Anganwadi Worker Helper Recruitment: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾವಾರು ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ (Anganwadi Worker) ಹಾಗೂ ಅಂಗನವಾಡಿ ಸಹಾಯಕಿ (Anganwadi Helper) ಹುದ್ದೆಗಳ ಭರ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಅರ್ಜಿಗಳನ್ನು ಆಹ್ವಾನಿಸಿದೆ.
ಸರ್ಕಾರಿ ಸೇವೆಯಂತೆಯೇ ಸಮಾಜಮುಖಿ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ. ರಾಜ್ಯದ ಕೋಲಾರ, ಹಾಸನ, ಮಂಡ್ಯ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ಕೋಲಾರ ಜಿಲ್ಲೆಯಲ್ಲಿ ಅರ್ಜಿ ಆಹ್ವಾನ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಮುತ್ರಾಲಪೇಟೆ ಬಿ, ಉತ್ತನೂರು ಎ, ಮೆಹಬೂಬ್ ನಗರ ಎ, ರೆಹಮತ್ ನಗರ ಬಿ ಹಾಗೂ ಸಿ ಮತ್ತು ಹೈದರೀನಗರ ಇ ಕೇಂದ್ರಗಳಿಗೆ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಾಮಾನ್ಯವಾಗಿ ದ್ವಿತೀಯ ಪಿಯುಸಿ (PUC) ಉತ್ತೀರ್ಣರಾಗಿರಬೇಕು.
ಆದರೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಕನಿಷ್ಠ 10ನೇ ತರಗತಿ ಪಾಸಾದವರನ್ನು ಪರಿಗಣಿಸಲಾಗುತ್ತದೆ. ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು. ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಹೆಚ್ಚಿನ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: Uchita Holige Yantra: ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ | ಸಂಪೂರ್ಣ ಮಾಹಿತಿ
ಹಾಸನ ಜಿಲ್ಲೆಯಲ್ಲಿ 136 ಹುದ್ದೆಗಳ ನೇಮಕಾತಿ
ಹಾಸನ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಒಟ್ಟು 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸಂಬಂಧಿತ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. ಜೂನ್ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತ ಮಹಿಳೆಯರು ಕೊನೆಯ ದಿನದವರೆಗೆ ಕಾಯದೆ ಅರ್ಜಿ ಸಲ್ಲಿಸುವುದು ಉತ್ತಮ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಅವಕಾಶ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 97 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಗೌರವಧನ (Honorarium) ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.
ಅರ್ಜಿ ನಮೂನೆಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮುಚ್ಚಿದ ಲಕೋಟೆಯಲ್ಲಿ ಕಚೇರಿಗೆ ಸಲ್ಲಿಸಬೇಕು. ಜೂನ್ 29 ಸಂಜೆ 5.30 ಗಂಟೆ ಅರ್ಜಿ ಸಲ್ಲಿಸಲು ಕೊನೆಯ ಸಮಯವಾಗಿದೆ.
ಪಾಂಡವಪುರ ತಾಲೂಕಿನಲ್ಲೂ ನೇಮಕಾತಿ
ಪಾಂಡವಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ 10 ಕಾರ್ಯಕರ್ತೆಯರು ಹಾಗೂ 41 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಸ್ಥಳೀಯ ಮಹಿಳೆಯರು ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಪಟ್ಟಣದ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಜೂನ್ 29 ಸಂಜೆ 5.30 ಗಂಟೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 08236-255642 ಸಂಖ್ಯೆಗೆ ಸಂಪರ್ಕಿಸಬಹುದು.

ಇದನ್ನೂ ಓದಿ: PMMSY Scheme Subsidy: ಬೈಕ್, ಇ-ರಿಕ್ಷಾ ಖರೀದಿಗೆ ಸರ್ಕಾರದಿಂದ ಸಹಾಯಧನ | ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ
ಆಲೂರು-ಸಿದ್ದಾಪುರ ವ್ಯಾಪ್ತಿಯಲ್ಲಿ ಸಹಾಯಕಿ ಹುದ್ದೆ
ಹಾಸನ ಜಿಲ್ಲೆಯ ಆಲೂರು ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯ ಸಿದ್ದಾಪುರ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಹುದ್ದೆ ಖಾಲಿ ಇದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಜೂನ್ 30 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ 9902847504 ಅಥವಾ 8970383966 ಸಂಖ್ಯೆಗೆ ಸಂಪರ್ಕಿಸಬಹುದು.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ 59 ಹುದ್ದೆಗಳು
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ 17 ಅಂಗನವಾಡಿ ಕಾರ್ಯಕರ್ತೆ ಹಾಗೂ 42 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿವೆ.
ಆಸಕ್ತ ಅಭ್ಯರ್ಥಿಗಳು ಜೂನ್ 16, 2026ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ 08333-265099 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: PM Kisan 23ne Kantina Hana: ಪಿಎಂ ಕಿಸಾನ್ 23ನೇ ಕಂತಿನ ಹಣ ರಿಲೀಸ್ | ಮಹತ್ವದ ಮಾಹಿತಿ ಇಲ್ಲಿದೆ…
ಅರ್ಜಿ ಸಲ್ಲಿಸುವಾಗ ಅಗತ್ಯವಾಗುವ ದಾಖಲೆಗಳು
ಅಭ್ಯರ್ಥಿಗಳು ಸಾಮಾನ್ಯವಾಗಿ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ:
- ಆಧಾರ್ ಕಾರ್ಡ್ (Aadhaar Card)
- ಎಸ್ಎಸ್ಎಲ್ಸಿ ಅಂಕಪಟ್ಟಿ (SSLC Marks Card)
- ಪಿಯುಸಿ ಅಂಕಪಟ್ಟಿ (ಅಗತ್ಯವಿದ್ದಲ್ಲಿ)
- ಜಾತಿ ಪ್ರಮಾಣ ಪತ್ರ (Caste Certificate)
- ವಾಸಸ್ಥಳ ಪ್ರಮಾಣ ಪತ್ರ (Residence Certificate)
- ಪಾಸ್ಪೋರ್ಟ್ ಗಾತ್ರದ ಭಾವಚಿತ್ರಗಳು (Passport Size Photos)
- ಇತರೆ ಸಂಬಂಧಿತ ದಾಖಲೆಗಳು
ಇದನ್ನೂ ಓದಿ: Subsidy Cow Purchase Scheme: ಮಹಿಳೆಯರಿಗೆ ಹಸು ಖರೀದಿಗೆ ₹56,700 ಸಹಾಯಧನ | ಸರ್ಕಾರದಿಂದ ಅರ್ಜಿ ಆಹ್ವಾನ
ಈಗಲೇ ಅರ್ಜಿ ಹಾಕಿ…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿ (Anganwadi Recruitment 2026) ಮಹಿಳೆಯರಿಗೆ ಉತ್ತಮ ಉದ್ಯೋಗಾವಕಾಶವನ್ನು ಒದಗಿಸುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಮಹಿಳೆಯರು ತಮ್ಮ ಊರಿನಲ್ಲೇ ಸೇವೆ ಸಲ್ಲಿಸುವ ಅವಕಾಶವನ್ನು ಪಡೆಯಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಸಂಬಂಧಿತ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಅಗತ್ಯ. ಈ ಅವಕಾಶವನ್ನು ಕೈಚೆಲ್ಲದೇ ಸದುಪಯೋಗಪಡಿಸಿಕೊಳ್ಳಿ
ಆನ್ಲೈನ್ ಅರ್ಜಿ ಲಿಂಕ್: Apply ಮಾಡಿ

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.