ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ Anganwadi Recruitment District wise list

Spread the love

Anganwadi Recruitment District wise list : ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರು (Anganwadi teachers), ಸಹಾಯಕಿಯರ (Anganwadi assistant) ನೇಮಕಾತಿಗೆ ರಾಜ್ಯ ಸರಕಾರ ಸಕಲ ಸಿದ್ಧತೆ ನಡೆಸಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಹುದ್ದೆಗಳ ನೇಮಕ (Recruitment of Anganwadi Posts) ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now

ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕೂಡ ರಾಜ್ಯಾದ್ಯಂತ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿ ಈ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ… Panchamitra gram Panchayat whatsapp chat

ಖಾಲಿ ಹುದ್ದೆಗಳೆಷ್ಟು?
  • ಅಂಗನವಾಡಿ ಕಾರ್ಯಕರ್ತೆಯರು : 4,180
  • ಅಂಗನವಾಡಿ ಸಹಾಯಕಿಯರು : 9,411
  • ಒಟ್ಟು ಖಾಲಿ ಹುದ್ದೆಗಳು : 13,593

ಈಗಾಗಲೇ ಅರ್ಜಿ ಆಹ್ವಾನಿಸಿರುವ ಜಿಲ್ಲೆಗಳ ಪಟ್ಟಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 13,593 ಅಂಗನವಾಡಿ ಹುದ್ದೆಗಳ ಪೈಕಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಜಿಲ್ಲೆಗಳ ಪಟ್ಟಿ ಮತ್ತು ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:

ಉತ್ತರ ಕನ್ನಡ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 344

ಬೆಳಗಾವಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 313

ಕಲಬುರಗಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 299

ಹಾವೇರಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 152

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ Free Sewing Machine Scheme In Karnataka

Anganwadi Recruitment District wise list
ಯಾರೆಲ್ಲ ಅರ್ಜಿ ಸಲ್ಲಿಸಬಹುದು?

19 ರಿಂದ 35 ವರ್ಷ ವಯೋಮಿತಿ ಒಳಗಿರುವ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.

ದೈಹಿಕ ಅಂಗವಿಕಲತೆ ಪ್ರಮಾಣ ಶೇ.40ಕ್ಕಿಂತ ಕಡಿಮೆ ಇರುವ ಅಂಗವಿಕಲ ಅಭ್ಯರ್ಥಿಗಳು ಕೂಡ ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು; ಇವರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

ನವೋದಯ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6-12ನೇ ತರಗತಿ ವರೆಗೂ ವಸತಿ, ಊಟೋಪಚಾರ ಸಹಿತ ಸಂಪೂರ್ಣ ಉಚಿತ ಶಿಕ್ಷಣ JNV Entrance Exam Application 2024

ವಿದ್ಯಾರ್ಹತೆ ಏನಿರಬೇಕು?

10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿದ ಅರ್ಹ ಮಹಿಳೆಯರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಎರಡೂ ಹುದ್ದೆಗಳ ವಿದ್ಯಾರ್ಹತೆ ಈ ಕೆಳಗಿನಂತಿದೆ:

  • ಅಂಗನವಾಡಿ ಕಾರ್ಯಕರ್ತೆ : 12ನೇ ತರಗತಿ ಪಾಸ್
  • ಅಂಗನವಾಡಿ ಸಹಾಯಕಿ : 10ನೇ ತರಗತಿ ಪಾಸ್

ಸರಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗಲಿದೆ ಬಂಪರ್ ಸಂಬಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… Revised Salary of Govt Employees

ಸಂಬಳ, ಸೌಲತ್ತುಗಳೇನು?

ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂಪಾಯಿ ಹಾಗೂ ಸಹಾಯಕಿಯರಿಗೆ 8,000 ರೂಪಾಯಿ ಸಂಬಳ ನೀಡಲಾಗುತ್ತಿದೆ. ವೇತನ ಹೆಚ್ಚಿಸುವಂತೆ ಅಂಗನವಾಡಿ ಸಿಬ್ಬಂದಿ ನಿರಂತರ ಧರಣಿ, ಹಕ್ಕೊತ್ತಾಯ ಮಾಡುತ್ತಿದ್ದು; ಸದ್ಯದಲ್ಲಿಯೇ ಸಂಬಳ ಹೆಚ್ಚಾಗುವ ಸಾಧ್ಯತೆ ಇದೆ.

ಇದಕ್ಕೆ ಪೂರಕವೆಂಬ೦ತೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಅಂಗನವಾಡಿ ಸಿಬ್ಬಂದಿ ಮಾಸಿಕ ವೇತನ ಇನ್ನಷ್ಟು ಹೆಚ್ಚಳವಾಗಲಿದೆ ಎನ್ನಲಾಗುತ್ತಿದೆ.

ಸಣ್ಣ ಉದ್ಯಮ ಸ್ಥಾಪನೆಗೆ 15 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… PM Micro Food Processing Scheme PMFME

ಅರ್ಜಿ ಸಲ್ಲಿಕೆ ಹೇಗೆ?

ಇಲ್ಲಿಯ ವರೆಗೂ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಆಫ್‌ಲೈನ್’ನಲ್ಲಿ ಅರ್ಜಿ ಆಹ್ವಾನಿಸಲಾಗುತ್ತಿತ್ತು. ಈ ವರ್ಷದ ಆರಂಭದಲ್ಲಿ ಕೆಲ ಜಿಲ್ಲೆಯಲ್ಲಿ ಆನ್‌ಲೈನ್ ನೇಮಕಾತಿಯನ್ನು ಪ್ರಾಯೋಗಿಕವಾಗಿ ನಡೆಸಿದ್ದು; ಇದೀಗ ಇಡೀ ರಾಜ್ಯಕ್ಕೆ ಆನ್‌ಲೈನ್ ನೇಮಕಾತಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು https://karnemakaone.kar.nic.in/abcd/ ಭೇಟಿ ನೀಡಬೇಕು. ಉದ್ಯೋಗ ಬಯಸುವ ಜಿಲ್ಲೆ ಶಿಶು ಅಭಿವೃದ್ಧಿ ಕೇಂದ್ರ, ಅಧಿಸೂಚನೆ ಸಂಖ್ಯೆ ಅಂದರೆ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಗೆ ಹೊರಡಿಸುವ ಪ್ರಕಟಣೆ ಸಂಖ್ಯೆ ಹಾಕಬೇಕು.

ನಂತರ ನೀವು ಅರ್ಜಿ ಸಲ್ಲಿಸುತ್ತಿರುವುದು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಾ? ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗಾ? ಎಂಬುವುದನ್ನು ಆಯ್ಕೆ ಮಾಡಿ, ಮೀಸಲಾತಿ ಆಯ್ಕೆ ಮಾಡಿದ ನಂತರ ಅರ್ಜಿ ತೆರೆಯುತ್ತದೆ. ನಂತರ ಅಗತ್ಯ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಮಹಿಳೆಯರಿಗೆ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ | 1.5 ಲಕ್ಷ ರೂಪಾಯಿ ಸಬ್ಸಿಡಿ | ಈ ಸೌಲಭ್ಯ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ… Udyogini Women Loan Scheme 2024

ಅರ್ಜಿ ಸಲ್ಲಿಕೆ ಬೇಕಾಗುವ ದಾಖಲಾತಿಗಳು
  • ವಿದ್ಯಾರ್ಹತೆ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ಜನನ ಪ್ರಮಾಣ ಪತ್ರ ಅಥವಾ ವಯಸ್ಸಿನ ದೃಢೀಕರಣಕ್ಕಾಗಿ ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ
  • ಮೀಸಲಾತಿಗಾಗಿ ಜಾತಿ ಪ್ರಮಾಣ ಪತ್ರ
  • ಆತ್ಮಹತ್ಯೆ ಮಾಡಿಕೊಂಡ ರೈತರ ಹೆಂಡತಿ ಆಗಿದ್ದಲ್ಲಿ ಸ್ಥಳೀಯ ಎಸಿ ಅವರಿಂದ ಪಡೆದ ಪ್ರಮಾಣ ಪತ್ರ
  • ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
  • ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ

ಈ ಎಲ್ಲ ಅಗತ್ಯ ದಾಖಲೆ ಪತ್ರಗಳನ್ನು ಹೊಂದಿರುವ ಅಭ್ಯರ್ಥಿಗಳು ಅವುಗಳನ್ನು ಸ್ಕ್ಯಾನ್ ಮಾಡಿದ ಸಾಫ್ಟ್ ಕಾಫಿ ರೆಡಿ ಮಾಡಿಟ್ಟುಕೊಂಡರೆ ಆಗ ಆರ್ಜಿ ಸಲ್ಲಿಕೆ ಸುಲಭವಾಗುತ್ತದೆ.

ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Apply ಮಾಡಿ

ರಾಜ್ಯದ ಇನ್ನುಳಿದ ಜಿಲ್ಲೆಗಳ ನೇಮಕಾತಿ ಕುರಿತ ನಿರಂತರ ಅಪ್ಡೇಟ್’ಗಾಗಿ https://mahitimane.com/ ಫಾಲೋ ಮಾಡಿ…

ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024


Spread the love
WhatsApp Group Join Now
Telegram Group Join Now

7 thoughts on “ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ Anganwadi Recruitment District wise list”

Leave a Comment

error: Content is protected !!