
BDAದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ಭರ್ತಿಗೆ (BDA FDA-SDA Recruitment 2025 ) ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಉಳಿಕೆ ಮೂಲವೃಂದದ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದ 17 ಹುದ್ದೆಗಳು ಸೇರಿ ಒಟ್ಟು 25 ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ ನಡೆಯಲಿದೆ.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.
ಹುದ್ದೆಗಳ ವಿವರ
- ಪ್ರಥಮ ದರ್ಜೆ ಸಹಾಯಕರು (ಪ್ರಥಮ ದರ್ಜೆ ಕೋರ್ಟ್ ಕ್ಲರ್ಕ್ / ರೆವಿನ್ಯೂ ಇನ್ಸ್‌ಪೆಕ್ಟರ್): 04+01=05
- ದ್ವಿತೀಯ ದರ್ಜೆ ಸಹಾಯಕರು: 14+06=20
- ಒಟ್ಟು ಹುದ್ದೆಗಳು: 25

ವಿದ್ಯಾರ್ಹತೆ
ಪ್ರಥಮ ದರ್ಜೆ ಸಹಾಯಕರು (ಪ್ರಥಮ ದರ್ಜೆ ಕೋರ್ಟ್ ಕ್ಲರ್ಕ್ / ರೆವಿನ್ಯೂ ಇನ್ಸ್‌ಪೆಕ್ಟರ್) ಹುದ್ದೆಗಳಿಗೆ ಭಾರತದಲ್ಲಿ ಕಾನೂನುರಿತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಇನ್ನು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ: KEA Recruitment 2025- ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿ | ಕೆಇಎಯಿಂದ ಅರ್ಜಿ ಆಹ್ವಾನ
ವೇತನ ಶ್ರೇಣಿ
- ಪ್ರಥಮ ದರ್ಜೆ ಸಹಾಯಕರು (ಪ್ರಥಮ ದರ್ಜೆ ಕೋರ್ಟ್ ಕ್ಲರ್ಕ್ / ರೆವಿನ್ಯೂ ಇನ್ಸ್‌ಪೆಕ್ಟರ್) ಹುದ್ದೆಗಳಿಗೆ: 44,425 ರೂ. ರಿಂದ 83,700 ರೂ. ವರೆಗೆ
- ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ: 34,100 ರೂ. ರಿಂದ 67,600 ರೂ. ವರೆಗೆ
ವಯೋಮಿತಿ
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಟ ವಯೋಮಿತಿ 18 ವರ್ಷ ಹೊಂದಿರಬೇಕು. ಗರಿಷ್ಟ ವಯೋಮಿತಿಯು ಈ ಕೆಳಕಂಡಂತಿದೆ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷಗಳು ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷಗಳು ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಕರ್ನಾಟಕ ಸರ್ಕಾರ 29-09-2025ರಲ್ಲಿ ನಿರ್ದೇಶಿಸಿರುವಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ
ಈ ಎಲ್ಲಾ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ (Offline-OMR type) ನಡೆಸಲಾಗುತ್ತದೆ. ಬೆಂಗಳೂರು, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಕೊಪ್ಪಳ, ವಿಜಯಪುರ, ತುಮಕೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಲಿವೆ.
ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗುವುದು.
ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಒಂದು ಮೂಲ ಗುರುತಿನ ಚೀಟಿಯೊಂದಿಗೆ (ಪ್ಯಾನ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಆಧಾರ್ ಕಾರ್ಡ್, ಪಾಸ್ಪೋರ್ಟ್, ವೋಟರ್ ಐಡಿ, ಸರ್ಕಾರಿ ನೌಕರರ ಐಡಿ) ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕು. ತಪ್ಪಿದ್ದಲ್ಲಿ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಇದನ್ನೂ ಓದಿ: PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 500 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09 ಅಕ್ಟೋಬರ್ 2025
- ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 14 ನವೆಂಬರ್ 2025
ಪ್ರಮುಖ ಲಿಂಕ್’ಗಳು
- ಅಧಿಸೂಚನೆ (HK): Download
- ಅಧಿಸೂಚನೆ (NON HK): Download
- ಅರ್ಜಿ ಲಿಂಕ್ (HK): Apply Now
- ಅರ್ಜಿ ಲಿಂಕ್ (NON HK): Apply Now
- ಅಧಿಕೃತ ಜಾಲತಾಣ: cetonline.karnataka.gov.in



