Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ನೇಮಕಾತಿ ಸಂಕ್ಷಿಪ್ತ ವಿವರ
- ನೇಮಕಾತಿ ಇಲಾಖೆ : ಬಾಪೂಜಿ ಪತ್ತಿನ ಸವಾರ್ಥ ಸಹಕಾರಿ ಸಂಘ ನಿಯಮಿತ ಬಾಗಲಕೋಟೆ
- ಹುದ್ದೆಗಳ ಸಂಖ್ಯೆ : 215 ಹುದ್ದೆಗಳು
- ಉದ್ಯೋಗ ಸ್ಥಳ : ಬಾಗಲಕೋಟೆ
- ಅರ್ಜಿ ಸಲ್ಲಿಕೆ : ಆಫ್‌ಲೈನ್ ಮುಖಾಂತರ
ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ವಿವರ
ಒಟ್ಟು 215 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ:
- ಕಿರಿಯ ಸಹಾಯಕರು ಹುದ್ದೆಗಳು : 150
- ಸಿಪಾಯಿ ಹುದ್ದೆಗಳು : 65
ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಿದ ವಿದ್ಯಾರ್ಹತೆ
ಕಿರಿಯ ಸಹಾಯಕರು (Junior Assistant) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು. ಪದವಿ ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಸಿಪಾಯಿ (Peon) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು.
ವಯೋಮಿತಿ ಅರ್ಹತೆಗಳು
ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಗಮವು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಮಿತಿಯಲ್ಲಿರಬೇಕು. ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವವರಿಗೆ ನೇಮಕಾತಿ ನಿಯಮಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 5 ವರ್ಷಾಗಳ ವಯೋಮಿತಿ ಸಡಿಲಿಕೆ ಇರಲಿದೆ.
ನೇಮಕವಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ
- ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗುವವರಿಗೆ ಮಾಸಿಕ 25,248 ರೂಪಾಯಿ ಸಿಗಲಿದೆ.
- ಸಿಪಾಯಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,060 ರೂಪಾಯಿ ಸಿಗಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಮೇಲ್ಕಾಣಿಸಿದ ಸಂಪೂರ್ಣ ಅರ್ಹತೆಗಳನ್ನು ಒಳಗೊಂಡ ಅಭ್ಯರ್ಥಿಗಳು ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.
ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು
ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ
ಸೆಕ್ಟರ್ ನಂ – 25, ಪ್ಲೇಟ್ ನಂ 52-55
10ನೇ ಮುಖ್ಯ ರಸ್ತೆ, ನವನಗರ, ಬಾಗಲಕೋಟ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :
03-07-2024 - ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
03-08-2024