ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3,588 ಕಾನ್‌ಸ್ಟೆಬಲ್ ಹುದ್ದೆಗಳಿಗೆ (BSF Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ…
ಗಡಿ ಭದ್ರತಾ ಪಡೆ (BSF) 3,588 ಕಾನ್‌ಸ್ಟೆಬಲ್ ಹಾಗೂ ಟ್ರೇಡ್ಸ್’ಮನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೇನೆಗೆ ಸೇರಬೇಕು ಎಂಬ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ.
ಒಟ್ಟು 3,588 ಹುದ್ದೆಗಳ ಪೈಕಿ 3,406 ಹುದ್ದೆಗಳು ಪುರುಷರಿಗೆ ಹಾಗೂ 182 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಸಂಬಂಧಿತ ಟ್ರೇಡ್’ನಲ್ಲಿ ಐಟಿಐ ಜತೆಗೆ 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ 18 ಮತ್ತು ಗರಿಷ್ಠ 25 ವರ್ಷಗಳನ್ನು ಮೀರಬಾರದು. ನೇಮಕಾತಿ ಮಂಡಳಿ ನಿಯಮಾನುಸಾರ ಮೀಸಲು ವರ್ಗಗಳಲ್ಲಿ ಬರುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಇದಲ್ಲದೆ, ಅಭ್ಯರ್ಥಿಯು ನಿಗದಿತ ದೈಹಿಕ ಅರ್ಹತಾ ಮಾನದಂಡಗಳನ್ನು ಪೂರೈಸುವುದು ಕಡ್ಡಾಯವಾಗಿದೆ.
ಮಾಸಿಕ ವೇತನವೆಷ್ಟು?
ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ.ಗಳ ವರೆಗೆ ವೇತನ ಶ್ರೇಣಿ ನೀಡಲಾಗುತ್ತದೆ. ಇದರೊಂದಿಗೆ, ಸರ್ಕಾರವು ನಿಗದಿಪಡಿಸಿದ ಇತರ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಪ್ರತ್ಯೇಕವಾಗಿ ಒದಗಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಸ್ವೀಕೃತ ಅರ್ಜಿಯನ್ನು ಪರಿಶೀಲಿಸಿ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಇಲ್ಲಿ ಅರ್ಹರಾದವರನ್ನು ದಾಖಲೆ ಪರಿಶೀಲನೆ, ಟ್ರೇಡ್ ಪರೀಕ್ಷೆಗೆ ಹಾಜರುಪಡಿಸಲಾಗುತ್ತದೆ.
ಇದರಲ್ಲಿ ಆಯ್ಕೆಯಾದವರನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಅಂತಿಮವಾಗಿ ಮೂರು ಹಂತದಲ್ಲಿ ತೋರಿದ ಕಾರ್ಯಕ್ಷಮತೆಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪರೀಕ್ಷೆ ಸ್ವರೂಪ ಹೇಗಿರಲಿದೆ?
ಲಿಖಿತ ಪರೀಕ್ಷೆ 1 ಅಂಕದ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಯಾವುದೇ ಋಣಾತ್ಮಕ ಅಂಕಗಳಿರುವುದಿಲ್ಲ. ಪರೀಕ್ಷೆಯ ಅವಧಿ 2 ಗಂಟೆಗಳ ಕಾಲ ಇರಲಿದೆ. ಪ್ರಶ್ನೆ ಪತ್ರಿಕೆ ದ್ವಿಭಾಷಾ ರೂಪದಲ್ಲಿರುತ್ತದೆ. ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಲಭ್ಯವಿದೆ.
ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಅಭ್ಯರ್ಥಿಗಳು rectt.bsf.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. 100 ರೂ.ಗಳ ಅರ್ಜಿ ಶುಲ್ಕವಿದೆ. ಮಹಿಳೆಯರು, ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ಅನ್ವಯವಾಗುವುದಿಲ್ಲ. ಅರ್ಹರು ಆಗಸ್ಟ್ 25ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ಕೇಂದ್ರಗಳು
ಅಭ್ಯರ್ಥಿಯ ವಿವಿಧ ಹಂತದ ಆಯ್ಕೆ ಪ್ರಕ್ರಿಯೆಯು 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅದರಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿರುವ ಬಿಎಸ್‌ಎಫ್ ಫ್ರಂಟಿಯರ್ ಪ್ರಧಾನ ಕಚೇರಿ ಕೇಂದ್ರವನ್ನು ಆಯ್ಕೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 27-07-205
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 25-08-2025