JobsNews

Canara Bank 3500 Apprentice Recruitment 2025- ಕೆನರಾ ಬ್ಯಾಂಕ್ 3500 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

Spread the love

ಪ್ರತಿಷ್ಟಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಪದವೀಧರರಿಂದ (Canara Bank 3500 Apprentice Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಕೆನರಾ ಬ್ಯಾಂಕ್ ದೇಶಾದ್ಯಂತ ಒಟ್ಟು 9,800ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಪದವೀಧರರನ್ನು ದೇಶದ ವಿವಿಧ ಶಾಖೆಗಳಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ (Apprenticeship Training) ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ತರಬೇತಿಗಾಗಿ ದೇಶಾದ್ಯಂತ ಒಟ್ಟು 3,500 ಸ್ಥಾನಗಳನ್ನು ಗುರುತಿಸಿದ್ದು, ಆಯ್ಕೆಯಾದವರಿಗೆ ಒಂದು ವರ್ಷದ ತರಬೇತಿ ನೀಡಲಾಗುತ್ತದೆ. ಯಾವುದೇ ಪದವಿ ಓದಿದವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Eklavya Model Residential Schools Recruitment 2025- ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 7,267 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಕನ್ನಡಿಗರಿಗೆ 591 ಸ್ಥಾನಗಳು

ಕನ್ನಡ ಬಲ್ಲವರಿಗಾಗಿ ಕರ್ನಾಟಕದಲ್ಲಿ 591 ಸ್ಥಾನಗಳನ್ನು ಮೀಸಲಿಡಲಾಗಿದೆ. ಬೇರೆ ರಾಜ್ಯಗಳಿಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾದರೂ, ಆಯಾ ರಾಜ್ಯದ ಸ್ಥಳೀಯ ಭಾಷೆಯನ್ನು ತಿಳಿದಿರಬೇಕು. ಜತೆಗೆ, ಒಂದು ರಾಜ್ಯದ ಸ್ಥಾನಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

ಅಭ್ಯರ್ಥಿಗಳು ಆಯಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ನಿಗದಿ ಮಾಡಲಾಗಿರುವ ಸ್ಥಳೀಯ ಭಾಷಾ ಜ್ಞಾನದ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ 10 ಅಥವಾ 12ನೇ ತರಗತಿಯಲ್ಲಿ ಆಯಾ ಭಾಷೆಯನ್ನು ಅಧ್ಯಯನ ಮಾಡಿದ್ದರೆ ಪರೀಕ್ಷೆಯಿಂದ ವಿನಾಯ್ತಿ ನೀಡಲಾಗುತ್ತದೆ. ಕರ್ನಾಟಕದಲ್ಲಿ ತರಬೇತಿ ಬಯಸುವವರು ಕನ್ನಡ ತಿಳಿದಿರುವುದು ಕಡ್ಡಾಯವಾಗಿದೆ.

ಪ್ರತಿಷ್ಟಿತ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ...
Canara Bank 3500 Apprentice Recruitment 2025
ವಿದ್ಯಾರ್ಹತೆ ಮತ್ತು ವಯೋಮಿತಿ

ಮೊದಲೇ ಹೇಳಿದಂತೆ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, 2022ರ ಜನವರಿ 01 ಹಾಗೂ 2025ರ ಸೆಪ್ಟೆಂಬರ್ 01ರೊಳಗೆ ವ್ಯಾಸಂಗವನ್ನು ಪೂರ್ಣಗೊಳಿಸಿ ಉತ್ತೀರ್ಣರಾಗಿರಬೇಕು.

ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಂದರೆ ಅಭ್ಯರ್ಥಿಗಳು 1997ರ ಸೆಪ್ಟೆಂಬರ್ 1ರ ಹಾಗೂ 2005ರ ಸೆಪ್ಟೆಂಬರ್ 1ರ ನಡುವೆ ಜನಿಸಿರಬೇಕು. ಆಯಾ ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರಲಿದೆ. ಬ್ಯಾಂಕ್ ನಿಯಮಾವಳಿಗಳ ಪ್ರಕಾರ ದೈಹಿಕ ಹಾಗೂ ವೈದ್ಯಕೀಯವಾಗಿ ಸದೃಢವಾಗಿರಬೇಕು.

ಇದನ್ನೂ ಓದಿ: Deepika Scholarship 2025- ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಪ್ರತೀ ವರ್ಷ 30,000 ರೂ. ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ…

15,000 ರೂ. ಸ್ಟೈಪೆಂಡ್

ಅಭ್ಯರ್ಥಿಗಳಿಗೆ ಮಾಸಿಕ 15,000 ರೂ.ಗಳನ್ನು ಸ್ಪೆಪೆಂಡ್ ಮೊತ್ತವಾಗಿ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಪಾಲು 10,500 ರೂ. ಆಗಿದ್ದು, ಇನ್ನುಳಿದ 4,500 ರೂ.ಗಳನ್ನು ಕೇಂದ್ರ ಸರ್ಕಾರದ ಮೂಲಕ ಅಭ್ಯರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. ಕೆಲಸ ನಿರ್ವಹಿಸಿದ ದಿನಗಳಿಗೆ ಅನುಗುಣವಾಗಿ ಈ ಮೊತ್ತ ವ್ಯತ್ಯಾಸವಾಗಬಹುದು.

ನಿಬಂಧನೆಗಳು

ತರಬೇತಿಯ ಅವಧಿ ಒಂದು ವರ್ಷವಾಗಿರಲಿದೆ. ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಆಯ್ದ ಶಾಖೆಗಳ ಕೆಲಸದ ಸ್ಥಳದಲ್ಲಿ ತರಬೇತಿ ನಡೆಯಲಿದೆ. ತರಬೇತಿ ಪೂರ್ಣಗೊಳಿಸಿದವರಿಗೆ ಬ್ಯಾಂಕ್ ಹಾಗೂ ಅಫ್ರೆಂಟೀಸ್ ಶಿಪ್ ಮಂಡಳಿಯಿಂದ ಜಂಟಿ ಪ್ರಮಾಣಪತ್ರ ನೀಡಲಾಗುತ್ತದೆ.

ತರಬೇತಿ ಪೂರ್ಣಗೊಳಿಸಿದವರನ್ನು ಬ್ಯಾಂಕ್‌ನ ಉದ್ಯೋಗಿಗಳೆಂದು ಪರಿಗಣಿಸಲಾಗುವುದಿಲ್ಲ. ಒಂದು ತಿಂಗಳ ಕೆಲಸಕ್ಕೆ ಒಂದು ರಜೆ ನೀಡಲಾಗುತ್ತದೆ. ಒಟ್ಟು ನಾಲ್ಕು ರಜೆಗಳನ್ನು ಮಾತ್ರ ಪಡೆಯಲು ಅವಕಾಶವಿದೆ.

ಇದನ್ನೂ ಓದಿ: HDFC Parivartan Scholarship 2025- 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ | ₹15,000 ರಿಂದ ₹75,000 ವರೆಗೆ ಆರ್ಥಿಕ ನೆರವು

ನೋಂದಣಿ ಹೇಗೆ?

ಅರ್ಜಿ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ರಾಷ್ಟ್ರೀಯ ಅಪ್ರೆಂಟೀಸ್‌ಶಿಪ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು nats.education.gov.in ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಕೆನರಾ ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿ ತರಬೇತಿಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ರಾಜ್ಯವಾರು ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇದಕ್ಕಾಗಿ 12ನೇ ತರಗತಿ ಅಥವಾ ಡಿಪ್ಲೊಮಾ ಹಂತದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗುತ್ತದೆ. ಕನಿಷ್ಠ 60 ಅಂಕಗಳನ್ನು ಗಳಿಸಿರಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ ಶೇ.55 ಅಂಕಗಳನ್ನು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕವೆಷ್ಟು?

ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನುಳಿದವರು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

PM Surya Ghar Scheme- ಮನೆಗೆ ಪಿಎಂ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯೋದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್…


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!