ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ.
ಇದನ್ನೂ ಓದಿ: Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ಎರಡು ವರ್ಷಗಳಿಂದ ಸ್ಥಗಿತ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಬಿಪಿಎಲ್ ರೇಷನ್ ಕಾರ್ಡ್’ಗೆ ಸಂಬ೦ಧಿಸಿದ ಪೋರ್ಟಲ್ ಸ್ಥಗಿತಗೊಂಡಿತ್ತು. ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಹಲವರು ಹೊಸ ಬಿಪಿಎಲ್ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂಬ ಕಾರಣದಿಂದ, ಈ ಅರ್ಜಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.
ಆದರೆ, ಇನ್ನೂ ಅರ್ಜಿ ಸಲ್ಲಿಕೆಯ ಪೋರ್ಟಲ್ ಆರಂಭವಾಗಿಲ್ಲ. ಸರ್ಕಾರ ಹಿಂದಿನ ನಿಯಮಗಳ ಪ್ರಕಾರವೇ ಪಡಿತರ ಚೀಟಿಗಳನ್ನು ನೀಡಲು ತೀರ್ಮಾನಿಸಿದ್ದು; ಹೊಸ ಮಾರ್ಗಸೂಚಿ ಜಾರಿಯಾದರೆ, ಅದರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಇದನ್ನೂ ಓದಿ: Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…
ಇವರಿಗೆ ಮಾತ್ರ ಹೊಸ ಕಾರ್ಡ್
ಈಗಾಗಲೇ ರಾಜ್ಯಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸುಮಾರು 2.94 ಲಕ್ಷ ಮಂದಿ ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿದ್ದಾರೆ. ಆದರೆ, ಹೊಸ ಅರ್ಜಿದಾರರರಿಗೆ ಅವಕಾಶವಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಆದರೆ, ಆರೋಗ್ಯ ತುರ್ತು ಇರುವವರಿಗೆ ಹಾಗೂ ಕಾರ್ಮಿಕರಿಗೆ ಮಾತ್ರ ವೆಬ್‌ಸೈಟ್ ತೆರೆದುಕೊಳ್ಳುತ್ತದೆ. ಬಂದ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರ ಶಿಫಾರಸಿನ ಮೇರೆಗೆ ಆಹಾರ ಇಲಾಖೆಯ ಆಯುಕ್ತರು ಅನುಮೋದನೆ ನೀಡಲಿದ್ದಾರೆ.
ಹೊಸ ಬಿಪಿಎಲ್ ಕಾರ್ಡ್’ಗೆ ಬೇಕಾಗುವ ದಾಖಲಾತಿಗಳು
ಸದ್ಯಕ್ಕೆ ಕರ್ನಾಟಕದಲ್ಲಿ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಸೇರಿದಂತೆ ಒಟ್ಟು 1.28 ಕೋಟಿ ಪಡಿತರ ಚೀಟಿಗಳಿವೆ. ಈ ಪಡಿತರ ಚೀಟಿಗಳಡಿ ಸುಮಾರು 4.42 ಕೋಟಿ ಫಲಾನುಭವಿಗಳು ನೋಂದಾಯಿತರಾಗಿದ್ದಾರೆ. ಹೊಸ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ ಸರ್ಕಾರದ ನಿರ್ಧಾರ ಇನ್ನೂ ಸ್ಪಷ್ಟಗೊಂಡಿಲ್ಲ.
ಮೊದಲೇ ಹೇಳಿದಂತೆ, ಕುಟುಂಬದ ವಾರ್ಷಿಕ ಆದಾಯ ರೂ. 1.20 ಲಕ್ಷ ಮಿತಿಯಲ್ಲಿರುವ, ತುರ್ತು ಆರೋಗ್ಯ ಸಮಸ್ಯೆ ಹೊಂದಿರುವ ಅರ್ಹ ವ್ಯಕ್ತಿಗಳು ಮಾತ್ರ ಈ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು: https://ahara.karnataka.gov.in/