನಿರಾಶ್ರಿತ ಪ್ರಮಾಣ ಪತ್ರ
  • ನಿವಾಸದ ದೃಢೀಕರಣ ಪತ್ರ
  • ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಫೋಟೋ

Govt Loan Schemes- ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು

ಅರ್ಜಿ ಸಲ್ಲಿಸುವ ವಿಧಾನ

ಅರ್ಹ, ಆಸಕ್ತ ಮಹಿಳೆಯರು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ:

ಮೊದಲಿಗೆ ಈ ಲಿಂಕ್  ಕ್ಲಿಕ್, ಆಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹುದ್ದೆ ಮತ್ತು ಜಿಲ್ಲೆ ಆಯ್ಕೆ ಮಾಡಿ, ನಿಮ್ಮ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಪರಿಶೀಲಿಸಿ.

ಅರ್ಜಿಪತ್ರದ ಮಾಹಿತಿಗಳನ್ನು ಭರ್ತಿ ಮಾಡಿ ಹೆಸರು, ವಿಳಾಸ, ವಿದ್ಯಾರ್ಹತೆ, ವರ್ಗದ ಮಾಹಿತಿ, ದಾಖಲೆಗಳ ವಿವರಗಳನ್ನು ಸರಿಯಾಗಿ ನಮೂದಿಸಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಸೇವ್ ಮಾಡಿ / ಪ್ರಿಂಟ್ ತೆಗೆದುಕೊಳ್ಳಿ.

ಮುಖ್ಯ ಸೂಚನೆಗಳು

ಅರ್ಜಿ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮೊದಲು ಎಲ್ಲಾ ದಾಖಲೆಗಳ ತಯಾರಿ ಮಾಡಿಟ್ಟುಕೊಳ್ಳಿ. ತಪ್ಪು ಮಾಹಿತಿಯನ್ನು ನೀಡಿದರೆ ಅರ್ಜಿ ತಿರಸ್ಕಾರವಾಗುತ್ತದೆ. ಕೊನೆಯ ದಿನಾಂಕಕ್ಕೆ ಮುನ್ನವೇ ಅರ್ಜಿ ಸಲ್ಲಿಸಿ, ಅವಕಶ ಬಳಸಿಕೊಳ್ಳಿ…

ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ಜಿಲ್ಲೆಗಳಿಗೆ ಸಂಬಂಧಿಸಿದ ಅಧಿಸೂಚನೆಗಳು ಹಂತ ಹಂತವಾಗಿ ಬಿಡುಗಡೆಗೊಳ್ಳುತ್ತವೆ. ನೀವು ನವೀನ ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಮಾಹಿತಿಮನೆ ಡಾಟ್ ಕಾಂ ಅನ್ನು ನಿಯಮಿತವಾಗಿ ವೀಕ್ಷಿಸಿ…

ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…


Spread the love
WhatsApp Group Join Now
Telegram Group Join Now
error: Content is protected !!