ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ (BCM Free Hostel) ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸುಲಭಗೊಳಿಸಲು ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ ಯೋಜನೆ ಕೂಡ ಒಂದಾಗಿದೆ.
ಈ ಯೋಜನೆಯಡಿಯಲ್ಲಿ ಸರ್ಕಾರವು ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಆಹಾರದ ವ್ಯವಸ್ಥೆಯುಳ್ಳ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ನೀಡುತ್ತಿದೆ. ಗ್ರಾಮಾಂತರ ಪ್ರದೇಶಗಳಿಂದ ನಗರಗಳಿಗೆ ಕಲಿಯುವ ವಿದ್ಯಾರ್ಥಿಗಳಿಗೆ ಇದು ಅತ್ಯಂತ ಉಪಯುಕ್ತ ನರವಾಗಿದೆ.
ಯಾರು ಅರ್ಜಿ ಹಾಕಬಹುದು?
ಈ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಕೆಳಕಂಡ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ:
- ಕರ್ನಾಟಕದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು.
- ಪ್ರವರ್ಗ 1, ಪ್ರವರ್ಗ 2A, 2B, ಪ್ರವರ್ಗ 3A, 3B, ಎಸ್‌ಸಿ (SC), ಎಸ್‌ಟಿ (ST) ಪ್ರವರ್ಗಗಳ ವಿದ್ಯಾರ್ಥಿಗಳು.
- ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪ್ರಥಮ ವರ್ಷದ ಪದವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು.

ಆದಾಯ ಮಿತಿಯ ವಿವರ
ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಹಾಕಬೇಕಾದರೆ ಪೋಷಕರ ಆದಾಯ ಈ ಕೆಳಗಿನಂತೆ ಇರಬೇಕು:
- ಎಸ್‌ಸಿ, ಎಸ್‌ಟಿ, ಪ್ರವರ್ಗ 1: ₹2.5 ಲಕ್ಷದೊಳಗೆ
- ಪ್ರವರ್ಗ 2A, 2B, 3A, 3B: ₹1 ಲಕ್ಷದೊಳಗೆ
ಅರ್ಜಿಗೆ ಅಗತ್ಯವಿರುವ ದಾಖಲೆಗಳು
- ಆಧಾರ್ ಕಾರ್ಡ್
- ಎಸ್‌ಎಸ್‌ಪಿ ಐಡಿ (SSP ID)
- ಪೋಷಕರ ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ (Residence Certificate)
- ಹಿಂದಿನ ತರಗತಿಯ ಮಾರ್ಕ್ಸ್ ಕಾರ್ಡ್
- ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಪೋಟೋ
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
- ಅರ್ಜಿ ಆರಂಭದ ದಿನಾಂಕ: 19-ಮೇ-2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 20-ಜೂನ್-2025
ಅರ್ಜಿ ಸಲ್ಲಿಕೆಗೆ ಸಮಯಾವಕಾಶ ಕಡಿಮೆ ಇರುವುದರಿಂದ ವಿದ್ಯಾರ್ಥಿಗಳು ಶೀಘ್ರದಲ್ಲಿ ಅರ್ಜಿ ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕ ಸಮಸ್ಯೆ ಎದುರಾದರೆ ಇಮೇಲ್ bcwdhelpline@gmail.com ಮೂಲಕ ಸಂಪರ್ಕಿಸಿ ಅಥವಾ ನಿಮ್ಮ ಜಿಲ್ಲಾ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೂ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ: 8050770004, 8050770005
ಹಾಸ್ಟೆಲ್ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯಲ್ಲಿ ವಿಳಂಬ ಮಾಡಬಾರದು. ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಸರಿಯಾದ ಮಾಹಿತಿಯನ್ನು ನೀಡುವುದು ಬಹುಮುಖ್ಯವಾಗಿದೆ. ಈ ಯೋಜನೆಯು ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಪೂರಕವಾದ ಮೂಲಸೌಕರ್ಯವನ್ನು ಒದಗಿಸುತ್ತದೆ.
ಅರ್ಜಿ ಲಿಂಕ್: ಅರ್ಜಿ ಸಲ್ಲಿಸಿ