ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024

Spread the love

Anganwadi Teacher Jobs 2024 : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಮತ್ತು 26 ಅಂಗನವಾಡಿ ಸಹಾಯಕಿಯರು (Anganwadi assistant) ಹಾಗೂ ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

ಶೈಕ್ಷಣಿಕ ಅರ್ಹತೆ
  • ಅಂಗನವಾಡಿ ಕಾರ್ಯಕರ್ತೆ ಹುದ್ದೆ : ಪಿಯುಸಿ ಪಾಸ್
  • ಅಂಗನವಾಡಿ ಸಹಾಯಕಿ ಹುದ್ದೆ : 10ನೇ ತರಗತಿ ಪಾಸ್
ವಯಸ್ಸಿನ ಮಿತಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು
  • ಅರ್ಜಿ ನಿಗದಿತ ನಮೂನೆ (ಆನ್‌ಲೈನ್)
  • ಜನನ ಪ್ರಮಾಣ ಪತ್ರ
  • ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  • ವಾಸಸ್ಥಳ ದೃಢೀಕರಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
  • ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
Anganwadi Teacher Jobs 2024

ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

ಅರ್ಜಿ ಸಲ್ಲಿಕೆ ಹೇಗೆ?

ಅಂಹನವಾಡಿ ಹುದ್ದೆಗಳಿಗೆ ನಾವು ಕೆಳಗೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಲಿಂಕ್ ಬಳಸಿಕೊಂಡು ಅರ್ಹ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಂಗನವಾಡಿ ಹುದ್ದೆಗಳ ಅರ್ಜಿ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ, ತಾಲ್ಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಆಯ್ಕೆ, ಜಾತಿ ಕಾಲಂ ಗಳನ್ನು ಆಯ್ಕೆ ಮಾಡಿ Submiಣ ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ. ಅಲ್ಲಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅಗತ್ಯ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು.

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

ಅರ್ಜಿ ಸಲ್ಲೆಯ ಪ್ರಮುಖ ದಿನಾಂಕಗಳು
  • ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಗಸ್ಟ್ 08, 2024 ಕೊನೆಯ ದಿನವಾಗಿರುತ್ತದೆ.
  • ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 04, 2024 ಕೊನೆಯ ದಿನವಾಗಿದೆ.

ಇದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆಯಾ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : ಇಲ್ಲಿ ಒತ್ತಿ

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Haveri District Court Recruitment 2024


Spread the love
WhatsApp Group Join Now
Telegram Group Join Now

7 thoughts on “ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024”

  1. I am interested anganwadi lkg or ukg job or any officework
    My education is B A Degree and computer basic Tally and D.T.P.course completed

    Reply

Leave a Comment

error: Content is protected !!